/newsfirstlive-kannada/media/post_attachments/wp-content/uploads/2023/12/Cm-Siddaramaiah-1.jpg)
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊವಿಡ್ ಆತಂಕ ಹೆಚ್ಚಾಗುತ್ತಿದೆ. ಬೆಂಗಳೂರಲ್ಲಿ ಕೊರೊನಾ ಪಾಸಿಟಿವ್ ಆಗುವವರ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಆರೋಗ್ಯ ಇಲಾಖೆಗೆ ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.
ಕೊವಿಡ್ ಆತಂಕ ಹಿನ್ನೆಲೆಯಲ್ಲಿ ಪ್ರಮುಖವಾಗಿ ತಕ್ಷಣದಿಂದಲೇ ಜಾರಿಯಾಗುವಂತೆ ಆರೋಗ್ಯ ಇಲಾಖೆ ಸಿಬ್ಬಂದಿಯ ರಜೆ ರದ್ದು ಮಾಡಲಾಗಿದೆ. ಪರಿಸ್ಥಿತಿ ತಿಳಿ ಆಗುವ ಯಾರಿಗೂ ರಜೆ ನೀಡದಂತೆ ಆರೋಗ್ಯ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಆರೋಗ್ಯ ಇಲಾಖೆಯ ಸಿಬ್ಬಂದಿ ಅವರವರ ಕೇಂದ್ರ ಸ್ಥಾನ ಬಿಟ್ಟು ಹೋಗದಂತೆ ಸೂಚಿಸಲಾಗಿದೆ.
ಸಿಎಂ ನೀಡಿದ ಸೂಚನೆಗಳು ಏನು?
ಕೊರೊನಾ ಮುಂಜಾಗ್ರತಾ ಕ್ರಮಗಳ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು ಹಲವಾರು ಸೂಚನೆಗಳನ್ನ ನೀಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಬಾಣಂತಿ ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಜನರಿಗೆ ಅನುಕೂಲವಾಗುವಂತೆ ಕೊರೊನಾ ಸಹಾಯವಾಣಿ ಪ್ರಾರಂಭಿಸಬೇಕು ಅನ್ನೋದು ಪ್ರಮುಖ ಅಂಶಗಳು.
ಇನ್ನುಳಿದಂತೆ ಮುಂದಿನ ದಿನಗಳಲ್ಲಿ ಅವಶ್ಯಕತೆ ಕಂಡು ಬಂದರೆ ವಿಮಾನ ನಿಲ್ದಾಣಗಳಲ್ಲಿ ಹೊರಗಡೆಯಿಂದ ಬರುವ ಪ್ರಯಾಣಿಕರಿಗೆ ತಪಾಸಣಾ ಘಟಕಗಳನ್ನು ಪ್ರಾರಂಭಿಸಬೇಕು. ಕೊರೊನಾ ವಿಷಯದಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಧೋರಣೆ ಅನುಸರಿಸಬಾರದು. ಎಲ್ಲಾ ಜಿಲ್ಲಾ ಆಸ್ಪತ್ರೆಗಳೂ ಸರ್ವ ಸನ್ನದ್ಧವಾಗಿ ಇರಬೇಕು.
ಇದನ್ನೂ ಓದಿ: ಮಗನ ಅಗಲಿಕೆ ಸುದ್ದಿ ತಿಳಿಯುತ್ತಿದ್ದಂತೆಯೇ ತಂದೆಗೆ ಹಾರ್ಟ್ ಅಟ್ಯಾಕ್.. ಹೃದಯ ವಿದ್ರಾವಕ ಘಟನೆ
ರೂಪಾಂತರಿ ಕೊರೊನಾ ವೈರಾಣುವಿಗೆ ಸಂಬಂಧಿಸಿದಂತೆ ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆಯಾಗಿ ವ್ಯಾಕ್ಸಿನ್ ಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಸಾಮಾಜಿಕ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ