/newsfirstlive-kannada/media/post_attachments/wp-content/uploads/2025/05/SIDDU-HARIPRASAD.jpg)
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇವತ್ತು ಮಹತ್ವದ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಹಿರಿಯ ನಾಯಕರಾದ ಹರಿಪ್ರಸಾದ್ ಅವರನ್ನು ಭೇಟಿಯಾಗಿದ್ದಾರೆ. ಹರಿಪ್ರಸಾದ್ ಅವರ ನಿವಾಸಕ್ಕೆ ಆಗಮಿಸಿದ್ದ ಮುಖ್ಯಮಂತ್ರಿಗಳು ಉಪಹಾರ ಸೇವಿಸಿ ಕೆಲವು ಹೊತ್ತು ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿ ವಾಪಸ್ ಆಗಿದ್ದಾರೆ.
ಇದನ್ನೂ ಓದಿ: ಭವಿಷ್ಯದಲ್ಲಿ ಬದಲಾಗಲಿದೆ ಗಡಿಯಾರ, ದಿನಕ್ಕೆ 25 ಗಂಟೆ! ಅಚ್ಚರಿ ವಿಚಾರ ಬಹಿರಂಗ..!
ನೆನ್ನೆ ರಾಜ್ಯಕ್ಕೆ ಎಐಸಿಸಿ ನಾಯಕರಾದ ರಂದೀಪ್ ಸುರ್ಜೇವಾಲಾ, ಕೆಸಿ ವೇಣುಗೋಪಾಲ್ ಭೇಟಿ ನೀಡಿದ್ದರು. ದೆಹಲಿ ನಾಯಕರ ಜೊತೆ ಸಿಎಂ ಚರ್ಚೆ ನಡೆಸಿದ್ದರು. ಬೆನ್ನಲ್ಲೇ ಹರಿಪ್ರಸಾದ್ ನಿವಾಸಕ್ಕೆ ಸಿದ್ದರಾಮಯ್ಯ ದೌಡಾಯಿಸಿದ್ದಾರೆ. ಇದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಹರಿಪ್ರಸಾದ್ ಅವರು ಬ್ರೇಕ್ಫಾಸ್ಟ್ಗೆ ಕರೆದಿದ್ದರು. ಬರುತ್ತೇನೆ ಎಂದಿದ್ದೆ, ಅದರಂತೆ ಇಲ್ಲಿಗೆ ಬಂದಿದ್ದೆ. ರಾಜಕೀಯ ಚರ್ಚೆ ಸೇರಿ ಮಂಗಳೂರಿನ ವಿಚಾರ ಚರ್ಚೆ ಮಾಡಿದ್ದೇವೆ. ರಾಜಕೀಯ ಚರ್ಚೆ ಅಂತಲ್ಲ, ಜನರಲ್ ಆಗಿ ಚರ್ಚೆ ಮಾಡಿದ್ದೇವೆ. ಅದರಲ್ಲಿ ಮಂಗಳೂರು ವಿಚಾರ ಚರ್ಚೆಯಾಗಿದೆ. ಅಲ್ಲಿಗೆ ಸೌಹಾರ್ದತೆ ಬರಬೇಕು, ಹಿಂದೂಗಳು ಮುಸ್ಲಿಂ ನಡುವೆ ಯಾವುದೇ ದ್ವೇಷ ಇರಬಾರದು. ಸೌಹಾರ್ದತೆ ಬರಬೇಕು ಎಂದು ಚರ್ಚೆ ಮಾಡಿದ್ದೇವೆ. ನಾನು ಹರಿಪ್ರಸಾದ್ಗೆ ಮಂಗಳೂರಿಗೆ ಹೋಗಿ ಬನ್ನಿ ಎಂದಿದ್ದೇನೆ. ಅಲ್ಲಿನ ಪರಿಸ್ಥಿತಿ ಬಗ್ಗೆ ಅವಲೋಕಿಸಿ ಬನ್ನಿ ಎಂದಿದ್ದೇನೆ -ಸಿದ್ದರಾಮಯ್ಯ, ಮುಖ್ಯಮಂತ್ರಿ
ಆ ಮೂಲಕ ರಾಜ್ಯದ ಹಿರಿಯ ನಾಯಕರ ವಿಶ್ವಾಸ ಗಳಿಸಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬ್ರೇಕ್ಫಾಸ್ಟ್ ನೆಪದಲ್ಲಿ ಹರಿಪ್ರಸಾದ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ಇಬ್ಬರು ನಾಯಕರು ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ. ಹರಿಪ್ರಸಾದ್ರನ್ನ ಸಭಾಪತಿ ಸ್ಥಾನದಲ್ಲಿ ಕೂರಿಸಲು ಮನವೊಲಿಕೆ ನಡೆಯುತ್ತಿದೆ. ಸಭಾಪತಿ ಸ್ಥಾನಕ್ಕೆ ಒಪ್ಪದಿದ್ದಲ್ಲಿ ಅಂತಿಮವಾಗಿ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ.
ಇದನ್ನೂ ಓದಿ: ಈ ಆಟಗಾರನ ಕೈಯಲ್ಲಿದೆ RCB ಫೈನಲ್ ಭವಿಷ್ಯ.. ಇವತ್ತು ಸೆಂಟರ್ ಆಫ್ ಅಟ್ರಾಕ್ಷನ್ ಇವರೇ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ