newsfirstkannada.com

‘ಏಯ್.. ಹೊಡಿತೀನಿ ನೋಡು..’ ಕೋಪಿಸಿಕೊಂಡು ಕೈಎತ್ತಿದ ಸಿಎಂ ಸಿದ್ದರಾಮಯ್ಯ..! ವಿಡಿಯೋ

Share :

Published January 26, 2024 at 2:35pm

    ಸಂಗೊಳ್ಳಿ ರಾಯಣ್ಣನವರ ಪುಣ್ಯಸಂಸ್ಮರಣಾ ಕಾರ್ಯಕ್ರಮದಲ್ಲಿ ಗರಂ

    ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣರ ಹೆಸರಿಡಲು ಶಿಫಾರಸು

    ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುತ್ತಿದ್ದಾರೆ- ಸಿಎಂ

ಬೆಂಗಳೂರು ಖೋಡೆ ವೃತ್ತದಲ್ಲಿ ಆಯೋಜಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪುಣ್ಯಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದರು. ಈ ವೇಳೆ ರಾಯಣ್ಣ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವಾಗ ಗರಂ ಆದ ಪ್ರಸಂಗ ನಡೆಯಿತು.

ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಸಿದ್ದರಾಮಯ್ಯ ವಾಪಸ್ ಆಗುತ್ತಿದ್ದರು. ಈ ವೇಳೆ ಕಾರ್ಯಕರ್ತನೊಬ್ಬ ಸಿದ್ದರಾಮಯ್ಯರ ಮಾತನಾಡಿಸಲು ಬಂದಿದ್ದಾರೆ. ಆಗ ಮುಖ್ಯಮಂತ್ರಿಗಳು ಕೋಪಿಸಿಕೊಂಡು ಕೈಎತ್ತಿ ಹೊಡೆದು ಬೀಡ್ತೀನಿ ಎಂದು ಸನ್ನೆ ಮಾಡಿದ್ದಾರೆ. ಇಬ್ಬರ ಮಧ್ಯೆ ಏನು ಸಂಭಾಷಣೆ ಆಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ವಿಡಿಯೋ ನ್ಯೂಸ್​ಫಸ್ಟ್​ಗೆ ಲಭ್ಯವಾಗಿದೆ.

ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ಮಾತನಾಡಿರುವ ಸಿದ್ದರಾಮಯ್ಯ.. ಸಮಾಜದ ಬದಲಾವಣೆಗೆ ಒಪ್ಪದ, ಸಮಾನ ಅವಕಾಶಗಳನ್ನು ಒಪ್ಪದ, ಅಸಮಾನತೆಯನ್ನು ಪೋಷಿಸಬೇಕು ಎನ್ನುವವರು ಈಗಲೂ ನಮ್ಮ ನಡುವೆಯೇ ಇದ್ದಾರೆ. ಇಂಥವರು ಬಹಳ ಅಪಾಯಕಾರಿ. ಇವರ ಬಗ್ಗೆ ಎಚ್ಚರದಿಂದ ಇರಬೇಕು. ಸ್ವಾತಂತ್ರ ಪ್ರೇಮಿ, ದೇಶ ಪ್ರೇಮಿ ಸಂಗೊಳ್ಳಿ ರಾಯಣ್ಣನನ್ನು ನಮ್ಮವರೇ ಕುತಂತ್ರದಿಂದ ಬ್ರಿಟಿಷರಿಗೆ ಹಿಡಿದು ಕೊಡಲಾಯಿತು. ರಾಯಣ್ಣ ಕುರುಬ ಸಮುದಾಯದವರು ಎನ್ನುವ ಕಾರಣಕ್ಕೆ ನಾವು ಗೌರವಿಸುವುದಲ್ಲ, ಬದಲಿಗೆ ರಾಯಣ್ಣನ ದೇಶಪ್ರೇಮ ಮತ್ತು ತ್ಯಾಗದ ಕಾರಣದಿಂದಾಗಿ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು, ಗೌರವಿಸಬೇಕು. ಪ್ರತೀ ಮನೆಗಳಲ್ಲೂ ರಾಯಣ್ಣ ಜನಿಸಬೇಕು ಎಂದರು.

Image

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ. ಕೆಂಪೇಗೌಡ ಪ್ರಾಧಿಕಾರ ಮಾಡಿದ್ದು ನಾವೇ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಹೆಸರಿಗೆ ಶಿಫಾರಸ್ಸು ಮಾಡಿದ್ದು ಕೂಡ ನಾವೆಯೇ. ಕೆಂಪೇಗೌಡ, ರಾಯಣ್ಣ, ಬಸವಣ್ಣ, ಕುವೆಂಪು, ಕನಕದಾಸ, ಮಹಾತ್ಮಗಾಂಧಿ, ವಿವೇಕಾನಂದ ಎಲ್ಲ ಮಹಾತ್ಮರ ಆಶಯಗಳು ಸ್ಪೂರ್ಥಿಯಾಗಲಿ ಎನ್ನುವ ಕಾರಣಕ್ಕೆ ಅವರ ಹೆಸರುಗಳನ್ನು ಇಡಲಾಗುತ್ತದೆ. ಆದರೆ ಇವರ ಆಶಯಗಳು ನಾಶ ಆಗಬೇಕು, ಸಂವಿಧಾನ ಇರಬಾರದು, ಅಸಮಾನತೆ ಮುಂದುವರೆಯಬೇಕು, ಯಾರೋ ದುಡಿದಿದ್ದನ್ನು ತಾವು ಕುಳಿತು ತಿನ್ನಬೇಕು ಎಂದು ಬಯಸುವವರು ಈಗಲೂ ನಮ್ಮ ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುತ್ತಿದ್ದಾರೆ. ಅವರ ಬಗ್ಗೆ ತೀವ್ರ ಎಚ್ಚರದಿಂದ ಇರಬೇಕು.

Image

ನಮ್ಮಲ್ಲಿ ಒಬ್ಬ ರಾಜನನ್ನು ಕಂಡರೆ ಇನ್ನೊಬ್ಬರಿಗೆ ಆಗುತ್ತಿರಲಿಲ್ಲ. ಈ ಒಡಕನ್ನು ಬಳಸಿಕೊಂಡು ಘಜ್ನಿ ಮಹಮದ್ ಮತ್ತು ಬ್ರಿಟಿಷರು, ಫ್ರೆಂಚರು ಮುಂತಾದವರು ದಾಳಿ ಮಾಡಿದರು. ದೇಶದ ಅವಕಾಶಗಳು ಸಮಾಜದ ಎಲ್ಲಾ ವರ್ಗದವರಿಗೆ ಹಂಚಿಕೆ ಆಗಬೇಕು, ಸಂಪತ್ತಿನ ಹಂಚಿಕೆ ಆಗಬೇಕು ಎನ್ನುವುದು ನಮ್ಮ ಸಂವಿಧಾನದ ಆಶಯ. ಬಸವಣ್ಣನವರ ಆಶಯವೂ ಅದೇ ಆಗಿತ್ತು. ಕುವೆಂಪು ಅವರ ಆಶಯವೂ ಆಗಿತ್ತು. ಈ ಎಲ್ಲರ ಆಶಯ ರಾಯಣ್ಣನ ಹೋರಾಟದಲ್ಲೂ ಇತ್ತು.

ಕಾರ್ಯಕ್ರಮದಲ್ಲಿ ಆದಿ ಚುಂಚನಗಿರಿ ಮಹಾ ಸಂಸ್ಥಾನದ ಧರ್ಮಗುರು ನಿರ್ಮಲಾನಂದನಾಥ ಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಮಾಜಿ ಸಚಿವ ಎಚ್.ಎಂ.ರೇವಣ್ಣ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಏಯ್.. ಹೊಡಿತೀನಿ ನೋಡು..’ ಕೋಪಿಸಿಕೊಂಡು ಕೈಎತ್ತಿದ ಸಿಎಂ ಸಿದ್ದರಾಮಯ್ಯ..! ವಿಡಿಯೋ

https://newsfirstlive.com/wp-content/uploads/2024/01/SIDDARAMIAH-5.jpg

Load More