newsfirstkannada.com

Bus Accident: ಬಸ್ ದುರಂತದಲ್ಲಿ 25 ಪ್ರಯಾಣಿಕರ ದಾರುಣ ಸಾವು; ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ

Share :

01-07-2023

    ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ

    ಪ್ರಧಾನಿ ನರೇಂದ್ರ ಮೋದಿಯಿಂದ ಸಂತಾಪ ಸೂಚನೆ

    ಮಧ್ಯರಾತ್ರಿ 1.30ಕ್ಕೆ ಸಂಭವಿಸಿರುವ ಭೀಕರ ದುರಂತ

ಮಹಾರಾಷ್ಟ್ರದಲ್ಲಿ ನಡೆದ ಭೀಕರ ಅಪಘಾತದಲ್ಲಿ 25 ಪ್ರಯಾಣಿಕರು ಸಾವನ್ನಪ್ಪಿ, 8 ಮಂದಿ ಗಾಯಗೊಂಡಿದ್ದಾರೆ. ಬಸ್ ಡಿವೈಡರ್​​ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ದುರಂತ ಸಂಭವಿಸಿದೆ.

ಸಮೃದ್ಧಿ-ಮಹಾಮಾರ್ಗ್​ ಎಕ್ಸ್​​ಪ್ರೆಸ್​​ವೇನಲ್ಲಿ ಮಧ್ಯರಾತ್ರಿ 1.30ಕ್ಕೆ ದುರಂತ ಸಂಭವಿಸಿದೆ. ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಬುಲ್ಧಾನ ಜಿಲ್ಲೆಯಲ್ಲಿ ದುರ್ಘಟನೆ ನಡೆದಿದೆ. ಬಹುತೇಕ ಪ್ರಯಾಣಿಕರು ಮಲಗಿದ್ದರು. ಬಸ್ ಮಗುಚಿ ಬೀಳುತ್ತಿದ್ದಂತೆಯೇ ಬಸ್ಸಿನ ಬಾಗಿಲು ನೆಲಕ್ಕೆ ತಾಗಿ ಕವರ್ ಆಗಿದ್ದರಿಂದ ಯಾರಿಗೂ ಹೊರ ಬರಲು ಆಗಿರಲಿಲ್ಲ. ಹೀಗಾಗಿ ಹಲವು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Bus Accident: ಮತ್ತೊಂದು ಭೀಕರ ಬಸ್ ದುರಂತ.. 25 ಪ್ರಯಾಣಿಕರು ಸ್ಥಳದಲ್ಲೇ ಸಾವು

ಅಪಘಾತದಲ್ಲಿ ಮೃತಪಟ್ಟವರಿಗೆ ಮಹಾರಾಷ್ಟ್ರ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ತಲಾ ಐದು ಲಕ್ಷ ರೂಪಾಯಿ ಪರಿಹಾರವನ್ನು ನೀಡೋದಾಗಿ ಘೋಷಣೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ದುರ್ಘಟನೆಗೆ ಕಬನಿ ಮಿಡಿದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ, ಮಹಾರಾಷ್ಟ್ರದ ಬುಲ್ಧಾನದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 25 ಮಂದಿ ಸಜೀವ ದಹನವಾಗಿರುವ ಸುದ್ದಿ ಕೇಳಿ ಆಘಾತವಾಯಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Bus Accident: ಬಸ್ ದುರಂತದಲ್ಲಿ 25 ಪ್ರಯಾಣಿಕರ ದಾರುಣ ಸಾವು; ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ

https://newsfirstlive.com/wp-content/uploads/2023/07/BUS_ACCIDENT.png

Load More