ಮುಡಾ ಕೇಸ್​ನಲ್ಲಿ ಲೋಕಾಯುಕ್ತದಿಂದ ಕ್ಲೀನ್ ಚಿಟ್; ಸಿಎಂ ಸಿದ್ದರಾಮಯ್ಯ ಮತ್ತಷ್ಟು ಸ್ಟ್ರಾಂಗ್..!

author-image
Ganesh
Updated On
ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸರ್ಕಾರದಿಂದ ಶುಭ ಸುದ್ದಿ; ಏನದು?
Advertisment
  • ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯಗೆ ಫುಲ್​ ರಿಲೀಫ್​
  • ವರದಿಯಲ್ಲಿ ಸಿಎಂ ಪಾತ್ರವಿಲ್ಲ ಎಂಬುದರ ಬಗ್ಗೆ ಉಲ್ಲೇಖ
  • ಈ ಮೂಲಕ ಸಿದ್ದರಾಮಯ್ಯರ ವಿರೋಧಿಗಳ ಬಾಯಿಗೆ ಬೀಗ

ಬೆಂಗಳೂರು: ಮುಡಾ ಪ್ರಕರಣದಲ್ಲಿ (MUDA case) ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಲೋಕಾಯುಕ್ತ ಪೊಲೀಸರು ಕ್ಲಿನ್​ಚಿಟ್ ನೀಡಿದ್ದಾರೆ. ಆ ಮೂಲಕ ಸಿದ್ದರಾಮಯ್ಯ ರಾಜಕೀಯವಾಗಿ ಮತ್ತಷ್ಟು ಸ್ಟ್ರಾಂಗ್ ಆಗಿದ್ದಾರೆ.

ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಹಗರಣವು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ತನಿಖೆ ನಡೆಸಿದ್ದ ಲೋಕಾಯುಕ್ತ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಹಾಗೂ ಭಾಮೈದ ಮಲ್ಲಿಕಾರ್ಜುನ ಸ್ವಾಮಿಗೆ ಕ್ಲೀನ್​ಚಿಟ್ ನೀಡಿದೆ.

ಇದನ್ನೂ ಓದಿ: ರೋಹಿತ್- ಗಂಭೀರ್​ ಮಧ್ಯೆ ಟಾಕ್ ವಾರ್.. ವಿಕೆಟ್ ಕೀಪರ್​​, ಸ್ಪಿನ್ನರ್​ಗಾಗಿ ಬಿಗ್​ ಫೈಟ್​

publive-image

ಪ್ರಕರಣದಲ್ಲಿ ಸಿದ್ದರಾಮಯ್ಯರ ಪಾತ್ರ ಇಲ್ಲ ಅಂತಾ ಲೋಕಾಯುಕ್ತ ತಿಳಿಸಿದೆ. ಆ ಮೂಲಕ ಕಾನೂನಾತ್ಮಕ ಹೋರಾಟದಲ್ಲಿ ಸಿದ್ದರಾಮಯ್ಯಗೆ ದೊಡ್ಡ ಗೆಲುವು ಸಿಕ್ಕಿದೆ. ಇನ್ನು, ಲೋಕಾಯುಕ್ತ ಪೊಲೀಸರು ಅಂತಿಮ ತನಿಖಾ ವರದಿಯನ್ನು ಇಂದು ಕೋರ್ಟ್​​ಗೆ ಸಲ್ಲಿಕೆ ಮಾಡಲಿದ್ದಾರೆ. ಪ್ರಕರಣದ ಮೊದಲ ಆರೋಪಿ ಆಗಿರುವ ಸಿಎಂ ಸಿದ್ದರಾಮಯ್ಯ, ಎರಡನೇ ಆರೋಪಿ ಸಿಎಂ ಪತ್ನಿ ಹಾಗೂ ಮೂರನೇ ಆರೋಪಿ ಮಲ್ಲಿಕಾರ್ಜುನ ಸ್ವಾಮಿ ಹಾಗೂ 4ನೇ ಆರೋಪಿ ಭೂಮಿ ಮಾರಾಟ ಮಾಡಿದ್ದ ಜೆ ದೇವರಾಜು ಮೇಲಿನ ಆರೋಪಗಳು ಸಾಕ್ಷ್ಯಾಧಾರ ಕೊರತೆಯಿಂದ ಸಾಬೀತಾಗಿಲ್ಲ. ಈ ಬಗ್ಗೆ ಲೋಕಾಯುಕ್ತ ಪೊಲೀಸರು ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ನೀಡಿದ ನೋಟಿಸ್​ನಲ್ಲಿ ಉಲ್ಲೇಖಿಸಿದ್ದಾರೆ.

ಕ್ಲೀನ್​ ಚಿಟ್ ಬೆನ್ನಲ್ಲೇ ಸಿದ್ದರಾಮಯ್ಯ ಮತ್ತಷ್ಟು ಸ್ಟ್ರಾಂಗ್ ಆಗಿದ್ದಾರೆ. ಆ ಮೂಲಕ ಸಿದ್ದರಾಮಯ್ಯ ವಿರೋಧಿಗಳ ಬಾಯಿಗೆ ಮಾತ್ರವಲ್ಲದೇ ಪ್ರತಿಪಕ್ಷಗಳ ಟೀಕೆಗೂ ಸದ್ಯಕ್ಕೆ ಬ್ರೇಕ್ ಬಿದ್ದಿದೆ. ಅಲ್ಲದೇ ಪಕ್ಷದೊಳಗೆ ಮತ್ತು ಹೊರಗಿನ ವಿರೋಧಿಗಳಿಗೂ ಸಂದೇಶ ರವಾನೆ ಆದಂತಾಗಿದೆ.

ಇದನ್ನೂ ಓದಿ: ಕುಂಭಮೇಳದಲ್ಲಿ ಸ್ನಾನ ಮಾಡಿದವ್ರಿಗೆ ಹೊಸ ಆತಂಕ; ಪಿಸಿಬಿ ವರದಿ ಬಗ್ಗೆ ಏನಂದ್ರು CM ಆದಿತ್ಯನಾಥ್..?

publive-image

ಏನಿದು ಪ್ರಕರಣ..? 

ಮುಡಾ ಪ್ರಕರಣ ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿತ್ತು. ಮುಖ್ಯಮಂತ್ರಿ ಪತ್ನಿ ಒಡೆತನದ್ದು ಎನ್ನಲಾದ ಕೃಷಿ ಭೂಮಿಯನ್ನು ಮುಡಾ ವಶಪಡಿಸಿಕೊಂಡು ಪರ್ಯಾಯವಾಗಿ 14 ನಿವೇಶನಗಳನ್ನು ಪ್ರಮುಖ ಜಾಗದಲ್ಲಿ ಹಂಚಿಕೆ ಮಾಡಿದೆ ಎಂಬುದು ವಿವಾದ. ಈ ಹಂಚಿಕೆ ಪ್ರಕ್ರಿಯೆಯು ಅಕ್ರಮದಿಂದ ಕೂಡಿದೆ. ಪ್ರಕರಣದಲ್ಲಿ ಸಿದ್ದರಾಮಯ್ಯ ಪ್ರಭಾವ ಬೀರಿದ್ದಾರೆ ಎಂದು ಮೂರು ಖಾಸಗಿ ದೂರುಗಳು ರಾಜ್ಯಪಾಲರಿಗೆ ಸಲ್ಲಿಕೆಯಾಗಿತ್ತು. ರಾಜ್ಯಪಾಲರು ಸಿಎಂ ವಿರುದ್ಧ ತನಿಖೆಗೆ ಅನುಮತಿಸಿದ್ದರು. ಪ್ರಕರಣದ ತನಿಖೆಗೆ ಹೈಕೋರ್ಟ್‌ ಕೂಡ ಸಮ್ಮತಿ ಸೂಚಿಸಿತ್ತು. ನಂತರ ಲೋಕಾಯುಕ್ತ ಮೈಸೂರು ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment