/newsfirstlive-kannada/media/post_attachments/wp-content/uploads/2025/02/Cm-Siddaramaiah-Manipal-Hospital-1.jpg)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಮಂಡಿ ನೋವು ಕಾಣಿಸಿಕೊಂಡಿದ್ದು, ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಇಂದು ಬೆಳಗ್ಗೆ ಎಡಗಾಲಿನ ಮಂಡಿ ನೋವು ಜಾಸ್ತಿಯಾದ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ತೆರಳಿದರು. ಮಣಿಪಾಲ್ ಆಸ್ಪತ್ರೆಯ ಡಾ. ಸತ್ಯನಾರಾಯಣ ಅವರು ಸಿಎಂ ಸಿದ್ದರಾಮಯ್ಯರ ತಪಾಸಣೆ ನಡೆಸಿ, ಚಿಕಿತ್ಸೆ ನೀಡಿದ್ದಾರೆ.
ಇದನ್ನೂ ಓದಿ: BREAKING ; ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ; ಮಣಿಪಾಲ್ ಆಸ್ಪತ್ರೆಗೆ ದಾಖಲು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಹಿಂದೆ ಲೆಗಮೆಂಟ್ ಶಸ್ತ್ರ ಚಿಕಿತ್ಸೆ ನಡೆದಿದೆ. ಅದೇ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ಮಂಡಿ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ಮಣಿಪಾಲ್ ವೈದ್ಯರು ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಇಂದು ಮತ್ತು ನಾಳೆ ಎರಡು ದಿನ ಪ್ರಯಾಣ ಮಾಡದೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.
ತಪಾಸಣೆ ಬಳಿಕ ಆಸ್ಪತ್ರೆಯಿಂದ ಹೊರ ಬಂದಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ನೀ ಪ್ಯಾಡ್ ಹಾಕಲಾಗಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರು ಕಾರು ಹತ್ತಲು ಆಪ್ತರಕ್ಷಕರ ಸಹಾಯ ಪಡೆದರು.
ವೈದ್ಯರು ಸಿಎಂ ಸಿದ್ದರಾಮಯ್ಯ ಅವರ ಎಡಗಾಲಿನ ಎಕ್ಸ್ ರೇ ಮಾಡಿದ್ದಾರೆ. ಎಕ್ಸ್ ರೇ ರಿಪೋರ್ಟ್‌ನಲ್ಲಿ ಎಲ್ಲಾ ನಾರ್ಮಲ್ ಬಂದಿದೆ. ಮಾತ್ರೆ ನೀಡಿ ಸಾಧ್ಯವಾದರೆ ನಾಲ್ಕೈದು ದಿನ ಪ್ರಯಾಣ ಮಾಡದಂತೆ ವೈದ್ಯರು ಸಲಹೆ ನೀಡಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆ ವೈದ್ಯರಿಂದ ನ್ಯೂಸ್ ಫಸ್ಟ್‌ಗೆ ಮಾಹಿತಿ ಲಭ್ಯವಾಗಿದೆ.
ಆಸ್ಪತ್ರೆಯಿಂದ ತಮ್ಮ ಸರ್ಕಾರಿ ನಿವಾಸ ಕಾವೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ವೈದ್ಯರ ಸಲಹೆ ಮೇರೆಗೆ ಎರಡು ದಿನ ವಿಶ್ರಾಂತಿ ಪಡೆಯಲು ನಿರ್ಧಾರ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ