newsfirstkannada.com

ISRO ಅಧ್ಯಕ್ಷ ಸೋಮನಾಥ್ ಸೇರಿ 68 ಗಣ್ಯರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದ ಸಿದ್ದರಾಮಯ್ಯ

Share :

02-11-2023

    ‘ಕರ್ನಾಟಕ ಸಂಭ್ರಮ-50’ರ ಪ್ರಯುಕ್ತ 10 ಸಂಸ್ಥೆಗಳಿಗೆ ಪ್ರಶಸ್ತಿ

    ಶಿವಕುಮಾರ್, ಸಚಿವ ಶಿವರಾಜ್ ತಂಗಡಗಿ ಉಪಸ್ಥಿತರಿದ್ದರು

    100 ವಯಸ್ಸು ದಾಟಿದ್ದ ಇಬ್ಬರು ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು: ಕರ್ನಾಟಕದಾದ್ಯಂತ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಸ್ರೋ ಮುಖ್ಯಸ್ಥ ಎಸ್​ ಸೋಮನಾಥ್ ಸೇರಿದಂತೆ ವಿವಿಧ ಕ್ಷೇತ್ರಗಳ 68 ಮಂದಿ ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಸಿಎಂ ಸಿದ್ದರಾಮಯ್ಯ ಪ್ರದಾನ ಮಾಡಿದರು.

100 ವರ್ಷ ವಯಸ್ಸು ದಾಟಿದ ಇಬ್ಬರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿರುವುದು ವಿಶೇಷ ಎನಿಸಿತು. 13 ಮಹಿಳೆಯರು ಮತ್ತು 54 ಪುರುಷರು ಹಾಗೂ ಒಬ್ಬರು ಮಂಗಳಮುಖಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಯಿತು. ಪ್ರಶಸ್ತಿಯು 5 ಲಕ್ಷ ರೂ. ನಗದು, 25 ಗ್ರಾಂ ಚಿನ್ನದ ಮೆಡಲ್ ಒಳಗೊಂಡಿತ್ತು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ. ಪರಮೇಶ್ವರ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹಾಗೂ ಇತರ ಗಣ್ಯರು ಈ ವೇಳೆ ಉಪಸ್ಥಿತರಿದ್ದರು. ‘ಕರ್ನಾಟಕ ಸಂಭ್ರಮ-50’ರ ಪ್ರಯುಕ್ತ ವಿಶೇಷವಾಗಿ 10 ಸಂಘ ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ISRO ಅಧ್ಯಕ್ಷ ಸೋಮನಾಥ್ ಸೇರಿ 68 ಗಣ್ಯರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದ ಸಿದ್ದರಾಮಯ್ಯ

https://newsfirstlive.com/wp-content/uploads/2023/11/CM_SIDDARAMAIAH_ISRO-1.jpg

Load More