VIDEO: ವೀಲ್ ಚೇರ್‌ನಲ್ಲೇ ವೇದಿಕೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ

author-image
admin
Updated On
VIDEO: ವೀಲ್ ಚೇರ್‌ನಲ್ಲೇ ವೇದಿಕೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ
Advertisment
  • ಬೆಂಗಳೂರಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ
  • ಎಡಗಾಲಿನ ಮಂಡಿ ನೋವಿಗೆ ತುತ್ತಾಗಿರುವ ಸಿಎಂ ಸಿದ್ದರಾಮಯ್ಯ
  • ಸಂಪೂರ್ಣ ವಿಶ್ರಾಂತಿ ಪಡೆಯಲು ಸೂಚಿಸಿದ್ದ ಮಣಿಪಾಲ್ ವೈದ್ಯರು

2025ರ ಇನ್ವೆಸ್ಟ್ ಕರ್ನಾಟಕ, ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಬೆಂಗಳೂರಲ್ಲಿ ಅದ್ಧೂರಿ ಚಾಲನೆ ನೀಡಲಾಗಿದೆ. ಬೆಂಗಳೂರು ಅರಮನೆ ಮೈದಾನದಲ್ಲಿ ಬಹು ನಿರೀಕ್ಷಿತ ಈ ಸಮಾವೇಶಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದು, ಹಲವಾರು ಗಣ್ಯರು ಭಾಗಿಯಾಗಿದ್ದಾರೆ.

publive-image

ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ವೀಲ್ ಚೇರ್‌ನಲ್ಲೇ ಆಗಮಿಸಿದರು. ಸಿಎಂಗೆ ಎಡಗಾಲಿನ ಮಂಡಿ ನೋವಿನ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಹಾಯಕರ ನೆರವಿನೊಂದಿಗೆ ಸಿದ್ದರಾಮಯ್ಯ ವೀಲ್ ಚೇರ್‌ನಲ್ಲೇ ಕಾರ್ಯಕ್ರಮಕ್ಕೆ ಬಂದರು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು 

publive-image

ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಎಡಗಾಲಿನ ಮಂಡಿ ನೋವಿನ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದಿದ್ದರು. ಮಣಿಪಾಲ್ ಆಸ್ಪತ್ರೆಯ ಡಾ. ಸತ್ಯನಾರಾಯಣ ಅವರು ಸಿಎಂ ಸಿದ್ದರಾಮಯ್ಯರ ತಪಾಸಣೆ ನಡೆಸಿ ಸಂಪೂರ್ಣ ವಿಶ್ರಾಂತಿ ಪಡೆಯಲು ಸೂಚಿಸಿದ್ದರು.

publive-image

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಹಿಂದೆ ಲೆಗಮೆಂಟ್ ಶಸ್ತ್ರ ಚಿಕಿತ್ಸೆ ನಡೆದಿದೆ. ಅದೇ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ಮಂಡಿ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ಮಣಿಪಾಲ್ ವೈದ್ಯರು ತಿಳಿಸಿದ್ದರು.

publive-image

ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್, ಡಿಸಿಎಂ ಡಿ.ಕೆ ಶಿವಕುಮಾರ್, ಉದ್ಯಮಿ ಕಿರಣ್ ಮಜುಂದಾರ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment