ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ
ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಹೊಸ ಲ್ಯಾಪ್ಟಾಪ್
ಅಧಿಕಾರಿಗಳಿಗೆ ಸಿದ್ದರಾಮಯ್ಯ ಕೊಟ್ಟ ಸೂಚನೆಯೇನು?
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ವಿಶ್ವವಿದ್ಯಾಲಯಗಳ ಕುಲಪತಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು.
ಸಭೆ ಬಳಿಕ ಮಾತಾಡಿದ ಸಿಎಂ ಸಿದ್ದರಾಮಯ್ಯ, ವಿ.ವಿ ಗಳಲ್ಲಿರುವ ಎಲ್ಲಾ ಸಮುದಾಯಗಳ ಪ್ರತಿ ವಿದ್ಯಾರ್ಥಿಗೂ ಲ್ಯಾಪ್ ಟಾಪ್ ವಿತರಿಸಬೇಕಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿಯು ಕೈಗಾರಿಕೋದ್ಯಮಿಗಳ ಬೇಡಿಕೆಗೆ ಅನುಗುಣವಾದ ಪಠ್ಯಕ್ರಮ ರೂಪಿಸಿ, ಎಂಜಿನಿಯರಿಂಗ್ ಪದವೀಧರರಿಗೆ ಹೆಚ್ಚಿನ ಉದ್ಯೋಗಾವಕಾಶ ಒದಗಿಸಲು ಅನುವಾಗುವಂತಹ ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಇಂದಿನ ಸಭೆಯಲ್ಲಿ ಸೂಚನೆ ನೀಡಲಾಗಿದೆ ಎಂದರು.
ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಅನ್ನು ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಯೋಜನೆಯಡಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಲ್ಯಾಪ್ ಟಾಪ್ ವಿತರಿಸುವ ಸಂಬಂಧ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆ ಅಡಿ 230 ಕೋಟಿ ರೂ.… pic.twitter.com/QPamELupsJ— CM of Karnataka (@CMofKarnataka) August 21, 2023
ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಅನ್ನು ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಯೋಜನೆಯಡಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಲ್ಯಾಪ್ ಟಾಪ್ ವಿತರಿಸುವ ಸಂಬಂಧ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆ ಅಡಿ 230 ಕೋಟಿ ರೂ. ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಸೂಚಿಸಲಾಗಿದೆ ಎಂದರು.
ಸಭೆಯಲ್ಲಿ ಯಾರು ಭಾಗಿಯಾಗಿದ್ದರು?
ಇನ್ನು, ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ ಸುಧಾಕರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಉನ್ನತ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಆರ್ಥಿಕ ಇಲಾಖೆಯ ಅಪರ ಕಾರ್ಯದರ್ಶಿ ಎಲ್.ಕೆ.ಅತೀಕ್ ಮತ್ತಿತರ ಹಿರಿಯ ಅಧಿಕಾರಿಗಳು, ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳು ಉಪಸ್ಥಿತರಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ