BREAKING: ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ; ಸಿಎಂ ಸಿದ್ದರಾಮಯ್ಯ ಮಹತ್ವದ ನಿರ್ಧಾರ

author-image
admin
Updated On
ಹಾಸನ ಸೆಕ್ಸ್​ ಸ್ಕ್ಯಾಂಡಲ್​​​ ಕೇಸಲ್ಲಿ ನಿಜವಾಗ್ಲೂ ಪ್ರಜ್ವಲ್​ಗೆ ಶಿಕ್ಷೆ ಆಗುತ್ತಾ? ನಿಜಕ್ಕೂ ಸಿಕ್ಕಿ ಬೀಳೋದ್ಯಾರು?
Advertisment
  • ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ SIT ತನಿಖೆಗೆ
  • ಮೇಲ್ನೋಟಕ್ಕೆ ದೌರ್ಜನ್ಯ ಎಸಗಿರುವುದು ಕಾಣುತ್ತಿದೆ ಎಂದ ಸಿದ್ದರಾಮಯ್ಯ
  • ಜೆಡಿಎಸ್‌ ನಾಯಕರಿಗೆ ಬಿಗ್‌ ಶಾಕ್ ಕೊಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ

ಬೆಂಗಳೂರು: ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಈ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ಖುದ್ದು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

publive-image

ಸೋಷಿಯಲ್ ಮೀಡಿಯಾ Xನಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಮೇಲ್ನೋಟಕ್ಕೆ ದೌರ್ಜನ್ಯ ಎಸಗಿರುವುದು ಕಾಣುತ್ತಿದೆ. ಹೀಗಾಗಿ ಪ್ರಕರಣವನ್ನ SIT ತನಿಖೆಗೆ ಕೊಡುವಂತೆ ರಾಜ್ಯ ಮಹಿಳಾ ಆಯೋಗ ಸರ್ಕಾರಕ್ಕೆ ಪತ್ರ ಬರೆದಿತ್ತು. ಈ ಹಿನ್ನೆಲೆ, ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಲು ನಿರ್ಧರಿಸೋದಾಗಿ ಸಿಎಂ ಟ್ವೀಟ್​ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ:ಹಾಸನದಲ್ಲಿ ಪ್ರಜ್ವಲ್ ರೇವಣ್ಣ, ಶ್ರೇಯಸ್‌ ಪಟೇಲ್ ಬೆಂಬಲಿಗರ ಮಾರಾಮಾರಿ; ಓರ್ವನ ಸ್ಥಿತಿ ಗಂಭೀರ 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment