‘ಡೇರ್ ಡೆವಿಲ್ ಮುಸ್ತಫಾ’ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಿದ ರಾಜ್ಯ ಸರ್ಕಾರ
ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಕಥೆಯಾಧಾರಿತ ಸಿನಿಮಾಗೆ ಪ್ರೋತ್ಸಾಹ
ನಿರ್ದೇಶಕ ಶಶಾಂಕ್ ನಿರ್ದೇಶನದಲ್ಲಿ ಮೂಡಿ ಬಂದ ಸಿನಿಮಾಗೆ ಸಖತ್ ರೆಸ್ಪಾನ್ಸ್
‘ಡೇರ್ ಡೆವಿಲ್ ಮುಸ್ತಫಾ’ ಸಿನಿಮಾ ತೆರೆಗೆ ಬಂದು ಮೂರು ವಾರಗಳು ಕಳೆದಿದೆ. ಈಗಾಗಲೇ ಒಳ್ಳೆಯ ರೆಸ್ಪಾನ್ಸ್ ಈ ಸಿನಿಮಾಗೆ ಸಿಕ್ಕಿದೆ. ಕನ್ನಡದ ಜನಪ್ರಿಯ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಕತೆಯಾಧಾರಿತ ಸಿನಿಮಾ ಇದಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ‘ಡೇರ್ ಡೆವಿಲ್ ಮುಸ್ತಾಫಾ’ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಆದೇಶ ಹೊರಡಸಿದ್ದಾರೆ.
ಟ್ವಿಟ್ಟರ್ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ತಮ್ಮ ಬರಹ ಮತ್ತು ಬದುಕಿನ ಮೂಲಕ ಒಂದಿಡೀ ತಲೆಮಾರಿನ ಜನರನ್ನು ಪ್ರಭಾವಿಸಿದ ಹಾಗೂ ಪ್ರಭಾವಿಸುತ್ತಲೇ ಇರುವ ಕನ್ನಡದ ಜನಪ್ರಿಯ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ಕತೆಯಾಧಾರಿತ ‘ಡೇರ್ ಡೆವಿಲ್ ಮುಸ್ತಫಾ’ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿ ಆದೇಶಿಸಿದ್ದೇನೆ. ಇಂದಿನ ಕಾಲಘಟಕ್ಕೆ ಬೇಕಿರುವುದು ಸೌಹಾರ್ದತೆ, ಪ್ರೀತಿ, ವಿಶ್ವಾಸಗಳ ಬುನಾದಿಯ ಮೇಲೆ ಸಮಾಜ ಕಟ್ಟುವ ಮನಸುಗಳು. ಇಂಥದ್ದೊಂದು ಕಾರ್ಯಕ್ಕೆ ಕೈಹಾಕಿದ ಚಿತ್ರತಂಡಕ್ಕೆ ಅಭಿನಂದನೆಗಳು. ದ್ವೇಷ ಅಳಿಸಿ, ಪ್ರೀತಿ ಹಂಚುವ ಜನರಿಗೆ ನಮ್ಮ, ನಿಮ್ಮೆಲ್ಲರ ಬೆಂಬಲ ಇರಲಿ ಎಂದು ಟ್ವೀಟ್ ಮಾಡಿದ್ದಾರೆ.
ತಮ್ಮ ಬರಹ ಮತ್ತು ಬದುಕಿನ ಮೂಲಕ ಒಂದಿಡೀ ತಲೆಮಾರಿನ ಜನರನ್ನು ಪ್ರಭಾವಿಸಿದ ಹಾಗೂ ಪ್ರಭಾವಿಸುತ್ತಲೇ ಇರುವ ಕನ್ನಡದ ಜನಪ್ರಿಯ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ಕತೆಯಾಧಾರಿತ "ಡೇರ್ ಡೆವಿಲ್ ಮುಸ್ತಫಾ" ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿ ಆದೇಶಿಸಿದ್ದೇನೆ.
ಇಂದಿನ ಕಾಲಘಟಕ್ಕೆ ಬೇಕಿರುವುದು ಸೌಹಾರ್ದತೆ, ಪ್ರೀತಿ, ವಿಶ್ವಾಸಗಳ ಬುನಾದಿಯ…
— Siddaramaiah (@siddaramaiah) June 15, 2023
ಸದ್ಯ ಸಾಂಡಲ್ವುಡ್ ಪರೆದೆಯ ಮೇಲೆ ಈ ಸಿನಿಮಾ ಸದ್ದು, ಸುದ್ದಿ ಎರಡನ್ನೂ ಮಾಡಿದೆ. ನಿರ್ದೇಶಕ ಶಶಾಂಕ್ ಸೋಗಲ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದೆ. ಸಿನಿ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದೆ.
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ