newsfirstkannada.com

ಜಾತ್ಯಾತೀತ ಹೆಸರಿಟ್ಟುಕೊಂಡು ಕೋಮುವಾದಿಗಳೊಂದಿಗೆ ಸೇರ್ಕೊಂಡಿದ್ದಾರೆ; ಜೆಡಿಎಸ್​ ಮೈತ್ರಿ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

Share :

09-09-2023

    ನಾನು ಜೆಡಿಎಸ್​ನ ಬಿಜೆಪಿಯ ಬಿ ಟೀಮ್ ಅಂತಿದ್ದೆ

    ಜೆಡಿಎಸ್​ ಮೈತ್ರಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

    ಹುಬ್ಬಳ್ಳಿಗೆ ಆಗಮಿಸಿದ ವೇಳೆ ಮೈತ್ರಿ ಪಕ್ಷಗಳ ಕುರಿತು ಸಿಎಂ ಟಾಕ್

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯನವರು ಬಿಜೆಪಿ-ಜೆಡಿಎಸ್​ ಮೈತ್ರಿ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ನಾನು ಜೆಡಿಎಸ್​ನ ಬಿಜೆಪಿಯ ಬಿ ಟೀಮ್ ಅಂತಿದ್ದೆ. ಅದಕ್ಕೆ ಅವರು ಕೋಪಿಸಿಕೊಳ್ತಿದ್ರು. ಜಾತ್ಯಾತೀತ ಹೆಸರಿಟ್ಟುಕೊಂಡು ಕೋಮುವಾದಿಗಳೊಂದಿಗೆ ಸೇರ್ಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ದೇವೇಗೌಡರು ಯಾರೊಂದಿಗೂ ಸೇರಿಕೊಳ್ಳಲ್ಲ ಅಂತ ಪಕ್ಷದ ಉಳಿವಿಗಾಗಿ ಸೇರ್ಕೊಂಡ್ವಿ ಅಂತಾರೆ. ಅಧಿಕಾರಕ್ಕಾಗಿ ಏನೆಲ್ಲಾ ಮಾಡ್ತಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

ಪೊಲೀಸರಿಂದ ಸಿಎಂಗೆ ಗೌರವ

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂಗೆ ಬಿಗಿ ಬಂದೋಬಸ್ತ್ ಮೂಲಕ ಪೊಲೀಸರು ಗೌರವ ನೀಡಿದರು. ಈ ವೇಳೆ ಮಹದಾಯಿ ಹೋರಾಟಗಾರರು ಸೇರಿದಂತೆ ಹಲವು ರೈತ ಸಂಘಟನೆಗಳು ಸಿಎಂಗೆ ಮನವಿ ಮಾಡಿದ್ದಾರೆ. ಈ ವೇಳೆ ಸಿಎಂ ಜೊತೆ ಸಚಿವ ಚಲುವರಾಯಸ್ವಾಮಿ, ಸಂತೋಷ ಲಾಡ್, ಸಲಿಂ ಅಹ್ಮದ್, ಜೊತೆಗೆ ಶಾಸಕ ಪ್ರಸಾದ್ ಅಬ್ಬಯ್ಯ, ಎನ್ ಹೆಚ್ ಕೋನರಡ್ಡಿ ಸಾಥ್ ನೀಡಿದರು.

ಬಳಿಕ ಸಿಎಂ ಸಿದ್ದರಾಮಯ್ಯನವರು ಹುಬ್ಬಳ್ಳಿಯಿಂದ ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಹೋರಟರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಜಾತ್ಯಾತೀತ ಹೆಸರಿಟ್ಟುಕೊಂಡು ಕೋಮುವಾದಿಗಳೊಂದಿಗೆ ಸೇರ್ಕೊಂಡಿದ್ದಾರೆ; ಜೆಡಿಎಸ್​ ಮೈತ್ರಿ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

https://newsfirstlive.com/wp-content/uploads/2023/07/CM_SIDDARAMAIAH.jpg

Load More