newsfirstkannada.com

ಇಂದು ಸಿಎಂ 2ನೇ ಜನತಾದರ್ಶನ; ಸಾರ್ವಜನಿಕರ ಕಷ್ಟ-ನಷ್ಟ ಆಲಿಸಲಿರುವ ಸಿದ್ದರಾಮಯ್ಯ

Share :

Published February 8, 2024 at 6:36am

  ಕಾರ್ಯಕ್ರಮಕ್ಕಾಗಿ ವಿಧಾನಸೌಧದಲ್ಲಿ ಸಕಲ ಸಿದ್ಧತೆ ಮಾಡಲಾಗ್ತಿದೆ

  ವಿಕಲಚೇತನರು, ಗರ್ಭಿಣಿಯರಿಗೆ ಬ್ಯಾಟರಿ ಚಾಲಿತ ವೀಲ್‌ಚೇರ್‌

  ಎಲ್ಲ ಸಾರ್ವಜನಿಕರು ಹಾಗೂ ದಿವ್ಯಾಂಗರಿಗೆ ಸ್ವಚ್ಛ ಶೌಚಾಲಯ

ಬೆಂಗಳೂರು: ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ ತಾರತಮ್ಯದ ವಿರುದ್ಧ ಹೋರಾಟ ಹಾಗೂ ಲೋಕಸಭಾ ಚುನಾವಣೆ ಸಮೀಪಿಸ್ತಿರುವ ನಡುವೆ ಸಿಎಂ ಸಿದ್ದರಾಮಯ್ಯ ಅವರು ಇಂದು ಜನತಾದರ್ಶನ ನಡೆಸಲಿದ್ದಾರೆ. ಇದು ರಾಜ್ಯಮಟ್ಟದ ಜನತಾ ದರ್ಶನವಾಗಿದ್ದು, ಕಾರ್ಯಕ್ರಮಕ್ಕಾಗಿ ವಿಧಾನಸೌಧದಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ.

ವಿಧಾನಸೌಧದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯದ ಜನರ ಕಷ್ಟ ಆಲಿಸಲಿದ್ದಾರೆ. ರಾಜ್ಯಮಟ್ಟದ ಜನತಾ ದರ್ಶನ ಕಾರ್ಯಕ್ರಮಕ್ಕೆ ವ್ಯವಸ್ಥೆ ಮಾಡಲಾಗಿದ್ದು ಇದಕ್ಕಾಗಿ ಸಕಲ ಸಿದ್ಧತೆಗಳು ನಡೆದಿವೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಲಿರುವ ಸಾರ್ವಜನಿಕರು ದೂರು ದುಮ್ಮಾನಗಳನ್ನ ಸಿಎಂ ಮುಂದೆ ಹೇಳಿಕೊಳ್ಳಬಹುದಾಗಿದ್ದು, ಜನರು ಸಲ್ಲಿಸುವ ದೂರು ಹಾಗೂ ಮನವಿಗಳನ್ನು ಸ್ವೀಕರಿಸಲು ಇಲಾಖಾವಾರು ಕೌಂಟರ್‌ಗಳನ್ನ ವ್ಯವಸ್ಥೆ ಮಾಡಲಾಗಿದೆ.

ಸಾರ್ವಜನಿಕರ ಅಹವಾಲು ಆಲಿಸಲಿರುವ ಸಿಎಂ

ಮುಖ್ಯಮಂತ್ರಿಯವರ ಜನತಾದರ್ಶನ ನಡೆಯುವ ಸ್ಥಳದಲ್ಲಿ ಸಚಿವಾಲಯದ ಎಲ್ಲ ಇಲಾಖೆಗಳ ಸ್ಟಾಲ್​​ಗಳನ್ನು ಅಳವಡಿಸಲಾಗಿದ್ದು ಪ್ರತಿ ಸ್ಟಾಲ್​ಗಳಿಗೆ ಸಂಖ್ಯೆಯನ್ನು ನೀಡಲಾಗಿದೆ. ಜನತಾದರ್ಶನಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ನಾಗರಿಕರನ್ನು ಪ್ರಥಮ ಹಂತದಲ್ಲಿ ವಿಚಾರಿಸಿ, ಯಾವ ಇಲಾಖೆಯ ಸ್ಟಾಲ್‌ಗೆ ನಿರ್ದೇಶಿಸಿ ಕಳಿಸಬೇಕು ಎಂದು ವಿಂಗಡಿಸಲಾಗುತ್ತೆ.

ಇದಕ್ಕಾಗಿ ಅನುಭವಿ ಅಧಿಕಾರಿ -ಸಿಬ್ಬಂದಿಗಳ ವಿಚಾರಣಾ ಕೌಂಟರ್ ತೆರೆಯಲಾಗಿದೆ. ಅಲ್ಲಿ ನಾಗರಿಕರ ಮೊಬೈಲ್ ನಂಬರ್ ಮತ್ತು ಪ್ರಾಥಮಿಕ ವಿವರಗಳನ್ನು ದಾಖಲಿಸಲು ರಿಜಿಸ್ಟರ್ ಹಾಗೂ ಸ್ಟಾಲ್ ನಂಬರ್ ನಮೂದಿಸಲಾಗುವುದು. ಸ್ಟಾಲ್‌ಗಳಲ್ಲಿ ನಾಗರಿಕರಿಗೆ ಕುಳಿತುಕೊಳ್ಳಲು ಕುರ್ಚಿಗಳ ವ್ಯವಸ್ಥೆ, ವಯೋವೃದ್ಧರು, ಹಿರಿಯ ನಾಗರಿಕರು, ವಿಕಲಚೇತನರು, ಗರ್ಭಿಣಿಯರು, ಸಣ್ಣ ಮಕ್ಕಳೊಂದಿಗೆ ಬಂದಂತಹ ನಾಗರಿಕರಿಗೆ ಆದ್ಯತೆ ನೀಡಲು ಸೂಚಿಸಲಾಗಿದೆ.

ಹತ್ತು ಸಾವಿರ ಜನರಿಗೆ ಊಟಕ್ಕೂ ಏರ್ಪಾಟು

ಇಲಾಖೆಯ ಕಾರ್ಯದರ್ಶಿಗಳು ತಮ್ಮ ಇಲಾಖೆಯ ಸಚಿವಾಲಯದ ಹಾಗೂ ಅಧೀನ ಇಲಾಖೆಯ ಮುಖ್ಯಸ್ಥರು, ಅಧಿಕಾರಿ, ಸಿಬ್ಬಂದಿಯವರ ತಂಡದೊಡನೆ ಸ್ಟಾಲ್​ನಲ್ಲಿದ್ದು, ಜನತಾದರ್ಶನಗಳಲ್ಲಿ ಬಂದ ಅರ್ಜಿಗಳನ್ನು ನಾಗರಿಕರಿಂದ ಸ್ವೀಕರಿಸಲಿದ್ದಾರೆ. ವಯೋವೃದ್ಧರು, ಹಿರಿಯ ನಾಗರಿಕರು, ವಿಕಲಚೇತನರು, ಗರ್ಭಿಣಿಯರಿಗಾಗಿ Battery ಚಾಲಿತ Wheel Chairsಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಂಬಂಧಿಸಿದ ಇಲಾಖೆಯ ಸ್ಟಾಲ್​ಗೆ ಅವರನ್ನು ಕರೆದೊಯ್ಯುವ ವ್ಯವಸ್ಥೆಯಾಗಿದೆ. ಜನತಾದರ್ಶನಕ್ಕೆ ಆಗಮಿಸುವ ನಾಗರಿಕರಿಗೆ ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಐದರಿಂದ ಹತ್ತು ಸಾವಿರ ಜನರಿಗೆ ಆಹಾರ ಪೂರೈಸುವಂತಹ ವ್ಯವಸ್ಥೆಯಾಗಿದೆ. ಜೊತೆೆಗೆ ಕಷ್ಟ ಹೇಳಿಕೊಳ್ಳಲು ಬರುವ ಎಲ್ಲ ಸಾರ್ವಜನಿಕರು ಹಾಗೂ ದಿವ್ಯಾಂಗರಿಗೆ ಸ್ವಚ್ಛ ಶೌಚಾಲಯಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಿಎಂಟಿಸಿ ವತಿಯಿಂದ ಉಚಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಲೋಕಸಭಾ ಚುನಾವಣೆ ಸಮಿಪಿಸ್ತಿರುವ ಈ ಸಂದರ್ಭದಲ್ಲಿ ಸಿಎಂ ಜನತಾ ದರ್ಶನ ಸರ್ಕಾರದ ಮೇಲೆ ಸಕಾರಾತ್ಮಕ ಪರಿಹಾರ ಬೀರಲಿದೆ ಎಂಬ ಮನೋಭಾವ ಸಚಿವರು ಹಾಗೂ ಶಾಸಕರಲ್ಲಿದೆ. ನವೆಂಬರ್ 27 ರಂದು ನಡೆದ ಜನತಾ ದರ್ಶನದಲ್ಲಿ 4030 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಈವರೆಗೆ 3738 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಇಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೂ ಜನತಾ ದರ್ಶನದಲ್ಲಿ ಭಾಗವಹಿಸಲಿರು ಸಿದ್ದರಾಮಯ್ಯ ಇಡೀ ದಿನ ಸಾರ್ವಜನಿಕರ ಅಹವಾಲು ಆಲಿಸಲಿದ್ದಾರೆ. ನಾಡಿನ ಮೂಲೆ ಮೂಲೆಗಳಿಂದ ಸಾರ್ವಜನಿಕರು ಸಿಎಂರಿಂದ ತಮ್ಮ ಸಮಸ್ಯೆಗೆ ಪರಿಹಾರ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಇಂದು ಸಿಎಂ 2ನೇ ಜನತಾದರ್ಶನ; ಸಾರ್ವಜನಿಕರ ಕಷ್ಟ-ನಷ್ಟ ಆಲಿಸಲಿರುವ ಸಿದ್ದರಾಮಯ್ಯ

https://newsfirstlive.com/wp-content/uploads/2023/06/siddu-13.jpg

Load More