newsfirstkannada.com

‘ಬಿಜೆಪಿ ಜಾರಿಗೆ ತಂದ ರೈತ ವಿರೋಧಿ ಕೃಷಿ ಕಾಯ್ದೆಗಳು ರದ್ದು ಮಾಡುತ್ತೇವೆ’- ಸಿಎಂ ಸಿದ್ದರಾಮಯ್ಯ ಘೋಷಣೆ

Share :

17-07-2023

    ‘ಬಿಜೆಪಿ ಜಾರಿಗೆ ತಂದ ರೈತ ವಿರೋಧಿ ಕಾಯ್ದೆಗಳು’

    ರೈತ ವಿರೋಧಿ ಕಾಯ್ದೆ ರದ್ದು ಮಾಡುತ್ತೇವೆ ಎಂದ ಸಿಎಂ

    ಇಂದು ರೈತ ಸಂಘದ ಮುಖಂಡರಿಗೆ ಸಿಎಂ ಅಭಯ

ಬೆಂಗಳೂರು: ಬಿಜೆಪಿ ಸರ್ಕಾರ ಜಾರಿಗೆ ತಂದ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ನಾವು ಒಂದು ತೀರ್ಮಾನ ತೆಗೆದುಕೊಳ್ಳಲಿದ್ದೇವೆ. ರೈತರ ಹಿತದೃಷ್ಟಿಯಿಂದಲೇ ಸರ್ಕಾರ ನಿರ್ಧಾರಗಳನ್ನು ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಶಾಸಕ ಬಿ.ಆರ್.ಪಾಟೀಲ್ ಹಾಗೂ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದೆ. ಈ ಸಂದರ್ಭದಲ್ಲಿ ಮಾತಾಡಿದ ಸಿಎಂ ಸಿದ್ದರಾಮಯ್ಯ, ಭೂ ಸುಧಾರಣಾ ಕಾಯ್ದೆ ಬಗ್ಗೆ ಚರ್ಚೆ ಆಗಿದೆ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಸ್ಪಷ್ಟ ತೀರ್ಮಾನಕ್ಕೆ ಬರಲಾಗುವುದು. ಎಪಿಎಂಸಿ ಕಾಯ್ದೆ ತಿದ್ದುಪಡಿ ಬಗ್ಗೆ ಇಂದು ಸದನದಲ್ಲಿ ಚರ್ಚೆ ನಡೆದಿದೆ. ರೈತರ ಸಮಸ್ಯೆ ಬಗ್ಗೆ ವಿಸ್ತ್ರುತ ಚರ್ಚೆ ಮಾಡಲು ಪ್ರತ್ಯೇಕ ಸಭೆ ನಡೆಸಲಾಗುವುದು ಎಂದರು.

ಬಜೆಟ್​​ನಿಂದ ಹೊರಗುಳಿದಿರುವ ಕೆಲವು ವಿಚಾರಗಳ ಬಗ್ಗೆ ಚರ್ಚಿಸಬೇಕು. ಸರ್ಕಾರ ಮಾರ್ಪಾಡು ಮಾಡಿರುವ ಎಪಿಎಂಸಿ ಕಾಯ್ದೆ ಬಗ್ಗೆ ಕೂಡ ಚರ್ಚೆ ಮಾಡಬೇಕಿದೆ ಎಂದರು ಶಾಸಕ ಬಿ.ಆರ್ ಪಾಟೀಲ್.

ಹೊಸ ಸರ್ಕಾರ 5 ಗ್ಯಾರಂಟಿಗಳನ್ನು ಜಾರಿಗೆ ತಂದಿರುವುದು ಎಪಿಎಂಸಿ ಕಾಯ್ದೆ ಮಾರ್ಪಾಡು ಮಾಡಿರುವುದು ಸ್ವಾಗತಾರ್ಹ. ಕೆಲವು ವಿಚಾರಗಳ ಬಗ್ಗೆ ಚರ್ಚೆ ಅಗತ್ಯವಿದೆ. ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ವಾಪಸ್ಸು ಪಡೆಯಬೇಕು ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದು, ಆದಷ್ಟು ಬೇಗ ವಾಪಸ್ ಪಡೆಯಬೇಕು. ತಿದ್ದುಪಡಿ ಉಳುವವರ ಕೇಂದ್ರಿತವಾಗಿರಬೇಕು. ಜಾನುವಾರು ಹತ್ಯೆ ನಿಷೇಧ ಕೂಡ ವಾಪಸ್ಸು ಪಡೆಯಬೇಕು. ಹಿಂದೆ ಕೃಷಿ ಬೆಲೆ ಆಯೋಗವನ್ನು ಘೋಷಣೆ ಮಾಡಲಾಗಿತ್ತು. ಅದಕ್ಕೆ ಶಾಸನಾತ್ಮಕ ರೂಪ ಕೊಟ್ಟು, ಆವರ್ತ ನಿಧಿ ನೀಡಬೇಕು. ಕೇಂದ್ರ ಸರ್ಕಾರ ಪಡಿತರ ವ್ಯವಸ್ಥೆಗೆ ಅಕ್ಕಿ ಕೊಡದೆ ರಾಜಕೀಯ ಮಾಡಿರುವುದನ್ನು ವಿರೋಧಿಸುತ್ತೇವೆ. ಪೌಷ್ಟಿಕ ಆಹಾರ ನೀಡಲು ಪಡಿತರ ವ್ಯವಸ್ಥೆಗೆ ರೈತರೆ ಆಹಾರ ಧಾನ್ಯ ಕೊಡುವ ವ್ಯವಸ್ಥೆ ಮಾಡಬಹುದು. ಆಗ ಸಮಸ್ಯೆಗಳು ಬಗೆಹರಿಯುತ್ತದೆ ಎಂದು ರೈತರು ಸಲಹೆ ನೀಡಿದರು. ಸರ್ಕಾರ ರೈತರ ಹಿತವನ್ನು ಕಾಪಾಡಬೇಕು ಎಂದು ರೈತರು ಮನವಿ ಮಾಡಿದರು.

ಕೃಷಿ ಸಚಿವ ಚೆಲುವರಾಯಸ್ವಾಮಿ, ತೋಟಗಾರಿಕಾ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಹಾಗೂ ರೈತ ಮುಖಂಡರು ಸಭೆಯಲ್ಲಿ ಹಾಜರಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಬಿಜೆಪಿ ಜಾರಿಗೆ ತಂದ ರೈತ ವಿರೋಧಿ ಕೃಷಿ ಕಾಯ್ದೆಗಳು ರದ್ದು ಮಾಡುತ್ತೇವೆ’- ಸಿಎಂ ಸಿದ್ದರಾಮಯ್ಯ ಘೋಷಣೆ

https://newsfirstlive.com/wp-content/uploads/2023/07/Siddaramaiah-10-1.webp

Load More