ಬಸ್ಸಿಗೆ ನಮಸ್ಕರಿಸಿ ಉಚಿತ ಪ್ರಯಾಣ ಮಾಡಿದ್ದ ಅಜ್ಜಿ
ಖಾಸಗಿ ಕಾರ್ಯಕ್ರಮದಲ್ಲಿ ಅಜ್ಜಿಯನ್ನು ಭೇಟಿ ಮಾಡಿದ ಸಿಎಂ
ಸಂಗೊಳ್ಳಿ ಸಂಗವ್ವರನ್ನು ನೋಡಿ ಅಚ್ಚರಿಗೊಂಡ ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ನೀಡಿದ ಭರವಸೆಯಂತೆ ಅಧಿಕಾರಕ್ಕೆ ಬಂದ ಕೂಡಲೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿ ಮಾಡಿ ಆದೇಶಿಸಿತ್ತು. ಐದು ಗ್ಯಾರಂಟಿಗಳಲ್ಲಿ ಒಂದಾದ ಸ್ತ್ರೀಶಕ್ತಿ ಯೋಜನೆಯಿಂದ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಆ ಅವಕಾಶ ಕಲ್ಪಿಸಿದಕ್ಕೆ ರಾಜ್ಯದ ಮಹಿಳೆಯರು ಫುಲ್ ಖುಷ್ ಆಗಿದ್ದರು. ಅದರಲ್ಲೂ ಸ್ತ್ರೀಶಕ್ತಿ ಯೋಜನೆ ಜಾರಿಯಾದ ಮೊದಲ ದಿನ ಬೆಳಗಾವಿಯ ವಯಸ್ಸಾದ ಅಜ್ಜಿಯೊಬ್ಬರು ಉಚಿತ ಪ್ರಯಾಣ ಮಾಡುವಾಗ ಸರ್ಕಾರಿ ಬಸ್ ಮೆಟ್ಟಿಲುಗಳಿಗೆ ತಲೆಬಾಗಿ ನಮಸ್ಕರಿಸಿದ್ದರು. ಆ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು.
ವೈರಲ್ ಆದ ಸಂಗೊಳ್ಳಿ ಸಂಗವ್ವ ಅವರ ಫೋಟೋಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ X ಖಾತೆಯಲ್ಲಿ ‘‘ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೆ ಸಮಾಜದ ಎಲ್ಲಾ ವಿಧದ ಸೌಲಭ್ಯಗಳನ್ನು ಕೂತಲ್ಲಿಯೇ ಅನುಭವಿಸುತ್ತಿರುವ ಜನರಿಂದ ತರತರನಾದ ಟೀಕೆಗಳು, ಕುಹಕ, ವ್ಯಂಗ್ಯಗಳು ವ್ಯಕ್ತವಾದವು. ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಇಂದು ಶಕ್ತಿ ಯೋಜನೆಯನ್ನು ಜಾರಿಗೆ ಕೊಟ್ಟೆವು. ನಮ್ಮ ಯೋಜನೆ ಜಾರಿಗೊಂಡ ನಂತರ ತಾಯಿಯೊಬ್ಬರು ಧಾರವಾಡ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ನಮಸ್ಕರಿಸಿ ಅತ್ಯಂತ ಸಂತೋಷದಿಂದ ಉಚಿತ ಪ್ರಯಾಣ ಬೆಳೆಸಿದರು. ನಾವು ಎಷ್ಟು ಅನುದಾನ ಖರ್ಚು ಮಾಡುತ್ತೇವೆ ಎನ್ನುವುದಕ್ಕಿಂತ ಯಾರಿಗಾಗಿ ಆ ಹಣ ವಿನಿಯೋಗಿಸುತ್ತಿದ್ದೇವೆ ಎಂಬುದು ಮುಖ್ಯ. ಈ ಕ್ಷಣ ಇನ್ನೂ ನೂರು ವಿಧದಲ್ಲಿ ಟೀಕೆಗಳು ಎದುರಾದರೂ ಅದ್ಯಾವುದಕ್ಕೂ ಕುಗ್ಗದಂತೆ ನನ್ನನ್ನು ಗುರಿಯೆಡೆಗೆ ಮತ್ತಷ್ಟು ದೃಢವಾಗಿಸಿದೆ’’ ಎಂದು ಬರೆದುಕೊಂಡು ಶೇರ್ ಮಾಡಿಕೊಂಡಿದ್ದರು.
ಶಕ್ತಿ ಯೋಜನೆ ಜಾರಿಯಾದ ದಿನ ಅತ್ಯಂತ ಸಂತಸದಿಂದ ಸರ್ಕಾರಿ ಬಸ್ಸಿನ ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರಯಾಣ ಬೆಳೆಸಿದ್ದ ಬೆಳಗಾವಿ ಜಿಲ್ಲೆಯ ಸಂಗೊಳ್ಳಿಯ ಸಂಗವ್ವ ಅವರನ್ನು ಇಂದು ಕಲರ್ಸ್ ಕನ್ನಡದ ಅನುಬಂಧ ಅವಾರ್ಡ್ ಕಾರ್ಯಕ್ರಮದಲ್ಲಿ ಭೇಟಿಯಾದದ್ದು ನನ್ನಲ್ಲಿ ಅಚ್ಚರಿ ಮತ್ತು ಖುಷಿಯ ಜೊತೆಗೆ ಸಾರ್ಥಕ್ಯದ ಭಾವ ಮೂಡಿಸಿತು.
ಮಹಿಳೆಯರ ಸಬಲೀಕರಣಕ್ಕೆ… pic.twitter.com/oYoHT1UL9k
— Siddaramaiah (@siddaramaiah) September 3, 2023
ಈಗ ಕಲರ್ಸ್ ಕನ್ನಡ ವಾಹಿನಿಯ ಅನುಬಂಧ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಂಗೊಳ್ಳಿ ಸಂಗವ್ವ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ. ಅವರೊಂದಿಗೆ ಆತ್ಮೀಯವಾಗಿ ಮಾತನಾಡಿರೋ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೆಚ್ಚುಗೆಗೆ ಪಾತ್ರವಾಗಿದೆ. ಈ ಕುರಿತು X ಖಾತೆಯಲ್ಲಿ ಬರೆದುಕೊಂಡ ಸಿಎಂ ಸಿದ್ದರಾಮಯ್ಯನವರು, ಶಕ್ತಿ ಯೋಜನೆ ಜಾರಿಯಾದ ದಿನ ಅತ್ಯಂತ ಸಂತಸದಿಂದ ಸರ್ಕಾರಿ ಬಸ್ಸಿನ ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರಯಾಣ ಬೆಳೆಸಿದ್ದ ಬೆಳಗಾವಿ ಜಿಲ್ಲೆಯ ಸಂಗೊಳ್ಳಿಯ ಸಂಗವ್ವ ಅವರನ್ನು ಕಲರ್ಸ್ ಕನ್ನಡದ ಅನುಬಂಧ ಅವಾರ್ಡ್ ಕಾರ್ಯಕ್ರಮದಲ್ಲಿ ಭೇಟಿಯಾದದ್ದು ನನ್ನಲ್ಲಿ ಅಚ್ಚರಿ ಮತ್ತು ಖುಷಿಯ ಜೊತೆಗೆ ಸಾರ್ಥಕ್ಯದ ಭಾವ ಮೂಡಿಸಿತು. ಮಹಿಳೆಯರ ಸಬಲೀಕರಣಕ್ಕೆ ನಾವು ಬೆಂಬಲವಾಗಿ ನಿಲ್ಲಬೇಕು ಎನ್ನುವ ಕಾಳಜಿಯಿಂದ ಜಾರಿಗೆ ತಂದಿರುವ ಶಕ್ತಿ ಯೋಜನೆಯ ಮೊದಲ ದಿನವೇ ಸಂಗವ್ವ ಅವರಿಂದ ದೊರೆತ ಪ್ರತಿಕ್ರಿಯೆ ಕಂಡು ನಮ್ಮ ಯೋಜನೆ ನೂರಕ್ಕೆ ನೂರರಷ್ಟು ಯಶಸ್ವಿಯಾಗಲಿದೆ ಎಂಬ ಭರವಸೆ ನನ್ನಲ್ಲಿ ಮೂಡಿತ್ತು. ಎಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ