/newsfirstlive-kannada/media/post_attachments/wp-content/uploads/2024/10/Cm-Siddaramaiah-Hassanambha.jpg)
ಹಾಸನ: ಮುಡಾ ಪ್ರಕರಣ, ವಾಲ್ಮೀಕಿ ಹಗರಣ ಸೇರಿದಂತೆ ಅನೇಕ ವಿಚಾರಗಳಲ್ಲಿ ಸಂಕಷ್ಟ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಹಾಸನಾಂಬೆ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಖಡ್ಗಮಾಲಾ ಸ್ತೋತ್ರದ ಮೂಲಕ ಅರ್ಚನೆ ಮಾಡಿಸಿರೋದು ಕುತೂಹಲಕ್ಕೆ ಕಾರಣವಾಗಿದೆ.
ಸಿಎಂ ಸಿದ್ದರಾಮಯ್ಯ ನಿನ್ನೆ ಹಾಸನಾಂಬೆ ದೇವಿ ದರ್ಶನಕ್ಕೆ ತೆರಳಿದ್ದರು. ಸಾಮಾನ್ಯವಾಗಿ ಹಾಸನಾಂಬೆ ದರ್ಶನ ಪಡೆಯುವಾಗ ಅಷ್ಟೋತ್ತರದಿಂದ ಪೂಜೆ ಮಾಡುವುದು ವಾಡಿಕೆಯಾಗಿದೆ. ಆದರೆ ಈ ಬಾರಿ ಸಿಎಂ ಸಿದ್ದರಾಮಯ್ಯ ಅವರು ಖಡ್ಗಮಾಲಾ ಸ್ತೋತ್ರದ ಮೂಲಕ ದೇವಿಯನ್ನು ಪ್ರಾರ್ಥಿಸಿದ್ದು ವಿಶೇಷವಾಗಿದೆ.
ಇದನ್ನೂ ಓದಿ: ಪೂಜೆ ಮಾಡುವಾಗ ಬಿದ್ದ ಹೂವುಗಳು.. ಹೆಚ್​.ಡಿ ಕುಮಾರಸ್ವಾಮಿಗೆ ಶುಭ ಸೂಚನೆ ನೀಡಿತಾ ದೇವರು..?
ಏನಿದು ಖಡ್ಗಮಾಲಾ ಸ್ತೋತ್ರ? 
ಖಡ್ಗಮಾಲಾ ಸ್ತೋತ್ರ ಶಕ್ತಿ ದೇವಿಯ ಅತ್ಯಂತ ಪವಿತ್ರ ಮತ್ತು ಶಕ್ತಿಯುತ ಮಂತ್ರ. ಖಡ್ಗಮಾಲಾ ಸ್ತೋತ್ರವನ್ನು ಪಠಿಸುವುದರಿಂದ ಅತೀಂದ್ರಿಯ ಆಯುಧಗಳ ರಕ್ಷಣಾತ್ಮಕ ಮಾಲೆ ಸಿಗುತ್ತದೆ. ಜೊತೆಗೆ ಎಲ್ಲಾ ರೀತಿಯ ಸಮಸ್ಯೆಗಳಿಂದ ಇದು ಮುಕ್ತಿ ನೀಡುತ್ತದೆ ಎನ್ನುವ ನಂಬಿಕೆ ಇದೆ.
ಸದ್ಯ ರಾಜ್ಯ ರಾಜಕೀಯದಲ್ಲಿ ಮುಡಾ ಹಗರಣ ಸೇರಿದಂತೆ ಅನೇಕ ವಿವಾದಗಳಲ್ಲಿ ಸಿಎಂ ಸಿದ್ದರಾಮಯ್ಯ ತೊಂದರೆಗಳನ್ನ ಎದುರಿಸುತ್ತಿದ್ದಾರೆ. ಸಂಕಷ್ಟಗಳ ಮೇಲೆ ಸಂಕಷ್ಟಗಳನ್ನ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಈಗ ಹಾಸನಾಂಬೆಯ ಮೊರೆ ಹೋಗಿದ್ದಾರೆ. ಕಾಪಾಡು ತಾಯಿ ಅಂತ ಶಕ್ತಿ ದೇವತೆಗೆ ವಿಶೇಷ ಅರ್ಚನೆ ಸಲ್ಲಿಸಿದ್ದಾರೆ. ಶಕ್ತಿ ದೇವತೆಗೆ ಶಕ್ತಿ ಮಂತ್ರದ ಅರ್ಚನೆ ಮಾಡಿರುವುದರಿಂದ ಖಡ್ಗಮಾಲಾ ರಕ್ಷಣೆ ಸಿಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
 Follow Us