ಪ್ರಧಾನಿ ಮೋದಿ ಸರ್ಕಾರ ಶೀಘ್ರದಲ್ಲೇ ಪತನ ಆಗುತ್ತಾ? ಸ್ಫೋಟಕ ಭವಿಷ್ಯ ನುಡಿದ ಸಿಎಂ ಸಿದ್ದರಾಮಯ್ಯ

author-image
admin
Updated On
ಪ್ರಧಾನಿ ಮೋದಿ ಸರ್ಕಾರ ಶೀಘ್ರದಲ್ಲೇ ಪತನ ಆಗುತ್ತಾ? ಸ್ಫೋಟಕ ಭವಿಷ್ಯ ನುಡಿದ ಸಿಎಂ ಸಿದ್ದರಾಮಯ್ಯ
Advertisment
  • ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಬೆಂಬಲದಿಂದ ಈ ಸರ್ಕಾರ ರಚನೆ
  • ಕೇಂದ್ರ ಸರ್ಕಾರದ ಭವಿಷ್ಯದ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಸಿಎಂ ಸಿದ್ದು
  • ದಿನ ಕಳೆದಂತೆ ಕುತೂಹಲಕ್ಕೆ ಕಾರಣವಾದ NDA ಸರ್ಕಾರದ ಹೊಂದಾಣಿಕೆ?

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ NDA ಸರ್ಕಾರ ಪೂರ್ಣಾವಧಿ ಪೂರೈಸುವ ಬಗ್ಗೆ ರಾಷ್ಟ್ರ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗಳಾಗುತ್ತಿವೆ. 2024ರ ಲೋಕಸಭಾ ಚುನಾವಣೆಯ ಬಳಿಕ ರಚನೆಯಾದ ಮೈತ್ರಿ ಸರ್ಕಾರದ ಹೊಂದಾಣಿಕೆ ದಿನಕಳೆದಂತೆ ಕುತೂಹಲಕ್ಕೆ ಕಾರಣವಾಗಿದೆ. ಈ ಬೆಳವಣಿಗೆಯ ಮಧ್ಯೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಭವಿಷ್ಯದ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ: ಒಂದು ದೇಶ, ಒಂದು ಚುನಾವಣೆ.. ಮೋದಿ ಸರ್ಕಾರದಿಂದ ಮಹತ್ವದ ನಿರ್ಧಾರ; ಕಂಪ್ಲೀಟ್‌ ಮಾಹಿತಿ ಇಲ್ಲಿದೆ! 

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜಕೀಯ ಬೆಳೆವಣಿಗೆಗಳ ಆಧಾರದ ಮೇಲೆ ಹೇಳುತ್ತಾ ಇದ್ದೀನಿ. ಜೆಡಿಯು ನಿತೀಶ್ ಕುಮಾರ್ ಹಾಗೂ ಟಿಡಿಪಿಯ ಚಂದ್ರಬಾಬು ನಾಯ್ಡು ಬೆಂಬಲದಿಂದ ಈ ಸರ್ಕಾರ ರಚನೆ ಆಗಿದೆ. ಅವರು ಯಾವಾಗ ಬೇಕಾದರು ವಾಪಸ್ ತೆಗೆದುಕೊಳ್ಳಬಹುದು. ಕೇಂದ್ರ ಸರ್ಕಾರ ಶೀಘ್ರದಲ್ಲೇ ಪತನ ಆಗಬಹುದು ಅನ್ನೋ ಮಾತನ್ನು ಹೇಳಿದ್ದಾರೆ.

publive-image

ಇನ್ನು, ನಮ್ಮ ಸರ್ಕಾರ ಇವತ್ತು ಬೀಳುತ್ತೆ, ನಾಳೆ ಬೀಳುತ್ತೆ ಅಂತ ಆರೋಪ ಮಾಡುತ್ತಿದ್ದಾರೆ. 136 ಶಾಸಕರನ್ನು ಗೆದ್ದಿರುವ ಕಾಂಗ್ರೆಸ್ ಸರ್ಕಾರ ಗಟ್ಟಿಯಾಗಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪೂರ್ಣಾವಧಿ ಮುಗಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment