newsfirstkannada.com

ಅಮರನಾಥ ಯಾತ್ರೆ: ಸಂಕಷ್ಟಕ್ಕೆ ಸಿಲುಕಿದ 80 ಮಂದಿ ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ದು ಆದೇಶ

Share :

08-07-2023

    ಅಮರನಾಥ ಯಾತ್ರೆಗೆ ತೆರಳಿದ್ದ 80 ಮಂದಿ ಕನ್ನಡಿಗರು

    ಗುಡ್ಡ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ ಯಾತ್ರಾರ್ಥಿಗಳು

    ಸಂಕಷ್ಟದಲ್ಲಿರೋ ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ದು ಆದೇಶ

ಬೆಂಗಳೂರು: ಪವಿತ್ರ ಅಮರನಾಥ ಯಾತ್ರೆಗೆ ತೆರಳಿ ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್​ ಮಾಡಿರುವ ಸಿಎಂ ಸಿದ್ದರಾಮಯ್ಯ, ಗದಗ್​ನಿಂದ ತೆರಳಿರುವ 23 ಮಂದಿ ಸೇರಿ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಮಂದಿರದಿಂದ 6 km ದೂರದಲ್ಲಿರುವ ಪಂಚತಾರ್ನಿ ಟೆಂಟ್​​​ನಲ್ಲಿ ಸಿಲುಕಿದ್ದಾರೆ ಎನ್ನುವ ಮಾಹಿತಿ ಲಭ್ಯವಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ರಕ್ಷಣಾ ಕಾರ್ಯ ಕೈಗೊಂಡು, ಎಲ್ಲರನ್ನೂ ಸುರಕ್ಷಿತವಾಗಿ ವಾಪಸು ಕರೆತರುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಗದಗದಿಂದ 23 ಮಂದಿ ಸೇರಿ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಯಾತ್ರೆಗೆ ಹೋಗಿದ್ದರು. ದೇವರ ದರ್ಶನ ಪಡೆದು ವಾಪಸ್ಸಾಗುವಾಗ ಗುಡ್ಡ ಕುಸಿತವಾಗಿ ರಸ್ತೆ ಮಧ್ಯೆಯೇ ಸಿಲುಕಿದ್ದಾರೆ. ರಸ್ತೆ ಮಧ್ಯೆ ಸಿಲುಕಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲು ರಕ್ಷಣಾ ಸಿಬ್ಬಂದಿ ಹರಸಾಹಸ ಪಡುತ್ತಿದೆ ಎಂದು ತಿಳಿದು ಬಂದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅಮರನಾಥ ಯಾತ್ರೆ: ಸಂಕಷ್ಟಕ್ಕೆ ಸಿಲುಕಿದ 80 ಮಂದಿ ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ದು ಆದೇಶ

https://newsfirstlive.com/wp-content/uploads/2023/07/Amaranath.jpg

Load More