/newsfirstlive-kannada/media/post_attachments/wp-content/uploads/2024/03/cm-siddu.jpg)
ಮೈಸೂರು: 2024 ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಆಗುತ್ತಿದ್ದಂತೆ ಎಲ್ಲ ಪಕ್ಷದ ನಾಯಕರು ಫುಲ್​ ಅಲರ್ಟ್​ ಆಗಿದ್ದಾರೆ. ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು ಬಿರು ಬಿಸಿಲಿನಲ್ಲಿ ಹಗಲು ರಾತ್ರಿ ಎನ್ನದೆ ಕ್ಯಾಂಪೇನ್ ಮಾಡುವುದರಲ್ಲಿ ಸಖತ್​ ಬ್ಯುಸಿಯಾಗಿದ್ದಾರೆ.
ಇದನ್ನೂ ಓದಿ:BREAKING: ಮಂಡ್ಯ ಕಾಂಗ್ರೆಸ್ ಶಾಸಕ ಗಣಿಗ ರವಿ ಪೊಲೀಸ್ ವಶ; ಕೋರ್ಟ್ ಖಡಕ್ ಸೂಚನೆ
ಆದರೆ ಸಭೆ ಸಮಾರಂಭದಲ್ಲಿ ಇನ್ನಿತರ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿದ್ದ ಸಿಎಂ ಸಿದ್ದರಾಮಯ್ಯನವರು ಅವರು ಸ್ಪಲ್ಪ ಬಿಡುವು ಮಾಡಿಕೊಂಡು ಜಾಲಿ ಮೂಡ್​ಗೆ ಜಾರಿದ್ದಾರೆ. ಹೌದು, ಸಿಎಂ ಸಿದ್ದರಾಮಯ್ಯನವರು ಆಪ್ತರ ಜೊತೆ ವಾಯು ವಿಹಾರದಲ್ಲಿ ತಲ್ಲೀನರಾಗಿದ್ದಾರೆ.
/newsfirstlive-kannada/media/post_attachments/wp-content/uploads/2024/03/cm-siddu-1.jpg)
ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ರೆಸಾರ್ಟ್​ವೊಂದರಲ್ಲಿ ಕಾಲ ಕಳೆಯುತ್ತಿದ್ದಾರೆ. ಜೊತೆಗೆ ಕಬಿನಿ ಹಿನ್ನೀರಿನಲ್ಲಿ ಬೋಟಿಂಗ್ ಮಾಡಿ ಸಖತ್​ ರಿಲಾಕ್ಸ್ ಆಗಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯನವರ ಜೊತೆ ಮೈಸೂರು ಹಾಗೂ ಕೊಡಗು ಅಭ್ಯರ್ಥಿಯಾಗಿರೋ ಎಂ.ಲಕ್ಷ್ಮಣ್ ಹಾಗೂ ಸಚಿವರು ಕೆಲ ಶಾಸಕರು ಸಾಥ್ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us