newsfirstkannada.com

‘ಮೋದಿ ಮುಂದೆ ತಲೆ ಎತ್ತಿ ಕುಣಿಸೋದು, ಇಲ್ಲದಿದ್ದರೆ ತಲೆ ಬಗ್ಗಿಸೋದು’- ಬಿಜೆಪಿಗರನ್ನು ಕೋಲೆ ಬಸವ ಎಂದ ಸಿದ್ದು

Share :

Published February 7, 2024 at 1:01pm

Update February 7, 2024 at 1:11pm

    ಕರ್ನಾಟಕದ ಹೋರಾಟಕ್ಕೆ ಮಿಸ್ಟರ್ ಬಿಜೆಪಿ ನಾಯಕರು ಬರಬೇಕಿತ್ತು

    ಯಡಿಯೂರಪ್ಪಗೆ ಮೋದಿ ಅವರ ಬಳಿ ಹೋಗಿ ಕೇಳಿ ಎಂದು ಹೇಳಿದ್ದೆ

    ನಿರ್ಮಲಾ ಸೀತಾರಾಮನ್ ಅವರಿಗೆ ಅಮ್ಮಾ.. ಅಮ್ಮಾ ಎಂದು ವ್ಯಂಗ್ಯ

ಕೇಂದ್ರ ಸರ್ಕಾರದಿಂದ ಅನುದಾನದ ತಾರತಮ್ಯ ಆರೋಪಿಸಿ ದೆಹಲಿಯ ಜಂತರ್‌ಮಂತರ್‌ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ನಾಯಕರನ್ನು ಕೋಲೆ ಬಸವನಿಗೆ ಹೋಲಿಸಿ ವ್ಯಂಗ್ಯವಾಡಿದ್ದಾರೆ.

ತಮ್ಮ ಭಾಷಣದಲ್ಲಿ ಮೋದಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ, GST ಹಾಗೂ ಕೇಂದ್ರ ಬಜೆಟ್‌ನ ಅಂಕಿ-ಅಂಶಗಳನ್ನು ಪ್ರಸ್ತಾಪ ಮಾಡಿದರು. ಈಗ ಬಜೆಟ್ ಗಾತ್ರ 45 ಲಕ್ಷ ಕೋಟಿ ರೂಪಾಯಿ ಇದೆ. ಈಗ ಹಿಂದೆಂದಿಗಿಂತಲೂ ಬಜೆಟ್ ಗಾತ್ರ ಹೆಚ್ಚಾಗಿದೆ. ಆದರೆ ನಮ್ಮ ರಾಜ್ಯಕ್ಕೆ ಎಷ್ಟು ಕೊಟ್ಟಿದ್ದಾರೆ. GSTಯಲ್ಲಿ ಎಷ್ಟು ನಷ್ಟವಾಗಲಿದೆ ಅಷ್ಟನ್ನು ಭರಿಸುವುದಾಗಿ ಹೇಳಿದ್ದರು.

ಜಿಎಸ್‌ಟಿಯಲ್ಲಿ ನಮಗೆ ಅನ್ಯಾಯವಾಗಿಲ್ವಾ. ಜಿಎಸ್‌ಟಿಯಲ್ಲಿ ನಷ್ಟವಾದರೂ ತೆರಿಗೆಯಲ್ಲಿ ಹೆಚ್ಚಾಗಲಿದೆ ಅಂತ ಹೇಳಿದರು. ಅದು ಸುಳ್ಳು, ನಮಗೆ ನಷ್ಟವಾಗಿದೆ. ಇದನ್ನ ಪ್ರತಿಭಟಿಸಬೇಕಾ ಬೇಡವಾ? ಕರ್ನಾಟಕದ ಹೋರಾಟಕ್ಕೆ ಮಿಸ್ಟರ್ ಬಿಜೆಪಿ ನಾಯಕರು ಬರಬೇಕಿತ್ತು. ಬನ್ನಿ ಅಂತಾ ಕರೆದಿದ್ದೆವು ಬಂದಿಲ್ಲ. ನಿಮಗೆ ಕೋಲೆ ಬಸವ ಗೊತ್ತಲ್ಲ. ತಲೆ ಎತ್ತಿ ಕುಣಿಸೋದು, ಇಲ್ಲದಿದ್ದರೆ ತಲೆ ಬಗ್ಗಿಸೋದು. ಬಿಜೆಪಿಯವರು ಈ ರೀತಿ ನಡೆದುಕೊಳ್ತಿದ್ದಾರೆ. ಬಿಜೆಪಿ ನಾಯಕರು ಎಂದೂ ಕೂಡ ಮೋದಿ ಸರ್ಕಾರದ ಮುಂದೆ ಧ್ವನಿ ಎತ್ತಲೇ ಇಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಇನ್ನು ಮಾಜಿ ಸಿಎಂ ಯಡಿಯೂರಪ್ಪಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರಿಗೆ ಪತ್ರ ಬರೆಯಿರಿ. ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಹೋಗಿ ಕೇಳಿ ಎಂದು ಹೇಳಿದ್ದೆ. ಬರೀ ನನ್ನ ಕಂಠ ಶೋಷಣೆ ಆಯಿತು. ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ಅಮ್ಮಾ.. ಅಮ್ಮಾ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಪ್ರತಿ ಪೈಸೆ ಲೆಕ್ಕ ಕೊಟ್ಟ ಸಿಎಂ ಸಿದ್ದರಾಮಯ್ಯ; ಎಲ್ಲರೂ ಫುಲ್​ ಶಾಕ್​!

ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ಇಡೀ ದೇಶದಲ್ಲೇ ಎರಡನೇ ರಾಜ್ಯ. ಹೀಗಿರುವಾಗ ನಮಗೆ ಯಾಕೆ ತಾರತಮ್ಯ. ನಾಲ್ಕು ಲಕ್ಷ ಮೂವತ್ತು ಸಾವಿರ ಕೋಟಿಯನ್ನ ಕೇಂದ್ರ ಸರ್ಕಾರಕ್ಕೆ ತೆರಿಗೆ ರೂಪದಲ್ಲಿ ಕೊಡುತ್ತಿದ್ದೇವೆ. ಆದರೆ ಕೇಂದ್ರ ಸರ್ಕಾರ 100ಕ್ಕೆ ಕೇವಲ 12 ರಿಂದ 13 ರೂಪಾಯಿ ಮಾತ್ರ ಕೊಡುತ್ತಿದೆ. ಇದು ಅನ್ಯಾಯವಲ್ವಾ. ನಮಗೆ ಆಗಿರುವ ಅನ್ಯಾಯದ ಕಾರಣ ಪ್ರತಿಭಟನೆ ನಡೆಸುತ್ತಿದ್ದೇವೆ. ಕೇಂದ್ರ ಸರ್ಕಾರ, ದೇಶದ ಜನರ ಗಮನ ಸೆಳೆಯಲು ಪ್ರತಿಭಟನೆ ಮಾಡುತ್ತಿದ್ದೇವೆ. ಇದು ಕರ್ನಾಟಕ ಸರ್ಕಾರದಿಂದ ಐತಿಹಾಸಿಕ ಪ್ರತಿಭಟನೆ. ಯಾವುದೇ ಪಕ್ಷದ ವಿರುದ್ಧ ಪ್ರತಿಭಟನೆ ಅಲ್ಲ. ಕಾಂಗ್ರೆಸ್, ಬಿಜೆಪಿ ವಿರುದ್ಧ ಮಾಡುವ ಚಳವಳಿ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಮೋದಿ ಮುಂದೆ ತಲೆ ಎತ್ತಿ ಕುಣಿಸೋದು, ಇಲ್ಲದಿದ್ದರೆ ತಲೆ ಬಗ್ಗಿಸೋದು’- ಬಿಜೆಪಿಗರನ್ನು ಕೋಲೆ ಬಸವ ಎಂದ ಸಿದ್ದು

https://newsfirstlive.com/wp-content/uploads/2024/02/Siddaramaiah-CM-1.jpg

Load More