/newsfirstlive-kannada/media/post_attachments/wp-content/uploads/2025/06/SIDDU.jpg)
ಸಿಎಂ ಸಿದ್ದರಾಮಯ್ಯ ಎರಡು ದಿನಗಳ ದೆಹಲಿ ಪ್ರವಾಸದಲ್ಲಿ ಮೊದಲ ದಿನ ಕಾಂಗ್ರೆಸ್ ಹೈಕಮಾಂಡ್, ರಾಷ್ಟ್ರಪತಿ, ಹಾಗೂ ಹಣಕಾಸು ಸಚಿವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಹೈಕಮಾಂಡ್, ಸಿಎಂ ಸಿದ್ದರಾಮಯ್ಯಗೆ ನೀಡಿರುವ ಖಡಕ್ ಸೂಚನೆ ಏನು, ಇನ್ನು ರಾಷ್ಟಪತಿ ಹಾಗೂ ಕೇಂದ್ರ ವಿತ್ತ ಸಚಿವರಿಗೆ ಸಿಎಂ ಸಿದ್ದರಾಮಯ್ಯಮಾಡಿರುವ ಮನವಿ ಏನು ಎಂಬ ಬಗ್ಗೆ ಇಲ್ಲಿದೆ ರಿಪೋರ್ಟ್.
ಇದನ್ನೂ ಓದಿ: ಶಿಗ್ಗಾಂವಿಯಲ್ಲಿ ಗುತ್ತಿಗೆದಾರನ ಬರ್ಬರ ಹತ್ಯೆ.. ಆರೋಪಿಯ ಮನೆಗೆ ಬೆಂಕಿ ಇಟ್ಟು ಆಕ್ರೋಶ..
ಎರಡೂವರೆ ವರ್ಷ ಕಳೀತಾ ಬಂತು.. ರಾಜ್ಯದಲ್ಲಿ ಅಭಿವೃದ್ದಿ ಶೂನ್ಯ ಎಂಬ ಮಾತು ವಿಪಕ್ಷಗಳಿಂದ ಕೇಳಿಬರ್ತಿರುವ ಆರೋಪ. ಇದಕ್ಕೆ ಪುಷ್ಟಿ ನೀಡುವಂತೆ ಸ್ವಪಕ್ಷದ ಶಾಸಕರಿಂದಲೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಬಂದಿದೆ. ಈ ಬೆನ್ನಲ್ಲೇ ದೆಹಲಿ ತಲುಪಿರೋ ಸಿಎಂ ಸಿದ್ದರಾಮಯ್ಯ ಅತೃಪ್ತ ಶಾಸಕರನ್ನು ಮನವೊಲಿಸುವ ಜೊತೆಗೆ ವಿಶೇಷ ಅನುದಾನ ತರುವ ಹೆಜ್ಜೆ ಇರಿಸಿದ್ದಾರೆ.
‘ಕೈ’ ಶಾಸಕರ ಹೇಳಿಕೆಗೆ ‘ಹೈ’ ಗರಂ..!
ಸರ್ಕಾರ ರಚನೆಯಾಗಿ ಎರಡೂವರೆ ವರ್ಷ ಕಳೀತಾ ಬಂದ್ರೂ ಇನ್ನೂ ಟೇಕಾಫ್ ಆಗ್ತಾನೇ ಇದೆ. ಈ ಮಧ್ಯೆ ಸರ್ಕಾರದ ವಿರುದ್ಧ ಸ್ವಪಕ್ಷೀಯ ಶಾಸಕರೇ ಸಿಡಿದೆದ್ದಿದ್ದಾರೆ. ಒಬ್ಬರಾದ ಮೇಲೆ ಒಬ್ಬರಂತೆ ಕ್ಷೇತ್ರಗಳಿಗೆ ಅನುದಾನಕ್ಕಾಗಿ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕ್ತಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಈ ಬಗ್ಗೆ ಚರ್ಚಿಸಿದ್ದಾರೆ. ಸರ್ಕಾರದ ವಿರುದ್ಧ ಶಾಸಕರ ಹೇಳಿಕೆಗೆ ಹೈಕಮಾಂಡ್ ಗರಂ ಆಗಿದ್ದು, ಶಾಸಕರು ಬಹಿರಂಗ ಹೇಳಿಕೆಗಳನ್ನು ನೀಡುತ್ತಿರುವುದು ಸರಿಯಲ್ಲ, ಶಾಸಕರನ್ನು ಕರೆದು ಮಾತನಾಡುವಂತೆ ಸಿಎಂ ಸಿದ್ದರಾಮಯ್ಯಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಡಕ್ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಶಿಗ್ಗಾಂವಿಯಲ್ಲಿ ಗುತ್ತಿಗೆದಾರನ ಬರ್ಬರ ಹತ್ಯೆ.. ಆರೋಪಿಯ ಮನೆಗೆ ಬೆಂಕಿ ಇಟ್ಟು ಆಕ್ರೋಶ..
ರಾಷ್ಟ್ರಪತಿ ಮುರ್ಮು ಭೇಟಿಯಾದ ಸಿಎಂ ಸಿದ್ದು
ಈ ಮಧ್ಯೆ ನಿನ್ನೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಮಾಡಿದ್ದ ಸಿಎಂ ಸಿದ್ದರಾಮಯ್ಯ, ರಾಜ್ಯ ಶಾಸಕಾಂಗ ಅನುಮೋದಿಸಿದ್ದ ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡುವಂತೆ ಕೋರಿದ್ದಾರೆ. ಆ ಬಿಲ್ಗಳು ಯಾವ್ಯಾವು ಅನ್ನೋ ಬಗ್ಗೆ ವಿವರಣೆ ನೀಡಿದ್ದಾರೆ.
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ, ಅನುಮೋದನೆಗೆ ಬಾಕಿ ಇರುವ ವಿಧೇಯಕಗಳ ಬಗ್ಗೆ ಸಮಾಲೋಚನೆ ನಡೆಸಿದೆ.
ಈ ವೇಳೆ ರಾಜ್ಯದ ಹೆಮ್ಮೆಯ ಗುರುತಾದ ಮೈಸೂರು ಪೇಟ ಹಾಗೂ ಶ್ರೀಗಂಧದ ಸ್ಮರಣಿಕೆ ನೀಡಿ ಗೌರವಿಸಿದೆ. pic.twitter.com/ZhMNCf1tJ5— Siddaramaiah (@siddaramaiah) June 24, 2025
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಭೇಟಿಯಾಗಿ ಚರ್ಚೆ
ಈ ನಡುವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ರನ್ನೂ ಕೂಡ ಭೇಟಿ ಮಾಡಿದ್ದ ಸಿಎಂ ಸಿದ್ದರಾಮಯ್ಯ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ಕುರಿತು ಮನದಟ್ಟು ಮಾಡಿದ್ದಾರೆ. ರಾಜಧಾನಿ ಬೆಂಗಳೂರು ವಿಶ್ವಮಟ್ಟದಲ್ಲಿ ಬೆಳೆಯುತ್ತಿದ್ದು ವಿಶೇಷ ಅನುದಾನ ನೀಡಬೇಕು ಅಂತ ಮನವಿ ಮಾಡಿದ್ದಾರೆ.
ಇಂದು ಪ್ರಧಾನಿ ಮೋದಿ ಭೇಟಿ ಸಾಧ್ಯತೆ
ಇವತ್ತು ಪ್ರಧಾನಿ ಮೋದಿ ಭೇಟಿಯಾಗುವ ಸಾಧ್ಯತೆ ಇದೆ. ಈ ವೇಳೆ ಅನುದಾನ ಬಿಡುಗಡೆ ಕುರಿತು ಚರ್ಚೆ ನಡೆಸಲಿದ್ದಾರೆ ಎಲ್ಲಾಗಿದೆ. ರಾಜ್ಯಕ್ಕೆ ವಿಶೇಷ ಅನುದಾನ ಬಿಡುಗಡೆಗೂ ಮನವಿ ಮಾಡಲಿದ್ದಾರೆ. ಒಟ್ಟಾರೆ, ಈ ಬಾರಿಯ ದೆಹಲಿ ಪ್ರವಾಸದಲ್ಲಿ ಸಂಪುಟ ಪುನಾರಚನೆ, ಸಂಪುಟ ಸರ್ಜರಿ, ನಿಗಮ ಮಂಡಳಿ ನೇಮಕದ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. ಪಕ್ಷದೊಳಗಿನ ಅಸಮಾಧಾನ ಶಮನ ಜೊತೆ ರಾಜ್ಯಕ್ಕೆ ವಿಶೇಷ ಅನುದಾನ ಕೊಡಿಸುವ ನಿಟ್ಟಿನಲ್ಲಿ ದೆಹಲಿ ಪ್ರವಾಸ ಇಂದು ಅಂತ್ಯ ಆಗಲಿದ್ದು ಇಂದು ಸಿಎಂ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಇದನ್ನೂ ಓದಿ: ಕಲಬುರಗಿಯಲ್ಲಿ ತ್ರಿವಳಿ ಕೊಲೆ.. ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ