newsfirstkannada.com

ತಮಿಳುನಾಡಿಗೆ ಕಾವೇರಿ ನೀರು ಬಿಡಬೇಕಾ?; ತುರ್ತು ಸರ್ವಪಕ್ಷ ಸಭೆಯಲ್ಲಿ ರಾಜ್ಯ ಸರ್ಕಾರ ಖಡಕ್ ನಿರ್ಧಾರ

Share :

Published September 13, 2023 at 5:01pm

Update September 13, 2023 at 5:02pm

    ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ತುರ್ತು ಸರ್ವಪಕ್ಷ ಸಭೆ

    ತಮಿಳುನಾಡಿನ ಸಿಎಂ ಜೊತೆಗೆ ಮಾತಾಡಿದ್ರೆ ಏನು ಲಾಭ- ಸಿಎಂ

    ನಮ್ಮಲ್ಲಿ ನೀರೇ ಇಲ್ಲ ಎಂದು ಹೇಳೋಣ ಅಂತ ಸಭೆಯಲ್ಲಿ ಚರ್ಚೆ

ಬೆಂಗಳೂರು: ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ರೈತರ ಹಿತ ಕಾಪಾಡೋಣ ಎಂದು ಸರ್ವ ಪಕ್ಷದ ಸಭೆಯಲ್ಲಿ ಒಕ್ಕೂರಲಿನಿಂದ ನಿರ್ಣಯ ತೆಗೆದುಕೊಳ್ಳಲಾಗಿದ್ದು ಇದೇ ವೇಳೆ ಸುಪ್ರೀಂಕೋರ್ಟ್​ ಮೊರೆ ಹೋಗಲು ನಿರ್ಧಾರ ಮಾಡಲಾಗಿದೆ.

ಕಾವೇರಿ ನೀರು ನಿರ್ವಹಣಾ ಸಮಿತಿ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್‌ ನೀರು ಬಿಡುವಂತೆ ಆದೇಶ ಮಾಡಿದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವ ಪಕ್ಷದ ಸಭೆಯಲ್ಲಿ ಎಲ್ಲರೂ ಏಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸರ್ವ ಪಕ್ಷದ ಸಭೆ

ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಇಂದು ದೆಹಲಿಗೆ

ಕಾವೇರಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿ ನಂತರ ಸುಪ್ರೀಂ ಕೋರ್ಡ್​ಗೆ ಅರ್ಜಿ ಹಾಕಿ ವಾಸ್ತವಾಂಶ ತಿಳಿಸಲಾಗುವುದು. ರಾಜ್ಯದ ಹಿತಕ್ಕಾಗಿ ಲೀಗಲ್ ಟೀಮ್ ಜೊತೆಗೆ ಮಾತುಕತೆ ನಡೆಸಲಾಗಿದ್ದು ಇಂದೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ದೆಹಲಿಗೆ ಹೋಗಿ ಮಾತಾಡ್ತಾರೆ. ಗ್ರೌಂಡ್ ರಿಯಾಲಿಟಿ ಬಗ್ಗೆ ಹೇಳಿದ್ದೇವೆ. ತಮಿಳುನಾಡಿನ ಸಿಎಂ ಜೊತೆಗೆ ಮಾತಾಡಿದ್ರೆ ಏನು ಲಾಭ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ತಮಿಳುನಾಡಿಗೆ ನೀರು ಬಿಡಬೇಕಾ ಅಥವಾ ಬೇಡ್ವಾ ಎಂದು ನಿರ್ಧರಿಸುವ ಬದಲು ನಮ್ಮಲ್ಲಿ ನೀರೇ ಇಲ್ಲ ಎಂದು ಹೇಳೋಣ. ಆದೇಶದ ಪ್ರಕಾರ ನಾವು 99 ಟಿಎಂಸಿ ನೀರು ಬಿಡಬೇಕಿತ್ತು. ಆದರೆ ಇದುವರೆಗೂ 37 ಟಿಎಂಸಿ ಮಾತ್ರ ಹೋಗಿದೆ. ನಮಗೆ 70 ಟಿಎಂಸಿ ನೀರು ಬೆಳೆ ರಕ್ಷಣೆಗೆ ಬೇಕು. ಕುಡಿಯುವ ನೀರಿಗೆ 33 ಟಿಎಂಸಿ ನೀರು ಬೇಕು. ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಬೇಕು. ಆದರೆ ನಮ್ಮಲ್ಲಿ ಸಂಗ್ರಹ ಇರುವುದು 53 ಟಿಎಂಸಿ ಮಾತ್ರ. ಹೀಗಾಗಿ ನಮ್ಮಲ್ಲಿ ನೀರೇ ಇಲ್ಲ. ನಮ್ಮ ಅಧಿಕಾರಿಗಳು ರಾಜ್ಯದ ವಾಸ್ತವಾಂಶವನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ. ಆದರೂ ನಿತ್ಯ 5 ಟಿಎಂಸಿ ನೀರು ಬಿಡಲು ಸೂಚಿಸಲಾಗಿದೆ. ನಮ್ಮ ರೈತರ ಪ್ರಾಣವನ್ನು, ಹಿತವನ್ನು ಕಡೆಗಣಿಸಿ ನೀರು ಬಿಡಬೇಕು ಎಂದು ಯಾರೂ ಹೇಳಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸರ್ವ ಪಕ್ಷದ ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಮಾತನಾಡುತ್ತಿರುವುದು

ಕೇಂದ್ರ ಸರ್ಕಾರದ ನೆರವು ಕೋರುವ ಬಗ್ಗೆ ಸಭೆಯಲ್ಲಿ ಚರ್ಚೆ

ಈ ವರ್ಷದ ಆಗಸ್ಟ್‌ ತಿಂಗಳಿನಲ್ಲಿ ಕಳೆದ 123 ವರ್ಷಗಳ ಇದೇ ಅವಧಿಗೆ ಹೋಲಿಸಿದರೆ ಅತಿ ಕಡಿಮೆ ಮಳೆಯಾಗಿದೆ. ಅತೀ ಕಡಿಮೆ ನೀರು ಸಂಗ್ರಹದಲ್ಲಿದೆ. ಈ ಹಿನ್ನೆಲೆಯಲ್ಲಿ ನೀರಿನ ಕೊರತೆ ಇರುವುದರಿಂದ ಕೈಗೊಳ್ಳಬಹುದಾದ ಕಾನೂನು ಕ್ರಮಗಳು, ರಾಜಕೀಯ ಕ್ರಮಗಳು ಹಾಗೂ ಕೇಂದ್ರ ಸರ್ಕಾರದ ನೆರವು ಕೋರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಇನ್ನು ಸಭೆಯಲ್ಲಿ ತಾಂತ್ರಿಕ ಪರಿಣಿತರು, ಕಾನೂನು ತಜ್ಞರು, ಆ ಭಾಗದ ಜನಪ್ರತಿನಿಧಿಗಳು ಹಾಗೂ ವಿವಿಧ ಪಕ್ಷಗಳ ಮುಖಂಡರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಇಂಡಿಯನ್​ ಏರ್​ಫೋರ್ಸ್​ಗೆ ಆನೆ ಬಲ.. ಮೊದಲ C-295 ಏರ್​​ಕ್ರಾಫ್ಟ್​ ಭಾರತಕ್ಕೆ ಹಸ್ತಾಂತರ; ಇದರ ಫೀಚರ್ ಏನೇನು?

ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌, ಸಚಿವರಾದ ಡಾ.ಜಿ ಪರಮೇಶ್ವರ, ಹೆಚ್‌.ಕೆ.ಪಾಟೀಲ್, ಚೆಲುವರಾಯಸ್ವಾಮಿ, ಕೆ.ಹೆಚ್ ಮುನಿಯಪ್ಪ, ಕೆ.ಎನ್ ರಾಜಣ್ಣ, ಎನ್‌.ಎಸ್ ಭೋಸರಾಜು, ಕೆ.ವೆಂಕಟೇಶ್‌, ಜಮೀರ್ ಅಹಮದ್ ಖಾನ್, ಮಾಜಿ ಸಿಎಂ ಎಂ. ವೀರಪ್ಪ ಮೊಯಿಲಿ, ಈ ಭಾಗದ ಸಂಸದರು, ಶಾಸಕರು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ, ಕಾನೂನು ತಜ್ಞರು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ತಮಿಳುನಾಡಿಗೆ ಕಾವೇರಿ ನೀರು ಬಿಡಬೇಕಾ?; ತುರ್ತು ಸರ್ವಪಕ್ಷ ಸಭೆಯಲ್ಲಿ ರಾಜ್ಯ ಸರ್ಕಾರ ಖಡಕ್ ನಿರ್ಧಾರ

https://newsfirstlive.com/wp-content/uploads/2023/09/CM_SIDDU_ALL_PARTY_MEETING_1.jpg

Load More