newsfirstkannada.com

WATCH: ‘ವಿಜಯೇಂದ್ರನ ರೈಸ್‌ ಮಿಲ್‌ನಲ್ಲಿ ಅಕ್ಕಿ ಇದ್ರೆ ಕೊಡಿಸಲಿ’- ಸಿಎಂ ಸಿದ್ದರಾಮಯ್ಯ ಸಿಡಿಮಿಡಿ ಆಗಿದ್ದೇಕೆ?

Share :

17-06-2023

  ಜುಲೈ 1ರಿಂದಲೇ 2ನೇ ಗ್ಯಾರಂಟಿ ಯೋಜನೆ ಅನ್ನಭಾಗ್ಯ ಜಾರಿಯಾಗುತ್ತಾ?

  ಕಮಿಷನ್ ಆಮಿಷಕ್ಕೆ ಹೊರರಾಜ್ಯಗಳಿಂದ ಅಕ್ಕಿ ಖರೀದಿ ಎಂದಿದ್ದ BYV

  ವಿಜಯೇಂದ್ರನೇ 1.50 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡಿಸಲಿ ಎಂದ ಸಿಎಂ

ಬೆಂಗಳೂರು: ಮನೆಯ ಪ್ರತಿಯೊಬ್ಬರಿಗೂ ತಲಾ 10 ಕೆಜಿ ಅಕ್ಕಿ ಕೊಡ್ತೀವಿ. ಅನ್ನಭಾಗ್ಯ ಯೋಜನೆಯನ್ನ ಗ್ಯಾರಂಟಿ ಜಾರಿಗೆ ತರುತ್ತೇವೆ ಅಂತಾ ಕಾಂಗ್ರೆಸ್ ನಾಯಕರು, ಸಿಎಂ ಸಿದ್ದರಾಮಯ್ಯ ರಾಜ್ಯದ ಜನರಿಗೆ ಮಾತು ಕೊಟ್ಟಿದ್ದಾರೆ. ಇದೀಗ ನುಡಿದಂತೆ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ತೀವ್ರ ಕಸರತ್ತು ನಡೆಸುತ್ತಿದೆ.

ಹೊಸ ಸರ್ಕಾರ ರಚನೆಯಾದ ಬಳಿಕ ಸಿಎಂ ಸಿದ್ದರಾಮಯ್ಯ ಅವರ ಕ್ಯಾಬಿನೆಟ್‌ 5 ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತರುವ ನಿರ್ಧಾರ ಕೈಗೊಂಡಿತ್ತು. ಈ ತೀರ್ಮಾನದಂತೆ ಈಗಾಗಲೇ ಶಕ್ತಿ ಯೋಜನೆ ಜಾರಿಗೆ ತಂದಿದ್ದು, ರಾಜ್ಯದ ಮಹಿಳೆಯರು ಉಚಿತ ಬಸ್ ಸಂಚಾರ ಮಾಡುತ್ತಿದ್ದಾರೆ. ಇದೀಗ ಜುಲೈ 1ರಿಂದ ಬಿಪಿಎಲ್ ಕುಟುಂಬಗಳಿಗೆ ತಲಾ 10 ಕೆಜಿ ಅಕ್ಕಿ ವಿತರಿಸುವ ಅನ್ನಭಾಗ್ಯ ಯೋಜನೆ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ. ಆದರೆ 10 ಕೆಜಿ ಅಕ್ಕಿ ಯೋಜನೆಗೆ ಅಕ್ಕಿಯ ದಾಸ್ತಾನು ಮಾಡೋದೇ ದೊಡ್ಡ ಸವಾಲಾಗಿದೆ.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅನ್ನಭಾಗ್ಯ ಯೋಜನೆಗೆ ತೆಲಂಗಾಣದ ಮುಖ್ಯಮಂತ್ರಿಗಳೊಂದಿಗೆ ಖುದ್ದಾಗಿ ಮಾತನಾಡಿದ್ದು, ಅಲ್ಲಿ ಅಕ್ಕಿ ಲಭ್ಯವಿಲ್ಲ ಎಂದು ತಿಳಿಸಿದ್ದಾರೆ. ಆಂಧ್ರಪ್ರದೇಶದವರೊಂದಿಗೆ ನಮ್ಮ ಮುಖ್ಯ ಕಾರ್ಯದರ್ಶಿಗಳು ಮಾತನಾಡುತ್ತಿದ್ದಾರೆ. ಛತ್ತೀಸ್‌ಗಡ ರಾಜ್ಯದಲ್ಲಿ 1.50 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಲಭ್ಯವಿದೆ. ಆದರೆ ಸಾರಿಗೆ ವೆಚ್ಚ ಹೆಚ್ಚಾಗಲಿದೆ. ಇಂದು ಸಂಜೆ ಈ ಬಗ್ಗೆ ಮತ್ತೊಂದು ಸಭೆ ಕರೆದಿದ್ದು, ಚರ್ಚಿಸಲಾಗುವುದು ಎಂದು ತಿಳಿಸಿದರು.

ಇನ್ನು, ರಾಜ್ಯದಲ್ಲಿಯೇ ಅಕ್ಕಿ ಲಭ್ಯವಿದೆ. ಕಮಿಷನ್ ಆಮಿಷಕ್ಕೆ ಹೊರರಾಜ್ಯಗಳಿಂದ ಅಕ್ಕಿ ಖರೀದಿಸಲಾಗುತ್ತಿದೆ ಎಂದು ಬಿಜೆಪಿ ಶಾಸಕ ಬಿ.ವೈ.ವಿಜಯೇಂದ್ರ ಅವರು ಮಾಡಿರುವ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಲ್ಲಿಯೇ ಅಕ್ಕಿ ದೊರೆಯುವುದಾದರೆ ಕೊಡಿಸಲಿ. ವಿಜಯೇಂದ್ರನ ರೈಸ್ ಮಿಲ್‌ನಲ್ಲಿ ಅಕ್ಕಿ ಇದ್ರೆ ಕೊಡಿಸಲಿ ಎಂದು ಸವಾಲು ಹಾಕಿದ್ದಾರೆ. ಇತ್ತೀಚಿಗೆ ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಅವರು ಹೊರ ರಾಜ್ಯದಿಂದ ಅಕ್ಕಿ ಖರೀದಿಸುವ ಬದಲು ನಮ್ಮ ರಾಜ್ಯದ ರೈತರಿಂದಲೇ ಸರ್ಕಾರ ಖರೀದಿಸಬೇಕು ಎಂದಿದ್ದರು.

ಇಷ್ಟು ದಿನ ಕೇಂದ್ರ ಸರ್ಕಾರ ರಾಜ್ಯಗಳಿಗೆ ಅಕ್ಕಿ ನೀಡುತ್ತಿತ್ತು. ಇದರಿಂದಾಗಿ ಆದಷ್ಟು ಬೇಗ 10 ಕೆಜಿ ಅಕ್ಕಿ ಪೂರೈಸುವ ಯೋಜನೆ ಜಾರಿಗೊಳಿಸುವ ಚಿಂತನೆಯಲ್ಲಿ ಸಿದ್ದರಾಮಯ್ಯ ಸರ್ಕಾರ ಇತ್ತು. ಆದರೆ ಇತ್ತೀಚಿಗೆ ಭಾರತೀಯ ಆಹಾರ ನಿಗಮ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಖುದ್ದು ಸಿದ್ದರಾಮಯ್ಯನವರೇ ಬಡವರ ಹೊಟ್ಟೆಗೆ ಹೊಡೆಯುವ ಕೇಂದ್ರ ಸರ್ಕಾರದ ಜನವಿರೋಧಿ ನಿಲುವನ್ನು ಬೆಂಬಲಿಸುವುದಿಲ್ಲ ಎಂದಿದ್ದಾರೆ. ಇದೀಗ ಕೇಂದ್ರ ಸರ್ಕಾರದ ಮೇಲೆ ಅವಲಂಬಿಸುವುದನ್ನು ಬಿಟ್ಟು ಹೊರ ರಾಜ್ಯಗಳಿಂದ ಅಕ್ಕಿ ಖರೀದಿಸಲು ಮುಂದಾಗಿದ್ದಾರೆ. ಇಂದು ಸಂಜೆ ಈ ಕುರಿತು ಮಹತ್ವದ ಸಭೆ ನಡೆಯಲಿದ್ದು, ಜುಲೈ 1ರಿಂದಲೇ ತನ್ನ ಎರಡನೇ ಗ್ಯಾರಂಟಿ ಯೋಜನೆ ಅನ್ನಭಾಗ್ಯ ಜಾರಿಗೊಳಿಸಲು ಸಿದ್ದರಾಮಯ್ಯ ಸರ್ಕಾರ ಶತಾಯಗತಾಯ ಪ್ರಯತ್ನಿಸುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

WATCH: ‘ವಿಜಯೇಂದ್ರನ ರೈಸ್‌ ಮಿಲ್‌ನಲ್ಲಿ ಅಕ್ಕಿ ಇದ್ರೆ ಕೊಡಿಸಲಿ’- ಸಿಎಂ ಸಿದ್ದರಾಮಯ್ಯ ಸಿಡಿಮಿಡಿ ಆಗಿದ್ದೇಕೆ?

https://newsfirstlive.com/wp-content/uploads/2023/06/Siddaramaiah-5.jpg

Load More