Advertisment

One Nation, One Election.. ಇದು ಮೋದಿ ಸರ್ಕಾರದ ದುಷ್ಟ ಉದ್ದೇಶ ಎಂದ ಸಿದ್ದರಾಮಯ್ಯ, ಡಿಕೆಶಿ ಏನಂದ್ರು..?

author-image
Veena Gangani
Updated On
One Nation, One Election.. ಇದು ಮೋದಿ ಸರ್ಕಾರದ ದುಷ್ಟ ಉದ್ದೇಶ ಎಂದ ಸಿದ್ದರಾಮಯ್ಯ, ಡಿಕೆಶಿ ಏನಂದ್ರು..?
Advertisment
  • ಮೋದಿ ಸರ್ಕಾರದ ನಡೆಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಆಕ್ರೋಶ
  • ಒಂದು ದೇಶ, ಒಂದು ಚುನಾವಣೆ ಬಗ್ಗೆ ಡಿಕೆ ಶಿವಕುಮಾರ್​ ಹೇಳಿದ್ದೇನು?
  • ಒನ್ ನೇಶನ್ ಒನ್ ಎಲೆಕ್ಷನ್‌ಗೆ ಕರ್ನಾಟಕ ಸರ್ಕಾರದಿಂದ ವಿರೋಧ

ಕೇಂದ್ರ ಸರ್ಕಾರ ಮಹತ್ವಾಕಾಂಕ್ಷೆ ಯೋಜನೆಯಲ್ಲಿ ಒನ್​ ನೇಷನ್​ ಒನ್​ ಎಲೆಕ್ಷನ್​ ಕೂಡ ಒಂದು. ಇದೀಗ ದೇಶದಲ್ಲಿ ಒನ್ ನೇಷನ್, ಒನ್ ಎಲೆಕ್ಷನ್ ಜಾರಿಗೆ ಕ್ಯಾಬಿನೆಟ್ ಅಸ್ತು ಎಂದಿದೆ. ಮೋದಿ ಸಂಚಿವ ಸಂಪುಟದ ಒಪ್ಪಿಗೆಯೂ ಸಿಕ್ಕಿದೆ. ಇದೀಗ ಮಸೂದೆ ಮಂಡನೆಯೊಂದೇ ಬಾಕಿ ಇದೆ. ಈ ಮಧ್ಯೆ ವಿರೋಧ ಪಕ್ಷಗಳ ತೀವ್ರ ವಿರೋಧ ವ್ಯಕ್ತಪಡಿಸಿವೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಕೇಂದ್ರ ಸರ್ಕಾರದ ನಿರ್ಧಾರವನ್ನ ಖಂಡಿಸಿದ್ದಾರೆ.

Advertisment

ಇದನ್ನೂ ಓದಿ: ಪ್ರೇಮಿಗಳಿಗಾಗಿ ತಯಾರಾಗಿದೆ ಟು ಇನ್​ ಒನ್​​ ಛತ್ರಿ.. ನಿಮ್ಮ ಪ್ರೇಯಸಿಗಾಗಿ ಖರೀದಿ ಮಾಡಿ!

ವಿರೋಧ ಪಕ್ಷಗಳ ವಿರೋಧದ ನಡುವೆಯೂ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಒನ್ ನೇಷನ್, ಒನ್ ಎಲೆಕ್ಷನ್ ಅಂದ್ರೆ ದೇಶಾದ್ಯಂತ ಒಂದೇ ಬಾರಿಗೆ ಚುನಾವಣೆ ಜಾರಿಗೆ ಸಂಪುಟದಲ್ಲಿ ಒಪ್ಪಿಗೆ ಸಿಕ್ಕಿದ್ದು, ಈ ಬಗ್ಗೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನ್ ವೈಷ್ಣವ್ ಮಾಹಿತಿ ನೀಡಿದ್ದಾರೆ. ದೇಶದಲ್ಲಿ ಒನ್ ನೇಷನ್, ಒನ್ ಎಲೆಕ್ಷನ್ ಜಾರಿಗಾಗಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಯಾಗಿತ್ತು. ಈ ಸಮಿತಿ ಶಿಫಾರಸ್ಸಿಗೆ ಕೇಂದ್ರ ಸರ್ಕಾರದ ಕ್ಯಾಬಿನೆಟ್‌ನಲ್ಲಿ ಒಪ್ಪಿಗೆ ನೀಡಲಾಗಿದೆ. ಈ ಬಗ್ಗೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಮಸೂದೆ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಆದ್ರೆ, ಆರಂಭದಲ್ಲೇ ಒನ್ ನೇಶನ್ ಒನ್ ಎಲೆಕ್ಷನ್‌ಗೆ ಕರ್ನಾಟಕ ಸರ್ಕಾರ ವಿರೋಧ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಸರ್ಕಾರ ಶೀಘ್ರದಲ್ಲೇ ಪತನ ಆಗುತ್ತಾ? ಸ್ಫೋಟಕ ಭವಿಷ್ಯ ನುಡಿದ ಸಿಎಂ ಸಿದ್ದರಾಮಯ್ಯ

Advertisment

‘ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ’

ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ಒಂದು ದೇಶ ಒಂದು ಚುನಾವಣೆ’ ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ಅಲ್ಲದೇ ‘ಅನುಷ್ಠಾನಗೊಳಿಸಲು ಕೂಡಾ ಅಸಾಧ್ಯವಾದುದು’. ಇಂತಹದ್ದೊಂದು ಮಹತ್ವದ ಪ್ರಸ್ತಾವದ ಬಗ್ಗೆ ವಿರೋಧ ಪಕ್ಷಗಳ ಜೊತೆ ಸಮಾಲೋಚನೆಯನ್ನೂ ಮಾಡದೆ ತರಾತುರಿಯಲ್ಲಿ ಅನುಷ್ಠಾನಕ್ಕೆ ತರಲು ಹೊರಟಿರುವುದು ನರೇಂದ್ರ ಮೋದಿ ಸರ್ಕಾರದ ದುಷ್ಠ ಉದ್ದೇಶವನ್ನು ಅನಾವರಣಗೊಳಿಸಿದೆ. ಆಡಳಿತಾರೂಢ ಬಿಜೆಪಿ ಪಕ್ಷದ ಗುಪ್ತ ಅಜೆಂಡಾವನ್ನು ಒಳಗೊಂಡಿರುವ ‘ಒಂದು ದೇಶ ಒಂದು ಚುನಾವಣೆ’ ಪ್ರಸ್ತಾವವನ್ನು ಸಂಸತ್​ನ ಒಳಗೆ ಮತ್ತು ಹೊರಗೆ ನಮ್ಮ ಪಕ್ಷ ಎದುರಿಸಲಿದೆ. ದೇಶದ ಜನಾಭಿಪ್ರಾಯವೂ ‘ಒಂದು ದೇಶ ಒಂದು ಚುನಾವಣೆ’ ವ್ಯವಸ್ಥೆಗೆ ವಿರುದ್ಧವಾಗಿದೆ.

- ಸಿದ್ದರಾಮಯ್ಯ, ಮುಖ್ಯಮಂತ್ರಿ

ಒನ್ ನೇಷನ್ ಒನ್ ಎಲೆಕ್ಷನ್ ಸಾಧ್ಯವೇ ಇಲ್ಲ ಎಂದ ಡಿಕೆಶಿ

ಇತ್ತ ಡಿಸಿಎಂ ಡಿಕೆ ಶಿವಕುಮಾರ್ ಕೂಡಾ ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರೋ ಒನ್ ನೇಷನ್ ಒನ್ ಎಲೆಕ್ಷನ್ ವಿರುದ್ಧ ಕಿಡಿಕಾರಿದ್ದಾರೆ. ಇದೆಲ್ಲಾ ದುಡ್ಡು ಉಳಿಸಲು ಕೇಂದ್ರ ಸರ್ಕಾರ ಹೀಗೆ ಮಾಡ್ತಿದೆ ಎಂದಿದ್ದಾರೆ.

ಬಿಜೆಪಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಸ್ವಾತಂತ್ರ್ಯ ಭಾರತದ ಆರಂಭದಲ್ಲಿ ಏಕ ಚುನಾವಣೆ ವ್ಯವಸ್ಥೆ ಇತ್ತು. ಆದರೆ ಕೆಲವು ರಾಜ್ಯ ಸರ್ಕಾರಗಳು ಅವಧಿಗೂ ಮುನ್ನವೇ ಚುನಾವಣೆಗೆ ಹೋದವು. ಕೆಲವು ಸರ್ಕಾರಗಳು ಪತನವಾದವು. ಏಕ ಚುನಾವಣೆ ವ್ಯವಸ್ಥೆ ಸಂಪೂರ್ಣವಾಗಿ ಹೋಯಿತು. ಹೀಗಿರುವಾಗ ಒಂದೇ ಚುನಾವಣೆ ನಡೆಸಲು ಹೇಗೆ ಸಾಧ್ಯ. ಬಿಜೆಪಿಗೆ ಸಂಸತ್ತಿನಲ್ಲಿ ಅಂತಹ ಬಲ ಇಲ್ಲ. ಹೀಗಿರುವಾಗ ಸರ್ವಪಕ್ಷಗಳ ಸಭೆ ಕರೆದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಈ ಕ್ರಮ ತೆಗೆದುಕೊಳ್ಳಬೇಕಿತ್ತು. ಸುಮ್ಮನೆ ಸಂಪುಟ ಸಭೆಯಲ್ಲಿ ಪ್ರಸ್ತಾವಕ್ಕೆ ಒಪ್ಪಿಗೆ ನೀಡುವುದರಿಂದ ಏನೂ ಆಗುವುದಿಲ್ಲ. ಇದರ ಬದಲಿಗೆ ಮಹಿಳಾ ಮೀಸಲಾತಿಯನ್ನು ಜಾರಿಗೆ ತರುವ ಕೆಲಸವನ್ನಾದರೂ ಮಾಡಲಿ

ಡಿ.ಕೆ. ಶಿವಕುಮಾರ್, ಡಿಸಿಎಂ

Advertisment

ಒಟ್ಟಾರೆ, ತೀವ್ರ ವಿರೋಧದ ನಡುವೆಯೂ ಕೇಂದ್ರ ಸಚಿವ ಸಂಪುಟ ಒನ್​ ನೇಷನ್​, ಒನ್​ ಎಲೆಕ್ಷನ್​ಗೆ ಒಪ್ಪಿಗೆ ನೀಡಿದ್ದು, ಮಸೂದೆ ಮಂಡನೆಯಾಗೋದೊಂದೆ ಬಾಕಿ ಇದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment