newsfirstkannada.com

ಉದ್ಯೋಗಾಂಕ್ಷಿಗಳಿಗೆ ಗುಡ್​​ನ್ಯೂಸ್​ ಕೊಟ್ಟ ಸಿಎಂ ಸಿದ್ದರಾಮಯ್ಯ; ಖಾಲಿ ಇರೋ ಸರ್ಕಾರಿ ಹುದ್ದೆಗಳ ಭರ್ತಿ ಯಾವಾಗ?

Share :

08-07-2023

  ಉದ್ಯೋಗಾಂಕ್ಷಿಗಳಿಗೆ ಗುಡ್​​ನ್ಯೂಸ್​ ಕೊಟ್ಟ ಸಿಎಂ

  ಖಾಲಿ ಇರೋ ಸರ್ಕಾರಿ ಹುದ್ದೆಗಳ ಭರ್ತಿ ಯಾವಾಗ?

  ಸರ್ಕಾರಿ ಉದ್ಯೋಗ ನೇಮಕಾತಿ ಬಗ್ಗೆ ಸಿಎಂ ಹೇಳಿದ್ದಿಷ್ಟು

ಬೆಂಗಳೂರು: ಇಂದು ಜನಮನ ಪ್ರತಿಷ್ಠಾನ ಮತ್ತು ಸಮತಾ ಅಧ್ಯಯನ ಕೇಂದ್ರ ದೇವರಾಜ ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದರು.

ಕಾರ್ಯಕ್ರಮದಲ್ಲಿ ಮಾತಾಡಿದ ಸಿಎಂ ಸಿದ್ದರಾಮಯ್ಯ, ಮಕ್ಕಳು ವಿಶ್ವಪ್ರಜ್ಞೆ ಬೆಳೆಸಿಕೊಂಡು ವೈಚಾರಿಕವಾಗಿ ಸನ್ನದ್ಧಗೊಳ್ಳುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೆಲಸ ಮಾಡಲಿದೆ. ಬೋಧಕರು ಜಾತ್ಯತೀತವಾಗಿಲ್ಲದಿದ್ದರೆ, ಶಿಕ್ಷಕರಲ್ಲೇ ವೈಚಾರಿಕತೆ ಇಲ್ಲದಿದ್ದರೆ ಮಕ್ಕಳಲ್ಲಿ ಜ್ಞಾನದ ವಿಕಾಸ ಸಾಧ್ಯವಾಗುವುದಿಲ್ಲ ಎಂದರು.

ನಮ್ಮ ಯುವ ಸಮೂಹದ ಶಕ್ತಿ ಮತ್ತು ಚೈತನ್ಯ ದುರುಪಯೋಗ ಆಗಬಾರದು, ಜಾತಿ-ಧರ್ಮದ ಹೆಸರಲ್ಲಿ ಗಲಭೆಗಳಿಗೆ ಯುವ ಸಮೂಹ ದುರ್ಬಳಕೆ ಆಗುವುದನ್ನು ತಪ್ಪಿಸುವ ರೀತಿಯಲ್ಲಿ ನಮ್ಮ ಸರ್ಕಾರ ನೀತಿ ರೂಪಿಸಿದೆ. ಇದಕ್ಕಾಗಿ ಕೌಶಲ್ಯ ತರಬೇತಿ ಜತೆಗೆ ನಿರುದ್ಯೋಗಿ ಯುವ ಸಮೂಹಕ್ಕೆ 24 ತಿಂಗಳ ಕಾಲ ಯುವನಿಧಿ ನೀಡಲು ನಿರ್ಧರಿಸಿದ್ದೇವೆ ಎಂದರು.

ಖಾಲಿ ಇರೋ ಸರ್ಕಾರಿ ಹುದ್ದೆಗಳ ಭರ್ತಿ ಯಾವಾಗ?

ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನಾವು ಪ್ರಣಾಳಿಕೆಯಲ್ಲಿ ಹೇಳಿದ್ದೆವು. ಅದರಂತೆ ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳುತ್ತೇವೆ. ಅಲ್ಲಿಯವರೆಗೂ ಹೊರ ಗುತ್ತಿಗೆ ನೇಮಕಾತಿಗಳಲ್ಲೂ ಮೀಸಲಾತಿ ತರುವ ಉದ್ದೇಶ ಹೊಂದಿದ್ದೇವೆ ಎಂದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಉದ್ಯೋಗಾಂಕ್ಷಿಗಳಿಗೆ ಗುಡ್​​ನ್ಯೂಸ್​ ಕೊಟ್ಟ ಸಿಎಂ ಸಿದ್ದರಾಮಯ್ಯ; ಖಾಲಿ ಇರೋ ಸರ್ಕಾರಿ ಹುದ್ದೆಗಳ ಭರ್ತಿ ಯಾವಾಗ?

https://newsfirstlive.com/wp-content/uploads/2023/07/Siddaramaiah-10.webp

Load More