/newsfirstlive-kannada/media/post_attachments/wp-content/uploads/2025/01/lakshmi-hebbalkar-siddaramaiah-1.jpg)
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತದಲ್ಲಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಇಂದು ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದು ಆರೋಗ್ಯ ವಿಚಾರಿಸಿದ್ದಾರೆ.
/newsfirstlive-kannada/media/post_attachments/wp-content/uploads/2025/01/lakshmi-hebbalkar-siddaramaiah.jpg)
ಬೆಳಗಾವಿ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್, ಸಚಿವ ಹೆಚ್.ಸಿ ಮಹದೇವಪ್ಪ ಅವರು ಸಾಥ್ ನೀಡಿದ್ದರು.
/newsfirstlive-kannada/media/post_attachments/wp-content/uploads/2025/01/lakshmi-hebbalkar-siddaramaiah-2.jpg)
ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ ಅವರು ಸಚಿವೆಯ ಯೋಗಕ್ಷೇಮವನ್ನು ವಿಚಾರಿಸಿದರು. ಇದೇ ವೇಳೆ ಆದಷ್ಟು ಬೇಗ ಗುಣಮುಖರಾಗುವಂತೆ ಹಾರೈಸಿದ್ದಾರೆ.
/newsfirstlive-kannada/media/post_attachments/wp-content/uploads/2025/01/lakshmi-hebbalkar-siddaramaiah-3.jpg)
ಕಳೆದ ಜನವರಿ 14ರಂದು ಬೆಳಗಾವಿಯ ಕಿತ್ತೂರು ಬಳಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಅಪಘಾತಕ್ಕೀಡಾಗಿತ್ತು. ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಸಹೋದರ, ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿ ಅವರು ಕೂಡ ಇದ್ದರು.
ಇದನ್ನೂ ಓದಿ: ಲಕ್ಷ್ಮೀ ಹೆಬ್ಬಾಳ್ಕರ್ ‘ಲಕ್ಕಿ’ ಕಾರು ಅಪಘಾತ; ಅಸಲಿಗೆ ಆಗಿದ್ದೇನು? ಚನ್ನರಾಜ್ ಹಟ್ಟಿಹೊಳಿ ಏನಂದ್ರು?
/newsfirstlive-kannada/media/post_attachments/wp-content/uploads/2025/01/lakshmi-hebbalkar-siddaramaiah-4.jpg)
ನಾಯಿ ಅಡ್ಡ ಬಂದಿದ್ದರಿಂದ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಚಾಲಕ ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದಿದ್ದ. ಈ ಕಾರು ಅಪಘಾತದಿಂದ ಲಕ್ಷ್ಮಿ ಹೆಬ್ಬಾಳ್ಕರ್ ಬೆನ್ನಿನ ಭಾಗಕ್ಕೆ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us