/newsfirstlive-kannada/media/post_attachments/wp-content/uploads/2024/12/SM_KRISHAN_CM_SIDDARAMAIAH.jpg)
ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಹಾಗೂ ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ ಕೃಷ್ಣ (92) ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಇಂದು ನಿಧನರಾಗಿದ್ದಾರೆ. ಸದ್ಯ ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿದ ಕೊಡುಗೆಗೆ ಕರ್ನಾಟಕ ಸದಾ ಋಣಿಯಾಗಿರುತ್ತದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: SM ಕೃಷ್ಣ ಮಂಡ್ಯದ ಯಾವ ವಿಧಾನಸಭಾ ಕ್ಷೇತ್ರದಿಂದ ಗೆದ್ದಾಗ ಮುಖ್ಯಮಂತ್ರಿ ಆಗಿದ್ದರು?
ಸಿಎಂ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಶೇರ್ ಮಾಡಿದ್ದು ಎಸ್.ಎಂ ಕೃಷ್ಣ ಅವರು ಅಜಾತಶತ್ರು, ಮುತ್ಸದ್ದಿ ರಾಜಕಾರಣಿ ಆಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ ನನಗೆ ಮಾರ್ಗದರ್ಶಕರಾಗಿದ್ದ ಅವರು ಸದಾ ನನ್ನ ಹಿತೈಷಿಗಳು ಆಗಿದ್ದರು. ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮಖ ರಾಜಕಾರಣಿಗಳಿಗೆ ಮಾದರಿಯಾಗಿದೆ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ.
ಮುತ್ಸದ್ದಿ… pic.twitter.com/D5ysmhPcaz
— CM of Karnataka (@CMofKarnataka)
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ.
ಮುತ್ಸದ್ದಿ… pic.twitter.com/D5ysmhPcaz— CM of Karnataka (@CMofKarnataka) December 10, 2024
">December 10, 2024
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us