ವೈಜ್ಞಾನಿಕವಾಗಿ ಜಾತಿ ಗಣತಿ ವರದಿ ತಯಾರಿ, ಅನುಷ್ಠಾನಕ್ಕೆ ಶತಸಿದ್ಧ- ಸಿಎಂ ಸಿದ್ದರಾಮಯ್ಯ ಭರವಸೆ

author-image
Bheemappa
Updated On
ವೈಜ್ಞಾನಿಕವಾಗಿ ಜಾತಿ ಗಣತಿ ವರದಿ ತಯಾರಿ, ಅನುಷ್ಠಾನಕ್ಕೆ ಶತಸಿದ್ಧ- ಸಿಎಂ ಸಿದ್ದರಾಮಯ್ಯ ಭರವಸೆ
Advertisment
  • ಮೇಲ್ವರ್ಗದ ನಾಯಕರ ವಿರೋಧದ ನಡುವೆಯು ವರದಿ ಜಾರಿ
  • ಎಲ್ಲಾ ವರ್ಗಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕತೆ ತಿಳಿಬಹುದು
  • ‘ಜಾತಿ ಗಣತಿ ವೈಜ್ಞಾನಿಕವಾಗಿಯೇ ನಡೆದಿದ್ದು, ಖಂಡಿತ ಜಾರಿ’

ಜಾತಿ ಗಣತಿ.. ಸರ್ಕಾರದ ವಿರುದ್ಧ ಟೀಕೆ ಮಾಡಿದ್ದಾಯಿತು. ಖಂಡನೆಗಳ ಸುರಿಮಳೆಯಲ್ಲಿ ಸಿಎಂ ಸಿದ್ದರಾಮಯ್ಯ ನೆಂದಿದ್ದಾಯಿತು. ಸ್ವಪಕ್ಷದಲ್ಲೇ ಅಪಸ್ವರ ಕೇಳಿ ಬಂದಿದ್ದಾಯಿತು. ಇದೆಲ್ಲದರ ನಡುವೆ ವರದಿ ಸ್ವೀಕರಿಸಿ ಪಕ್ಷಾತೀತವಾಗಿ ಮೇಲ್ವರ್ಗದ ನಾಯಕರನ್ನ ಎದುರು ಹಾಕಿಕೊಂಡ ಸಿದ್ದರಾಮಯ್ಯ ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ ಅನ್ನೋ ಸ್ವರ ನುಡಿಸಿದ್ದಾರೆ.

ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ ಎಂದ ಸಿದ್ದರಾಮಯ್ಯ

ರಾಜ್ಯದಲ್ಲಿ ಜಾತಿ ಗಣತಿ ವಿಚಾರದಲ್ಲಿ ಹೊತ್ತಿದ ಕಿಡಿ, ರಾಜಕೀಯ ಸಮರಕ್ಕೆ ನಾಂದಿ ಹಾಡ್ತಿದೆ. ಪಕ್ಷಾತೀತವಾಗಿ ನಾಯಕರನ್ನ ಎದುರು ಹಾಕಿಕೊಂಡ ಸಿದ್ದರಾಮಯ್ಯಗೆ ಬಿಸಿ ತುಪ್ಪವಾಗಿದೆ. ಹಲವು ಸಮುದಾಯದ ನಾಯಕರು ವರದಿ ಒಪ್ಪಲು ನಿರಾಕರಿಸಿದ್ರೆ, ಅಹಿಂದ ನಾಯಕರು ವರದಿ ಪರ ವಕಾಲತ್ತಿಗೆ ನಿಂತಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡುವೆ ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ ಅಂತಾ ಸಂದೇಶ ಕೊಟ್ಟಿರೋ ಸಿಎಂ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಮುಖಂಡರ ಜೊತೆ ಒನ್​ ಟು ಒನ್​ ಮೀಟಿಂಗ್ ಮಾಡಿದ್ದಾರೆ.

publive-image

ನಿನ್ನೆ ವಿಧಾನಸೌಧದಲ್ಲಿ ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸಿಎಂ, ಜಾತಿ ಗಣತಿಯ ವರದಿ ವೈಜ್ಞಾನಿಕವಾಗಿ ತಯಾರಾಗಿದ್ದು ಸಮಾಜದ ಎಲ್ಲಾ ವರ್ಗಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ತಿಳಿಯಲು ಅನುಕೂಲವಾಗಿದೆ. ಆ ಪ್ರಕಾರ ಸರ್ಕಾರದ ಕಾರ್ಯಕ್ರಮಗಳನ್ನ ರೂಪಿಸಲು ಸಹಕಾರಿಯಾಗುತ್ತದೆ ಎಂದಿದ್ದಾರೆ.

‘ಖಂಡಿತ ಜಾತಿ ಗಣತಿ ಜಾರಿಯಾಗುತ್ತೆ’

ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ಸರ್ಕಾರ ಖಂಡಿತವಾಗಿ ಜಾರಿಗೊಳಿಸುತ್ತದೆ, ಇದರಲ್ಲಿ ಯಾವುದೇ ಸಂಶಯ ಬೇಡ. ಜಾತಿ ಗಣತಿಯ ವರದಿ ವೈಜ್ಞಾನಿಕವಾಗಿ ತಯಾರಾಗಿದ್ದು ಸಮಾಜದ ಎಲ್ಲಾ ವರ್ಗಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ತಿಳಿಯಲು ಅನುಕೂಲವಾಗಿದೆ. ಆ ಪ್ರಕಾರ ಸರ್ಕಾರದ ಕಾರ್ಯಕ್ರಮಗಳನ್ನು ರೂಪಿಸಲು ಸಹಕಾರಿಯಾಗುತ್ತೆ. ಅಸಮಾನತೆ ಹೋಗಬೇಕು, ಜಾತಿ ವ್ಯವಸ್ಥೆಯಿಂದ ನಿರ್ಮಾಣವಾಗಿರುವ ಅಸಮಾನತೆಯಿಂದ ಬಹುಸಂಖ್ಯಾತ ಜನ ಅವಕಾಶ ವಂಚಿತರಾಗಿದ್ದಾರೆ. ಎಲ್ಲರಿಗೂ ಸಮಾನ ಅವಕಾಶ ನೀಡಬೇಕಿದೆ. ತಳ ಸಮುದಾಯವಿರಲಿ, ಮೇಲ್ವರ್ಗವಿರಲಿ ಎಲ್ಲರಿಗೂ ಸಮಾನತೆ ಇರಬೇಕು ಎಂಬ ಅಂಶವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ್ದಾರೆ. ಹಿಂದುಳಿದ ಜಾತಿಗಳಲ್ಲೂ ತಾರತಮ್ಯ- ಅಸಮಾನತೆ ಇದೆ. ಅಲೆಮಾರಿ ಜನಾಂಗಕ್ಕೆ ಉಚಿತ ಶಿಕ್ಷಣದ ಹಕ್ಕು ಒತ್ತಾಯ ಸಮಂಜಸವಾಗಿದೆ. ಈ ಬಾರಿಯ ಆಯವ್ಯಯದಲ್ಲಿ ಅಲೆಮಾರಿ ಜನಾಂಗಕ್ಕೆ ವಿಶೇಷ ಗಮನ ಹರಿಸಲಾಗುತ್ತೆ.

publive-image

ಇನ್ನೂ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದು ಇಷ್ಟಾದರೆ ಸಭೆಯಲ್ಲಾದ ನಿರ್ಧಾರಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ಜೊತೆ ಮಾತನಾಡಿ ಹೇಳಿದ್ದು ಹೀಗೆ..

ಇದೀಗ ಚರ್ಚೆ ಮಾಡಿದ್ದೇವೆ. ಅವರ ಅಭಿಪ್ರಾಯಗಳನ್ನು ಸಲಹೆ, ಕೇಳುತ್ತೇವೆ. ಎಲ್ಲರ ಅಭಿಪ್ರಾಯಗಳನ್ನ ಕೇಳುವುದಕ್ಕೆ ಆಗಲ್ಲ. ಕೆಲವರು ಹೇಳಿದ್ದಾರೆ. ಇನ್ನು ಕೆಲವರು ಲಿಖಿತ ರೂಪದಲ್ಲಿ ತಿಳಿಸಿದ್ದಾರೆ.

ಸಿದ್ದರಾಮಯ್ಯ, ಮುಖ್ಯಮಂತ್ರಿ

ಜಾತಿ ಗಣತಿ ವರದಿ ಸ್ವೀಕರಿಸಿ ಹೋಲ್ಡ್​ನಲ್ಲಿಟ್ಟಿದ್ದ ಸಿದ್ದರಾಮಯ್ಯ, ಈ ಬಜೆಟ್​ ಸಮಯದಲ್ಲೇ ಅನುಷ್ಠಾನಕ್ಕೆ ತರಲು ಮುಂದಾದಂತಿದೆ. ಕ್ಯಾಬಿನೆಟ್​​ ಮುಂದೆ ಜಾತಿ ಗಣತಿ ವರದಿ ಪ್ರಸ್ತಾಪ ಆಗುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಮುಂದಿನ ನಡೆ ಬಗ್ಗೆ ಕುತೂಹಲ ಮೂಡಿಸಿದೆ..

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment