newsfirstkannada.com

SSLC ಪರೀಕ್ಷೆಯಲ್ಲಿ ಫಸ್ಟ್.. ಅಂಕಿತಾ ಓದಿದ ಶಾಲೆಗೆ 1 ಕೋಟಿ ರೂ. ಘೋಷಿಸಿದ ಸಿಎಂ ಸಿದ್ದರಾಮಯ್ಯ

Share :

Published May 14, 2024 at 9:17pm

  ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ

  ಬಾಗಲಕೋಟೆ ಅಂಕಿತಾ ಸಾಧನೆಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

  ಅಂಕಿತಾ ಮುಂದಿನ‌ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂಪಾಯಿ ನೆರವು ಕೊಟ್ಟ ಸಿಎಂ

ಬೆಂಗಳೂರು: ಈ ವರ್ಷದ SSLC ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್ ಬಂದಿದ್ದಾರೆ. 625ಕ್ಕೆ 625 ಅಂಕ ಪಡೆಯುವ ಮೂಲಕ ಇಡೀ ನಾಡಿಗೆ ಕೀರ್ತಿ ತಂದಿದ್ದಾರೆ. ಅಂಕಿತಾ ಅವರ ಈ ಸಾಧನೆಗೆ ಸಿಎಂ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಶಾಲೆಯ ಪ್ರತಿಭೆ.. SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಫಸ್ಟ್ ಬಂದ ಅಂಕಿತಾ ಕನಸು ಏನು ಗೊತ್ತಾ? 

SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕುಮಾರಿ ಅಂಕಿತ ಹಾಗೂ ದ್ವಿತೀಯ Rank ಪಡೆದ ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸನ್ಮಾನಿಸಿದರು. ಮುಂದಿನ ವಿದ್ಯಾಭ್ಯಾಸ ಯಶಸ್ವಿಯಾಗಿ ಸಾಗಲಿ ಎಂದು ಮುಖ್ಯಮಂತ್ರಿಗಳು ಶುಭ ಹಾರೈಸಿದರು.‌

ಸಿಎಂ ಸಿದ್ದರಾಮಯ್ಯ ಸರ್ಕಾರಿ ನಿವಾಸ ಕಾವೇರಿಯಲ್ಲಿ ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಅಂಕಿತಾ ಹಾಗೂ 623 ಅಂಕ ಪಡೆದು ಮೂರನೇ ಸ್ಥಾನ ಪಡೆದ ಮಂಡ್ಯದ ಕನ್ನಲಿ ಗ್ರಾಮದ ನವನೀತ್​ಗೂ ಅಭಿನಂದನೆ ಸಲ್ಲಿಸಲಾಯಿತು. ಅಂಕಿತ ಮತ್ತು ನವನೀತ್ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ, ಪೋಷಕರನ್ನೂ ಅಭಿನಂದಿಸಿದರು. ಮುಂದಿನ‌ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ ಗೆ 3 ಲಕ್ಷ ರೂಗಳ ನೆರವನ್ನು ಸಿಎಂ ಘೋಷಿಸಿದರು. ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ ಒಂದು ಕೋಟಿ ರೂ. ಹಾಗೂ ನವನೀತ್ ವ್ಯಾಸಂಗ ಮಾಡಿದ ಶಾಲೆಯ ಅಭಿವೃದ್ಧಿಗೆ 50 ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡುವುದಾಗಿ ಸಿಎಂ ತಿಳಿಸಿದರು.

ಇದನ್ನೂ ಓದಿ: ರಾತ್ರಿಯಿಡೀ ನಿದ್ದೆಗೆಟ್ಟು ಓದಿಲ್ಲ.. 625/625 ಪಡೆದ SSLC ಟಾಪರ್‌ ಅಂಕಿತಾ ಹೇಳಿದ್ದೇನು ಗೊತ್ತಾ? 

ಮುಖ್ಯಮಂತ್ರಿಗಳಿಂದ ಸನ್ಮಾನ ಸ್ವೀಕರಿಸುವ ಸಂದರ್ಭದಲ್ಲಿ ಉಪಸ್ಥಿತರಿದ್ದ ಪೋಷಕರು ಸರ್ಕಾರದ ನೆರವಿಗೆ ಧನ್ಯತೆ ಅರ್ಪಿಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆ ನನ್ನ ಕಲ್ಪನೆ. 1994 ರಲ್ಲಿ ಉಪ ಮುಖ್ಯಮಂತ್ರಿ ಆಗಿದ್ದಾಗ ಈ ಶಾಲೆಗಲಿಗೆ ಚಾಲನೆ ನೀಡಲಾಯಿತು ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಮುಖ್ಯಮಂತ್ರಿಗಳಿಂದ ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ಕುಮಾರಿ ಅಂಕಿತ, ಸಾರ್ ನಿಮ್ಮ ಸಾಧನೆಗಳು, ನಿಮ್ಮ ಮಾತುಗಳು ನನ್ನ ಈ ಯಶಸ್ಸಿಗೆ ಪ್ರೇರಣೆ ಮತ್ತು ಪ್ರೋತ್ಸಾಹ ನೀಡಿದವು ಎಂದು ತಿಳಿಸಿದರು. ಮುಂದೆ ಐಎಎಸ್ ಅಧಿಕಾರಿ ಆಗಬೇಕೆಂಬ ಬಯಕೆಯನ್ನು ಅಂಕಿತಾ ವ್ಯಕ್ತಪಡಿಸಿದರು. ಪಿಯುಸಿ ದಾಖಲಾತಿ ಸೇರಿದಂತೆ ಮುಂದಿನ ವಿದ್ಯಾಭ್ಯಾಸಕ್ಕೆ ನೆರವು ಒದಗಿಸುವುದಾಗಿ ಸಿಎಂ ಭರವಸೆ ನೀಡಿದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

SSLC ಪರೀಕ್ಷೆಯಲ್ಲಿ ಫಸ್ಟ್.. ಅಂಕಿತಾ ಓದಿದ ಶಾಲೆಗೆ 1 ಕೋಟಿ ರೂ. ಘೋಷಿಸಿದ ಸಿಎಂ ಸಿದ್ದರಾಮಯ್ಯ

https://newsfirstlive.com/wp-content/uploads/2024/05/Siddaramaiah-SSLC-Rank-Students-1.jpg

Load More