newsfirstkannada.com

‘ಗ್ಯಾರಂಟಿ’ಗಳಿಂದಲೇ ಲೋಕಸಭಾ ಚುನಾವಣೆ ಎದುರಿಸಲು ನಾವು ಸಿದ್ಧ, ನೀವೂ.. ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು

Share :

02-08-2023

    ಇದು ನಿಮ್ಮ ಅಭಿಪ್ರಾಯವೇ, ಬಿಜೆಪಿ ಪಕ್ಷದ ಅಭಿಪ್ರಾಯವೇ ತಿಳಿಸಿ

    ವರ್ಷಕ್ಕೆ 3 ಗ್ಯಾಸ್ ಸಿಲಿಂಡರ್ ಫ್ರೀ ಕೊಡ್ತೀವಿ ಅಂದಿದ್ದು ಯಾರು..!

    ಮಧ್ಯಪ್ರದೇಶದ ಸರ್ಕಾರ ಉಚಿತ ಯೋಜನೆ ಘೋಷಣೆ ಮಾಡಿಲ್ವಾ?

ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದ ಕರ್ನಾಟಕ ಸರ್ಕಾರದ ಸಾಲ ಹೆಚ್ಚಾಗುತ್ತಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳೂ ಆಗುತ್ತಿಲ್ಲ. ಇದರಿಂದ ಜನರ ಭವಿಷ್ಯ ಅಪಾಯದಲ್ಲಿದೆ ಎಂದಿದ್ದ ಪ್ರಧಾನಿ ಮೋದಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಕೌಂಟರ್ ಕೊಟ್ಟಿದ್ದಾರೆ. ಟ್ವಿಟರ್‌ನಲ್ಲಿ ಸಾಲು, ಸಾಲು ಪ್ರಶ್ನೆ ಕೇಳಿರುವ ಸಿಎಂ ಸಿದ್ದರಾಮಯ್ಯ ಅವರು ಇದೇ ಗ್ಯಾರಂಟಿ ಸ್ಕೀಮ್‌ಗಳನ್ನು ಇಟ್ಟುಕೊಂಡು ಲೋಕಸಭಾ ಚುನಾವಣೆ ಎದುರಿಸಲು ನಾವು ಸಿದ್ಧ ಎಂದು ಸವಾಲು ಹಾಕಿದ್ದಾರೆ.
ಕರ್ನಾಟಕದ ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದ ಖಜಾನೆ ಬರಿದಾಗಲಿದೆ. ಅಭಿವೃದ್ದಿಗೆ ಹಣ ಇಲ್ಲದಂತಾಗಿದೆ ಎಂದು ಪ್ರಧಾನಿ ಮೋದಿ ಅವರು ಕಾಳಜಿ ವ್ಯಕ್ತಪಡಿಸಿದ್ದಾರೆ. ಅದಕ್ಕೆ ಅವರಿಗೆ ಧನ್ಯವಾದಗಳು. ನರೇಂದ್ರ ಮೋದಿಯವರೇ, ಇದು ನಿಮ್ಮ ವೈಯಕ್ತಿಕ ಅಭಿಪ್ರಾಯವೇ, ಪ್ರಧಾನಿಯವರ ಅಭಿಪ್ರಾಯವೇ? ಇಲ್ಲವೆ ಪಕ್ಷದ ಅಭಿಪ್ರಾಯವೇ? ಎನ್ನುವುದನ್ನು ದಯವಿಟ್ಟು ಸ್ಪಷ್ಟಪಡಿಸಬೇಕೆಂದು ವಿನಂತಿ ಮಾಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮಾನ್ಯ ಪ್ರಧಾನಿ ಮೋದಿ ಅವರೇ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವುದಾದರೆ ನಿಮ್ಮ ಮತ್ತು ನಿಮ್ಮ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿ. ಕರ್ನಾಟಕದ ಬಿಜೆಪಿ ನಾಯಕರಿಗೂ ನಮ್ಮ ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕವಾಗಿ ವಿರೋಧಿಸಲು ನಿರ್ದೇಶನ ನೀಡಿ. ಮುಂದಿನ ಲೋಕಸಭಾ ಚುನಾವಣೆಯನ್ನು ಗ್ಯಾರಂಟಿ ಯೋಜನೆಗಳ ವಿಷಯವನ್ನೇ ಮುಂದಿಟ್ಟುಕೊಂಡು ಎದುರಿಸಲು ನಾವು ಸಿದ್ಧರಿದ್ದೇವೆ, ನೀವು ಸಿದ್ಧರಿದ್ದರೆ ಹಾಗೆಂದು ಘೋಷಿಸಿಬಿಡಿ. ಇಲ್ಲಿ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ತಕ್ಷಣ ಜಾರಿಗೊಳಿಸಬೇಕೆಂದು ಕರ್ನಾಟಕದ ಬಿಜೆಪಿ ನಾಯಕರು ಒಂದೇ ಸಮನೆ ನಮ್ಮ ಬೆನ್ನು ಹತ್ತಿದ್ದಾರೆ. ಬಡವರಿಗೆ ನೀಡುವ ಹೆಚ್ಚುವರಿ ಅಕ್ಕಿಯಲ್ಲಿ ಒಂದು ಕಾಳು ಕಡಿಮೆ ಮಾಡಿದರೂ ಹೋರಾಟ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಗುಡುಗುತ್ತಲೇ ಇದ್ದಾರೆ. ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿ ಹಬ್ಬಗಳ ಸಮಯದಲ್ಲಿ ವರ್ಷಕ್ಕೆ ಮೂರು ಗ್ಯಾಸ್ ಸಿಲಿಂಡರ್ ಮತ್ತು ಬಿಪಿಎಲ್ ಕುಟುಂಬಗಳಿಗೆ ಅರ್ಧ ಲೀಟರ್ ನಂದಿನ ಹಾಲು ಉಚಿತವಾಗಿ ನೀಡುತ್ತೇವೆ ಎಂದು ವಿಧಾನಸಭಾ ಚುನಾವಣೆಗೂ ಮುನ್ನ ಬಿಡುಗಡೆಗೊಳಿಸಿದ್ದ ಪ್ರಣಾಳಿಕೆಯಲ್ಲಿ ರಾಜ್ಯ ಬಿಜೆಪಿಯೇ ಭರವಸೆ ನೀಡಿತ್ತು. ಈ ಬಗ್ಗೆ ನಿಮ್ಮ ಅಭಿಪ್ರಾಯ ಏನು ಪ್ರಧಾನಿ ನರೇಂದ್ರ ಮೋದಿಯವರೇ? ಉತ್ತರಿಸಿರಿ ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

ಇದನ್ನೂ ಓದಿ: ‘ಕಾಂಗ್ರೆಸ್ ದೊಡ್ಡ, ದೊಡ್ಡ ಘೋಷಣೆ ಈಗ ಏನಾಗ್ತ್ತಿದೆ’- ಡಿಕೆ ಶಿವಕುಮಾರ್‌ ಹೇಳಿಕೆಗೆ ಟಕ್ಕರ್ ಕೊಟ್ಟ ಪ್ರಧಾನಿ ಮೋದಿ

ವಿಧಾನಸಭಾ ಚುನಾವಣೆ ಎದುರಿಸಲಿರುವ ಮಧ್ಯಪ್ರದೇಶದ ಮುಖ್ಯಮಂತ್ರಿಗಳು ಹೆಣ್ಣುಮಕ್ಕಳ ಖಾತೆಗೆ ಮಾಸಿಕ 1000 ರೂಪಾಯಿ ಜಮೆ ಮಾಡುವ ಲಾಡ್ಲಿ-ಬೆಹನಾ ಯೋಜನೆಯ ಘೋಷಣೆ ಮಾಡಿದ್ದಾರೆ. ಇದನ್ನು 3000 ರೂಪಾಯಿಗೆ ಹೆಚ್ಚಿಸುವ ಭರವಸೆ ನೀಡಿದ್ದಾರೆ. ಇದು ಉಚಿತ ಯೋಜನೆ ಅಲ್ಲವೇ ಪ್ರಧಾನಿ ನರೇಂದ್ರ ಮೋದಿ ಅವರೇ? ಕೇಂದ್ರ ಸರ್ಕಾರದ್ದೇ ಯೋಜನೆಯಾಗಿರುವ ರೈತರ ಖಾತೆಗೆ ವಾರ್ಷಿಕ ಆರು ಸಾವಿರ ರೂಪಾಯಿಗಳನ್ನು ಜಮೆ ಮಾಡುವ ಕಿಸಾನ್ ಸಮ್ಮಾನ್ ಯೋಜನೆಯನ್ನು ನೀವು ಹೇಗೆ ವ್ಯಾಖ್ಯಾನಿಸುತ್ತೀರಿ? ನಾನು 5 KG ಅಕ್ಕಿಯನ್ನು ಹೆಚ್ಚುವರಿಯಾಗಿ ನೀಡಿದರೆ ಅದರಿಂದ ರಾಜ್ಯದ ಖಜಾನೆ ಬರಿದಾಗಲಿದೆ ಎನ್ನುವುದು ನಿಮ್ಮ ಅಭಿಪ್ರಾಯವಾಗಿದ್ದರೆ, ಐದು ಕಿಲೋ ಅಕ್ಕಿಯನ್ನು ಉಚಿತವಾಗಿ ನೀಡುವ ಪಿಎಂ ಗರೀಬ್ ಅನ್ನ ಕಲ್ಯಾಣ ಯೋಜನೆಯನ್ನು ಯಾವ ಗುಂಪಿಗೆ ಸೇರಿಸುತ್ತೀರಿ. ಕೇಂದ್ರ ಸರ್ಕಾರದ್ದೇ ಯೋಜನೆಯಾಗಿರುವ ರೈತರ ಖಾತೆಗೆ ವಾರ್ಷಿಕ ಆರು ಸಾವಿರ ರೂಪಾಯಿಗಳನ್ನು ಜಮೆ ಮಾಡುವ ಕಿಸಾನ್ ಸಮ್ಮಾನ್ ಯೋಜನೆಯನ್ನು ನೀವು ಹೇಗೆ ವ್ಯಾಖ್ಯಾನಿಸುತ್ತೀರಿ? ನಾನು ಐದು ಕಿಲೋ ಅಕ್ಕಿಯನ್ನು ಹೆಚ್ಚುವರಿಯಾಗಿ ನೀಡಿದರೆ ಅದರಿಂದ ರಾಜ್ಯದ ಖಜಾನೆ ಬರಿದಾಗಲಿದೆ ಎನ್ನುವುದು ನಿಮ್ಮ ಅಭಿಪ್ರಾಯವಾಗಿದ್ದರೆ, ಐದು ಕಿಲೋ ಅಕ್ಕಿಯನ್ನು ಉಚಿತವಾಗಿ ನೀಡುವ ಪಿಎಂ ಗರೀಬ್ ಅನ್ನ ಕಲ್ಯಾಣ ಯೋಜನೆಯನ್ನು ಯಾವ ಗುಂಪಿಗೆ ಸೇರಿಸುತ್ತೀರಿ ಎಂದು ಗುಡುಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಗ್ಯಾರಂಟಿ’ಗಳಿಂದಲೇ ಲೋಕಸಭಾ ಚುನಾವಣೆ ಎದುರಿಸಲು ನಾವು ಸಿದ್ಧ, ನೀವೂ.. ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು

https://newsfirstlive.com/wp-content/uploads/2023/07/CM_SIDDARAMAIAH.jpg

Load More