ಚಿನ್ನಸ್ವಾಮಿ ಕಾಲ್ತುಳಿತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

author-image
admin
Updated On
ಚಿನ್ನಸ್ವಾಮಿ ಕಾಲ್ತುಳಿತ: ಮೃತರ ಕುಟುಂಬಕ್ಕೆ ₹10 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
Advertisment
  • ದುರಂತದಲ್ಲಿ 11 ಜನ ಮೃತಪಟ್ಟಿದ್ದು, 47 ಮಂದಿ ಗಾಯಗೊಂಡಿದ್ದಾರೆ
  • ಚಿನ್ನಸ್ವಾಮಿ ಸ್ಟೇಡಿಯಂ ದುರಂತಕ್ಕೆ ಸರ್ಕಾರ ಬಹಳ ದುಃಖ ವ್ಯಕ್ತಪಡಿಸುತ್ತೆ
  • ವಿಧಾನಸೌಧದ ಕಾರ್ಯಕ್ರಮದ ವೇಳೆ ಯಾವುದೇ ದುರಂತ ಆಗಿಲ್ಲ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ನಡೆದ ಕಾಲ್ತುಳಿತ, ನೂಕು ನುಗ್ಗಲು ಘಟನೆಗೆ ಸಿಎಂ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ. ತುರ್ತು ಸುದ್ದಿಗೋಷ್ಟಿ ನಡೆಸಿದ ಮಾತನಾಡಿದ ಅವರು ಚಿನ್ನಸ್ವಾಮಿ ಸ್ಟೇಡಿಯಂ ದುರಂತದಲ್ಲಿ 11 ಜನ ಮೃತಪಟ್ಟಿದ್ದಾರೆ. 47 ಜನ ಗಾಯಾಗಳಿಗೆ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದಿದ್ದಾರೆ.

RCB ವಿಜಯೋತ್ಸವ ಸಂಭ್ರಮದ ವೇಳೆ ಇಂತಹ ದುರಂತ ನಡೆಯಬಾರದಿತ್ತು. ಸರ್ಕಾರ ಬಹಳ ದುಃಖ ವ್ಯಕ್ತಪಡಿಸುತ್ತೆ. ನಾನು ವೈದೇಹಿ, ಬೌರಿಂಗ್ ಆಸ್ಪತ್ರೆಗೆ ಭೇಟಿ ಕೊಟ್ಟು ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದೇನೆ.

publive-image

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 35,000 ವೀಕ್ಷಕರಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಇದೆ. ಆದರೆ ನಮ್ಮ ನಿರೀಕ್ಷೆಗೂ ಮೀರಿ ಜನ‌ ಸೇರಿದ್ದರು. ವಿಧಾನಸೌಧದ ಮುಂದೆ ಒಂದು ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದ ವೇಳೆ ಯಾವುದೇ ದುರಂತ ಆಗಿಲ್ಲ. ಆದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ದುರಂತ ಆಗಿದೆ ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯಿಂದ ಕಾಲ್ತುಳಿತ – ಕರ್ನಾಟಕ ಬಿಜೆಪಿ ವಾಗ್ದಾಳಿ.. 

ಯಾರೂ ಕೂಡ ಇದನ್ನ ನಿರೀಕ್ಷೆ ಮಾಡಿರಲಿಲ್ಲ. ಇದೊಂದು ಅನಿರೀಕ್ಷಿತ ಬೆಳವಣಿಗೆ. 11 ಜನ ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುತ್ತೇವೆ. ಗಾಯಾಳುಗಳಿಗೆ ಚಿಕಿತ್ಸಾ ವೆಚ್ಚವನ್ನೇ ಸರ್ಕಾರವೇ ಭರಿಸಲಿದೆ. ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ನೀಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment