/newsfirstlive-kannada/media/post_attachments/wp-content/uploads/2024/11/CM_SIDDU-1.jpg)
ಮುಡಾ ಪ್ರಕರಣ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ಹೊಸ ಸಂಕಷ್ಟ ಶುರುವಾಗಿದೆ. 8 ಗಣಿ ಕಂಪನಿಗಳ ನವೀಕರಣಕ್ಕೆ 500 ಕೋಟಿ ರೂಪಾಯಿ ಕಿಕ್ಬ್ಯಾಕ್ ಪಡೆದ ಆರೋಪ ಕೇಳಿ ಬಂದಿದೆ. ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿಗೌಡ ರಾಜ್ಯಪಾಲರಿಗೆ ಪತ್ರ ಬರೆದಿದ್ದು ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಿದ್ರೆ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಉರುಳು ಸಿದ್ದವಾದಂತಾಗಿದೆ.
ಇದನ್ನೂ ಓದಿ:ದೂರ, ದೂರ.. ಬಿಜೆಪಿ, ಜೆಡಿಎಸ್ ಮೈತ್ರಿ ನಾಯಕರ ಮಧ್ಯೆ ಅಂತರ; ವರದಿ ಕೇಳಿದ ಹೈಕಮಾಂಡ್! ಆಗಿದ್ದೇನು?
ಮುಡಾ ಪ್ರಕರಣ ಕ್ಲೀನ್ಹ್ಯಾಂಡ್ ಸಿದ್ದರಾಮಯ್ಯ ರಾಜಕೀಯ ಉತ್ಕರ್ಷಕ್ಕೆ ಅಡ್ಡಿ ಮಾಡಿದ್ದ ಕೇಸ್. ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಕ್ಲೀನ್ಚಿಟ್ ನೀಡಿದ್ರೂ ಜಾರಿ ನಿರ್ದೇಶನಾಲಯ ಮಾತ್ರ ಬಿಡದೇ ಬೆನ್ನಟ್ಟಿದೆ. ಈ ನಡುವೆ ಗುತ್ತಿಗೆ ನವೀಕರಣಕ್ಕೆ 500 ಕೋಟಿ ಕಿಕ್ಬ್ಯಾಕ್ ಆರೋಪ ಮತ್ತೊಂದು ಹಗರಣ ಸಿಎಂಗೆ ಮಗ್ಗುಲು ಮುಳ್ಳಾಗುವಂತೆ ಕಾಣ್ತಿದೆ.
ಅಂದಾಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಕ್ ಬ್ಯಾಕ್ ಪಡೆದ ಆರೋಪ ವಿಚಾರಕ್ಕೆ ಸಂಬಂಧಿಸಿ ಎಲ್ಲಾ 8 ಪ್ರಕರಣಗಳಲ್ಲಿ ಸರ್ಕಾರಕ್ಕೆ ನಯಾಪೈಸೆಯಷ್ಟೂ ನಷ್ಟವಾಗಿಲ್ಲ ಎನ್ನಲಾಗ್ತಿದೆ. ಈ ಅವಧಿಯಲ್ಲಿ ಒಂದು ಹಿಡಿಯಷ್ಟೂ ಅದಿರು ತೆಗೆದಿಲ್ಲ. ಈ ಕುರಿತಂತೆ ಈ ಹಿಂದೆ ಕೂಡ ವಿರೋಧ ಪಕ್ಷದವರು ಹಾಗೂ ಕೆಲ ವ್ಯಕ್ತಿಗಳು ಹಲವು ಸಂಸ್ಥೆಗಳಲ್ಲಿ ಪ್ರಕರಣ ದಾಖಲಿಸಿದ್ದರು. ಈ ದೂರುಗಳಲ್ಲಿ ಯಾವುದೇ ಹುರುಳಿಲ್ಲವೆಂದು ದೂರುಗಳನ್ನು ಮುಕ್ತಾಯಗೊಳಿಸಲಾಗಿತ್ತು.
ಇದನ್ನೂ ಓದಿ:‘ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ’.. ಬೃಹತ್ ಹೋರಾಟಕ್ಕೆ ಸಜ್ಜಾದ ಜೆಡಿಎಸ್; ಏನಿದು ನಿಖಿಲ್ ಚಕ್ರವ್ಯೂಹ?
ಇಂದು ಮಾಧ್ಯಮಗಳಲ್ಲಿ 8 ಗಣಿ ಕಂಪೆನಿಗಳ ಕುರಿತಾಗಿ ಪ್ರಕಟಗೊಂಡ ಸುದ್ದಿ ಗಮನಿಸಿದೆ. ಈ ಬಗ್ಗೆ ಕೆಲವು ಸ್ಪಷ್ಟನೆ ನೀಡಬಯಸಿದ್ದೇನೆ.
ಗಣಿ ಗುತ್ತಿಗೆ ನವೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ.
ಇಂತಹ ಅಪ ಪ್ರಚಾರಗಳು ನಾನು ಅಧಿಕಾರಕ್ಕೆ ಬಂದಾಗಿನಿಂದಲೂ ನಡೆದುಕೊಂಡು ಬರುತ್ತಿದೆ. ಕೆಲವು…— Siddaramaiah (@siddaramaiah)
ಇಂದು ಮಾಧ್ಯಮಗಳಲ್ಲಿ 8 ಗಣಿ ಕಂಪೆನಿಗಳ ಕುರಿತಾಗಿ ಪ್ರಕಟಗೊಂಡ ಸುದ್ದಿ ಗಮನಿಸಿದೆ. ಈ ಬಗ್ಗೆ ಕೆಲವು ಸ್ಪಷ್ಟನೆ ನೀಡಬಯಸಿದ್ದೇನೆ.
ಗಣಿ ಗುತ್ತಿಗೆ ನವೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ.
ಇಂತಹ ಅಪ ಪ್ರಚಾರಗಳು ನಾನು ಅಧಿಕಾರಕ್ಕೆ ಬಂದಾಗಿನಿಂದಲೂ ನಡೆದುಕೊಂಡು ಬರುತ್ತಿದೆ. ಕೆಲವು…— Siddaramaiah (@siddaramaiah) April 9, 2025
">April 9, 2025
ವಿರೋಧ ಪಕ್ಷದವರು ಈ ವಿಚಾರವನ್ನು ಸದನದಲ್ಲೂ ಪ್ರಶ್ನಿಸಿದ್ದರು. ಆದರೆ ಅವಧಿ ಮುಗಿದ ಗಣಿ ಗುತ್ತಿಗೆಗಳನ್ನು ನಂತರ ನಿಯಮಾನುಸಾರ ಹರಾಜಿಗೆ ಒಳಪಡಿಸಿ ವಿಲೇವಾರಿ ಮಾಡಲಾಗಿದೆ. ಸುಮಾರು 10 ವರ್ಷಗಳ ನಂತರ ಈ ಪ್ರಕರಣವನ್ನು ರಾಜಕೀಯ ದುರುದ್ದೇಶದಿಂದ ಹೊರಗೆಳೆಯಲು ಪ್ರಾರಂಭಿಸಿದ್ದಾರೆ. ಹುರುಳಿಲ್ಲದ ವಿಷಯಕ್ಕೆ ವಿಷ ತುಂಬಿ ನಾಡಿನ ಜನರ ಮೆದುಳನ್ನು ಕಲುಷಿತಗೊಳಿಸಲು ಹೊರಟಿದ್ದಾರೆ. ದುಷ್ಟ ರಾಜಕೀಯ ಪಿತೂರಿಗಳನ್ನು ನಾಡಿನ ಪ್ರಜ್ಞಾವಂತ ಜನ ನಂಬಬಾರದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ 14 ಸೈಟ್ಗಳ ಮುಡಾ ಆರೋಪ ಬೆನ್ನಲ್ಲೇ ಮತ್ತೊಂದು ಆರೋಪ ಕೇಳಿಬಂದಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಯಾವ ಪ್ರತ್ಯುತ್ತರ ಕೊಡ್ತಾರೆ ಕಾದು ನೋಡ್ಬೇಕು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ