ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲ್ಲ ಎಂದು ಕೇಂದ್ರ ಸರ್ಕಾರ
ಅಕ್ಕಿಗಾಗಿ ಚತ್ತೀಸ್ಗಡ ಮೊರೆ ಹೋದ ಸಿಎಂ ಸಿದ್ದರಾಮಯ್ಯ..!
ಚತ್ತೀಸ್ಗಡದಲ್ಲಿ 1.50 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಲಭ್ಯ- CM
ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಚತ್ತೀಸ್ಗಡ ರಾಜ್ಯದಲ್ಲಿ 1.50 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಲಭ್ಯವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಸಂಬಂಧ ಮಾತಾಡಿದ ಸಿಎಂ ಸಿದ್ದರಾಮಯ್ಯ ಅಕ್ಕಿ ಏನೋ ಲಭ್ಯವಿದೆ. ಆದರೆ ಸಾರಿಗೆ ವೆಚ್ಚ ಹೆಚ್ಚಾಗಲಿದೆ. ಇಂದು ಸಂಜೆ ಈ ಬಗ್ಗೆ ಮತ್ತೊಂದು ಸಭೆ ಕರೆದಿದ್ದು, ಚರ್ಚಿಸಲಾಗುವುದು ಎಂದರು.
ತೆಲಂಗಾಣದ ಸಿಎಂ ಕೆ. ಚಂದ್ರಶೇಖರ್ ರಾವ್ ಅವರೊಂದಿಗೆ ನಾನೇ ಖುದ್ದಾಗಿ ಮಾತನಾಡಿದ್ದು, ಅಲ್ಲಿ ಅಕ್ಕಿ ಲಭ್ಯವಿಲ್ಲ. ಆಂಧ್ರಪ್ರದೇಶ ಸಿಎಂ ಜತೆಗೆ ನಮ್ಮ ಮುಖ್ಯ ಕಾರ್ಯದರ್ಶಿಗಳು ಮಾತಾಡುತ್ತಿದ್ದಾರೆ. ಅಗತ್ಯಬಿದ್ದರೆ ನಾನು ಮಾತಾಡುವೆ ಎಂದಿದ್ದಾರೆ ಸಿದ್ದರಾಮಯ್ಯ.
ಇನ್ನು, ಈ ಹಿಂದೆ ರಾಜ್ಯದಲ್ಲೇ ಅಕ್ಕಿ ಲಭ್ಯವಿದೆ. ಕಮಿಷನ್ ಆಮಿಷಕ್ಕೆ ಹೊರ ರಾಜ್ಯಗಳಿಂದ ಅಕ್ಕಿ ಖರೀದಿಸಲಾಗುತ್ತಿದೆ ಎಂದು ಬಿಜೆಪಿ ಶಾಸಕ ಬಿ.ವೈ ವಿಜಯೇಂದ್ರ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲೇ ದೊರೆಯುವುದಾದರೆ ಕೊಡಿಸಲಿ ಎಂದರು.
ಸಿಎಂ ಸಿದ್ದರಾಮಯ್ಯ ಕನಸಿನ ಅನ್ನಭಾಗ್ಯ ಯೋಜನೆಗೆ ಈಗಾಗಲೇ ಕೇಂದ್ರ ಸರ್ಕಾರ ಅಡ್ಡಗಾಲು ಹಾಕಿದೆ. ದುಡ್ಡು ಕೊಡುತ್ತೇವೆ ಎಂದರೂ ಅಕ್ಕಿ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಕಾಂಗ್ರೆಸ್ ಬಡವರಿಗೆ ಒಳ್ಳೇ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಷಡ್ಯಂತ್ರ ಮಾಡುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ