newsfirstkannada.com

VIDEO: ಪತ್ನಿ ಹೆಸರಿಗೆ 14 ಮೂಡಾ ಸೈಟ್‌ಗಳ ವಿಚಾರ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Share :

Published July 2, 2024 at 7:02pm

Update July 2, 2024 at 8:28pm

    ಮೈಸೂರಲ್ಲಿ ಸಿಎಂ ಪತ್ನಿ ಹೆಸರಿಗೆ ಮೂಡಾ ಸೈಟ್‌ಗಳ ಮಂಜೂರಾತಿ ವಿವಾದ

    ತಮ್ಮ ಪತ್ನಿ ಮೇಲೆ ಬಂದ ಆರೋಪವನ್ನು ತಳ್ಳಿ ಹಾಕಿದ ಸಿಎಂ ಸಿದ್ದರಾಮಯ್ಯ​

    ಮೂಡಾದ 50:50 ಹಂಚಿಕೆಯಲ್ಲಿ ಸಿಎಂ ಧರ್ಮಪತ್ನಿ ಕೂಡ ಭಾಗಿ ಆರೋಪ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಿ ಅವರಿಗೆ 50-50 ಅನುಪಾತದಲ್ಲಿ 14 ಮೂಡಾ ಸೈಟ್‌ಗಳನ್ನ ಹಂಚಿಕೆ ಮಾಡಲಾಗಿದೆ ಅನ್ನೋ ವಿಚಾರ ವಿವಾದಕ್ಕೆ ಕಾರಣವಾಗಿದೆ. ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಎಂಬುವವರು ಇದರಲ್ಲಿ ಅಕ್ರಮ ಮಂಜೂರಾತಿ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸಿಎಂ ಪತ್ನಿಗೆ 14 ನಿವೇಶನ ಮಂಜೂರಾದ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ಮೈಸೂರಲ್ಲಿ ಸಿಎಂ ಸಿದ್ದು ಪತ್ನಿಗೆ 14 ಮೂಡಾ ಸೈಟ್ ಹಂಚಿಕೆ.. ಗಂಭೀರ ಆರೋಪ; ಏನಿದರ ಅಸಲಿಯತ್ತು?

ಇನ್ನು, ಇದೇ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ತಮ್ಮ ಧರ್ಮಪತ್ನಿಗೆ ಸೇರಿದ ಜಮೀನನ್ನು ಮೂಡಾ ಸ್ವಾಧೀನ ಮಾಡಿಕೊಂಡಿತ್ತು. ಅದಕ್ಕೆ ಪರ್ಯಾಯವಾಗಿ 50:50 ಅನುಪಾತದಲ್ಲಿ ಬೇರೆಡೆ ನಿವೇಶನಗಳನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ಕೊಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಹೀಗೆ ಮಾತನ್ನು ಮುಂದುವರೆಸಿದ ಅವರು, ಬಿಜೆಪಿ ಅವರು ಅಧಿಕಾರದಲ್ಲಿರುವಾಗ ನಮಗೆ ನಿವೇಶನ ಕೊಟ್ಟಿದ್ದಾರೆ. ನನ್ನ ಪತ್ನಿಗೆ ಸೇರಿದ್ದ 3 ಎಕರೆ 16 ಗಂಟೆ ಜಮೀನು ರಿಂಗ್ ರೋಡ್ ಪಕ್ಕದ ಕೆಸರೆಯಲ್ಲಿದೆ. ಅದನ್ನು ನನ್ನ ಭಾವ ಮೈದುನ ಪಡೆದಿದ್ದು ನನ್ನ ಪತ್ನಿಗೆ ದಾನವಾಗಿ ಕೊಟ್ಟಿದ್ದಾರೆ. ನಾನು ಅಧಿಕಾರದಲ್ಲಿದ್ದಾಗ ತೆಗೆದುಕೊಳ್ಳಲು ಹೋಗಿಲ್ಲ. 50:50 ಅನುಪಾತದಲ್ಲಿ ಕೊಡಬೇಕು ಎಂದು ಕಾನೂನು ಮಾಡಿದ್ದು ಬಿಜೆಪಿಯವರು.

ನಮ್ಮ ಜಮೀನನ್ನು ಸ್ವಾಧೀನ ಮಾಡಿಕೊಳ್ಳದೇ ಮೂಡಾದವರು ನಿವೇಶನಗಳನ್ನು ಮಾಡಿ ಹಂಚಿದ್ದರು. ಹಂಚಿದ ಮೇಲೆ ನಮಗೆ ಕಾನೂನುಬದ್ಧವಾಗಿ ನಿವೇಶನ ಕೊಡಬೇಕು. ಅದರಂತೆ 50:50 ಕೊಡಲು ಒಪ್ಪಿದರು. ಸರ್ಕಾರದ ನಿಯಮಾವಳಿ, ಆದೇಶದ ಪ್ರಕಾರ ಕೊಡಿ ಎಂದು ಬಿಜೆಪಿ ಅಧಿಕಾರದಲ್ಲಿದ್ದಾಗ ಕೇಳಿಕೊಂಡಿದ್ದೆವು. ಆಗ ಅವರು ಬೇರೆ ಬೇರೆ ಸ್ಥಳಗಳಲ್ಲಿ ಸಮಾನಾಂತರ ನಿವೇಶನಗಳನ್ನು ಕೊಟ್ಟಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

VIDEO: ಪತ್ನಿ ಹೆಸರಿಗೆ 14 ಮೂಡಾ ಸೈಟ್‌ಗಳ ವಿಚಾರ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

https://newsfirstlive.com/wp-content/uploads/2024/03/Siddaramaiah-24.jpg

Load More