ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಕೇಸ್!
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮಹತ್ವದ ನಿರ್ಧಾರ
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತೆಗೆದುಕೊಂಡ ನಿರ್ಧಾರವೇನು?
ಬೆಂಗಳೂರು: ನಂದಿಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಈ ಸಂಬಂಧ ಸದನದಲ್ಲಿ ಮಾತಾಡಿದ ಸಿಎಂ ಸಿದ್ದರಾಮಯ್ಯ ಅವರು, ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯಲ್ಲಿ ನಡೆದ ಜೈನಮುನಿ ಹತ್ಯೆ ಪ್ರಕರಣ ಅತೀ ಸೂಕ್ಷ್ಮವಾದದ್ದು. ಹೀಗಾಗಿ ಈ ಕೇಸನ್ನು ಸಿಐಡಿಗೆ ಹಸ್ತಾಂತರ ಮಾಡಲಾಗುವುದು ಎಂದರು.
ಏನಿದು ಕೇಸ್?
ಎರಡು ವಾರಗಳ ಹಿಂದೆ ಜುಲೈ 6ನೇ ತಾರೀಕಿನಂದು ಜೈನಮುನಿ ಶ್ರೀ ಕಾಮಕುಮಾರ ನಂದಿ ಮಹಾರಾಜರು ಮಠದಿಂದ ನಾಪತ್ತೆಯಾಗಿದ್ದರು. ಈ ಬೆನ್ನಲ್ಲೇ ಮಠದ ಭಕ್ತರು ಆತಂಕ ವ್ಯಕ್ತಪಡಿಸಿದ್ದರು. ಎಷ್ಟು ಹುಡುಕಿದರೂ ಸಿಗದ ಕಾರಣ ಜೈನಮುನಿ ಪತ್ತೆ ಮಾಡಿಕೊಡಿ ಎಂದು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಬಳಿಕ ತನಿಖೆ ಶುರು ಮಾಡಿದ ಪೊಲಿಸ್ರು ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದರು. ಈ ವೇಳೆ ರಾಯಬಾಗದ ಹೊರವಲಯದ ಬೋರ್‌ವೆಲ್‌ನಲ್ಲಿ ಹತ್ಯೆ ಮಾಡಿ ಜೈನ ಮುನಿಗಳ ಮೃತದೇಹ ಎಸೆದಿದ್ದಾಗಿ ಒಪ್ಪಿಕೊಂಡಿದ್ದರು.
ಇಬ್ಬರು ಅರೆಸ್ಟ್
ಕೇಸ್ ದಾಖಲಿಸಿಕೊಂಡ ಕೆಲವೇ ಗಂಟೆಗಳಲ್ಲಿ ಪೊಲೀಸ್ರು ಇಬ್ಬರನ್ನು ಅರೆಸ್ಟ್ ಮಾಡಿದ್ದರು. ವಿಚಾರಣೆ ವೇಳೆ ಜೈನಮುನಿಗಳ ಕೊಲೆ ರಹಸ್ಯ ಬಯಲಾಗಿತ್ತು. ನಾರಾಯಣ ಮಾಳಿ, ಹುಸೇನ್ ದಲಾಯತ್ ಎಂಬುವರು ಹಂತಕರು.
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ