VIDEO: ರಾಕೇಶ್ ಸಿದ್ದರಾಮಯ್ಯ ಸಾವಿನ ರಹಸ್ಯ.. HDK ಮಾತಿಗೆ ಸಿಎಂ ಸಿದ್ದು ತಿರುಗೇಟು; ಏನಂದ್ರು?

author-image
admin
Updated On
ಕಾವೇರಿ ನೀರಿಗಾಗಿ ಸಿದ್ದು ಒಗ್ಗಟ್ಟಿನ ತಂತ್ರ.. ಸರ್ವ ಪಕ್ಷ ಸಭೆಗೆ ಬಿಜೆಪಿ-ಜೆಡಿಎಸ್ ಸಾಥ್.. ಯಾರೆಲ್ಲ ಬರ್ತಿದ್ದಾರೆ..?
Advertisment
  • 2016ರಲ್ಲಿ ಸತ್ತು ಹೋದ ರಾಕೇಶ್‌ ಸಾವಿಗೆ ಈ ವಿಚಾರಕ್ಕೂ ಏನು ಸಂಬಂಧ?
  • ಆ ವಿಚಾರವನ್ನು ಯಾವುದಕ್ಕೋ ಲಿಂಕ್ ಮಾಡಿ ಮಾತಾಡುವುದು ಮೂರ್ಖತನ
  • ಕುಮಾರಸ್ವಾಮಿ ಅವರ ಅಣ್ಣನ ಮಗ ರೇಪ್ ಮಾಡಿ ಓಡಿ ಹೋಗಿರುವುದು

ಮೈಸೂರು: ಸಿಎಂ ಪುತ್ರ ರಾಕೇಶ್ ಸಿದ್ದರಾಮಯ್ಯ ಸಾವಿನ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನನ್ನ ಮಗ ಸತ್ತು ಹೋಗಿ 8 ವರ್ಷಗಳೇ ಕಳೆದಿದೆ. ಈಗ ಆ ವಿಚಾರವನ್ನು ಯಾವುದಕ್ಕೋ ಲಿಂಕ್ ಮಾಡಿ ಮಾತಾಡುವುದು ಮೂರ್ಖತನ ಎಂದಿದ್ದಾರೆ.

ಕುಮಾರಸ್ವಾಮಿ ಹೇಳಿಕೆಗೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಅವರ ಅಣ್ಣನ ಮಗ ರೇಪ್ ಮಾಡಿ ಓಡಿ ಹೋಗಿರುವುದು. ಅದಕ್ಕೂ 2016ರಲ್ಲಿ ಸತ್ತು ಹೋದ ರಾಕೇಶ್‌ ಸಾವಿನ ವಿಚಾರಕ್ಕೂ ಏನು ಸಂಬಂಧ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ದೇವೇಗೌಡರ ಮೇಲೆ ಕಿಡಿಕಾರಿದ ಸಿದ್ದು ಮೇಲೆ HDK ಅಟ್ಯಾಕ್‌.. ರಾಕೇಶ್ ಸಾವಿನ ರಹಸ್ಯದ ಬಗ್ಗೆ ಹೇಳಿದ್ದೇನು? 

ನಿನ್ನೆ ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಮಾಡಿದ್ದ ಕುಮಾರಸ್ವಾಮಿ ಅವರು ಸಿಎಂ ಮೇಲೆ ಕಿಡಿಕಾರಿದ್ದರು. ಸಿದ್ದರಾಮಯ್ಯನವರೇ ನಾನು ವಕೀಲನಾಗಿದ್ದೆ. ಹಿಂದೆ ನಾನೂ ವಕೀಲಿಕೆ ಮಾಡುತ್ತಿದ್ದೆ ಎಂದು ಪದೇ ಪದೆ ಹೇಳಬೇಡಿ. ನಿಮ್ಮ ವಕೀಲಿ ಜ್ಞಾನದ ಮೇಲೆ ಅಗೌರವ ಬರುವಂತೆ ಮಾತನಾಡಬೇಡಿ. ಎಷ್ಟೋ ಮಹಾನುಭಾವರು ಈ ವೃತ್ತಿಗೆ ಕಳಶ ಪ್ರಾಯರಾಗಿದ್ದಾರೆ. ದಯಮಾಡಿ ಅವರೆಲ್ಲರನ್ನು ಅಪಮಾನಿಸಬೇಡಿ ಎಂದಿದ್ದರು.

ಕುಮಾರಸ್ವಾಮಿ ಅವರ ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಕೌಂಟರ್ ಕೊಟ್ಟಿದ್ದಾರೆ. ರೇಪ್‌ಗಿಂತ ಅದರ ವಿಡಿಯೋನ ಹಂಚಿದ್ದು ದೊಡ್ಡ ಅಪರಾಧ ಎಂದು ಹೆಚ್‌ಡಿಕೆ ಹೇಳಿದ್ದಾರೆ. ರೇಪ್‌ಗಿಂತ ವಿಡಿಯೋ ಹಂಚಿದ್ದು ದೊಡ್ಡ ಅಪರಾಧ ಅಂತ ಯಾವ ಕಾನೂನುನಿಲ್ಲಿದೆ ಹೇಳಿ. ಕುಮಾರಸ್ವಾಮಿ ಏನಾದರೂ ಸೆಕ್ಷನ್ ಹೇಳಿದ್ದರಾ. ಅದು ಭಾರತೀಯ ದಂಡ ಸಂಹಿತೆಯಲ್ಲಿದೆಯಾ. ಅಥವಾ ಇವರೇ ಬರೆದುಕೊಂಡ ಕಾನೂನಿನಲ್ಲಿ ಇದೆಯಾ ಹೇಳಿ ಎಂದರು.

ಇನ್ನು, ನಾನು ಹಾಗಂತ ಅಶ್ಲೀಲ ವಿಡಿಯೋ ವಿತರಣೆಯನ್ನು ಸಮರ್ಥನೆ ಮಾಡುತ್ತಿಲ್ಲ. ಆದರೆ ರೇಪ್‌ಗಿಂತ ವಿಡಿಯೋ ಹಂಚಿದ್ದು ಮಹಾ ಅಫರಾದ ಎನ್ನುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
Advertisment