Advertisment

ಇಂದೇ ದೆಹಲಿಗೆ ಹೋಗಲಿರುವ ಸಿಎಂ ಸಿದ್ದರಾಮಯ್ಯ.. ಹೈಕಮಾಂಡ್​​ ಜೊತೆ ಮಹತ್ವದ ಚರ್ಚೆ

author-image
AS Harshith
Updated On
ಇಂದೇ ದೆಹಲಿಗೆ ಹೋಗಲಿರುವ ಸಿಎಂ ಸಿದ್ದರಾಮಯ್ಯ.. ಹೈಕಮಾಂಡ್​​ ಜೊತೆ ಮಹತ್ವದ ಚರ್ಚೆ
Advertisment
  • ಸಿಎಂ ನೇತೃತ್ವದಲ್ಲಿಂದು ಮಹತ್ವದ ಸಚಿವ ಸಂಪುಟ ಸಭೆ
  • ಸಂಜೆ ಶಾಸಕಾಂಗ ಸಭೆ ಬಳಿಕ ದೆಹಲಿಯತ್ತ ಹೊರಟ ಸಿಎಂ
  • ಹೈಕಮಾಂಡ್ ನಾಯಕರ ಜೊತೆ ಏನೆಲ್ಲಾ ಚರ್ಚಿಸಲಿದ್ದಾರೆ?

ಸಿಎಂ ಸಿದ್ದರಾಮಯ್ಯನವರು ಇಂದೇ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಸಂಜೆ ಶಾಸಕಾಂಗ ಸಭೆ ಮುಗಿದ ಬಳಿಕ ದೆಹಲಿಗೆ ತೆರಳಲಿದ್ದಾರೆ ಎನ್ನಲಾಗುತ್ತಿದೆ.

Advertisment

ನಾಳೆ ಸಿಎಂ ಸಿದ್ದರಾಮಯ್ಯನವರು ಹೈಕಮಾಂಡ್ ನಾಯಕರನ್ನ ಭೇಟಿ ಮಾಡಲಿದ್ದಾರೆ. ರಾಜ್ಯದಲ್ಲಿನ ಬೆಳವಣಿಗೆ ಬಗ್ಗೆ ಹೈಕಮಾಂಡ್ ನಾಯಕರಿಗೆ ಮಾಹಿತಿ ನೀಡಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಸಾವಿನ ಸಂಖ್ಯೆ 18ಕ್ಕೆ ಏರಿಕೆ, 40ಕ್ಕೂ ಹೆಚ್ಚು ಜನರಿಗೆ ಗಾಯ.. ಫಾಕ್ಟರಿ ಸ್ಫೋಟದಲ್ಲಿ 380 ಮಂದಿ ಏನಾದ್ರು?

ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡಿದ ಬಳಿಕ ಆಗಿರುವ ಬೆಳವಣಿಗೆ, ಕೋರ್ಟ್​​​ನಲ್ಲಿ ರಿಲೀಫ್ ಸಿಕ್ಕಿರುವ ಕುರಿತು ಸಿದ್ದರಾಮಯ್ಯನವರು ಮಾಹಿತಿ ನೀಡಲಿದ್ದಾರೆ. ಇದೇ ವೇಳೆ ಶಾಸಕಾಂಗ ಸಭೆಯಲ್ಲಿ ರಾಜ್ಯಪಾಲರ ವಿರುದ್ಧ ಕೈಗೊಂಡಿರುವ ನಿರ್ಣಯವನ್ನೂ ಗಮನಕ್ಕೆ ತರಲಿದ್ದಾರೆ ಎಂದು ಹೇಳಲಾಗುತ್ತಿದೆ.

Advertisment

ಇಂದು ಸಚಿವ ಸಂಪುಟ ಸಭೆ

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಇಂದಿನ ಸಭೆಯಲ್ಲಿ ಮತ್ತೊಮ್ಮೆ ಖಂಡನಾ ನಿರ್ಣಯ ಕೈಗೊಳ್ಳಲಿದ್ದಾರೆ. ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದ ವಿಚಾರಕ್ಕೆ ಸಿದ್ದರಾಮಯ್ಯ ಸರ್ಕಾರ ಖಂಡನಾ ನಿರ್ಣಯ ಕೈಗೊಳ್ಳಲಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಶುರುವಾಯ್ತು ಮತ್ತೊಂದು ತಲೆನೋವು.. ಈ ವರ್ಷದಿಂದಲೇ PG ಕೋರ್ಸ್​ಗಳಿಗೂ CET ಪರೀಕ್ಷೆ ನಡೆಸೋ ಸಾಧ್ಯತೆ

ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ರವರು ಕುಮಾರಸ್ವಾಮಿ, ನಿರಾಣಿ, ಜೊಲ್ಲೆ ಹಾಗೂ ಜನಾರ್ಧನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದ ವಿಚಾರವಾಗಿ ಇಂದು ಖಂಡನಾ ನಿರ್ಣಯ ಕೈಗೊಳ್ಳಲಿದ್ದಾರೆ. ತನಿಖಾ ಸಂಸ್ಥೆಗಳು ಮನವಿ ಮಾಡಿದ್ದರೂ ಇನ್ನೂ ಅನುಮತಿ ನೀಡದೆ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಲು ಮುಂದಾಗಿದ್ದಾರೆ.

Advertisment

ಇದನ್ನೂ ಓದಿ: ಮನೆ ಬಳಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಮಗ.. ಸಾವಿನಲ್ಲೂ ಸಾರ್ಥಕತೆ ಮೆರೆದು ಬೆಳಕಾದ

ಕಳೆದ ವರ್ಷ ಕುಮಾರಸ್ವಾಮಿ ವಿರುದ್ಧ ಚಾರ್ಜ್ ಷೀಟ್ ಸಲ್ಲಿಸಲು ಅನುಮತಿ ನೀಡುವಂತೆ ಲೋಕಾಯುಕ್ತರಿಂದ ಮನವಿ ಸಲ್ಲಿಸಲಾಗಿತ್ತು. ಆದರೆ ಈ ವಿಚಾರವಾಗಿ ಹತ್ತು ತಿಂಗಳಾದರೂ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿಲ್ಲ ಎಂದು ಕಾಂಗ್ರೆಸ್​​ ಕಿಡಿಕಾರಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment