ಹಿಂದಿನ ಬಿಜೆಪಿ ಸರ್ಕಾರ ಘೋಷಿಸಿದ್ದ ಕೆಲವು ಯೋಜನೆಗಳಿಗೆ ಬ್ರೇಕ್!
NEP ಬದಲು ಹೊಸ ಶಿಕ್ಷಣ ನೀತಿ ರೂಪಿಸಲು ರಾಜ್ಯ ಸರ್ಕಾರ ನಿರ್ಧಾರ
ಯಡಿಯೂರಪ್ಪ ಕನಸಿನ ಭಾಗ್ಯಲಕ್ಷ್ಮಿ ಯೋಜನೆಗೂ ಬಜೆಟ್‌ನಲ್ಲಿ ಕೊಕ್
2023-24ನೇ ಸಾಲಿನ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಹಿಂದಿನ ಬಿಜೆಪಿ ಸರ್ಕಾರ ಘೋಷಿಸಿದ್ದ ಕೆಲವು ಯೋಜನೆಗಳಿಗೆ ಬ್ರೇಕ್ ಹಾಕಿದ್ದಾರೆ. 2022ನೇ ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ ಜಿಎಸ್‌ಟಿ ಪರಿಹಾರ ಸ್ಥಗಿತವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಕ್ಕೆ 26,954 ಕೋಟಿ ರೂಪಾಯಿ ಜಿಎಸ್‌ಟಿ ಕೊರತೆಯಾಗಿದೆ. ಇದರಿಂದ ರಾಜ್ಯಕ್ಕೆ ಅರ್ಥಿಕ ಕೊರತೆ ಎದುರಾಗಿದೆ. ಇದರಿಂದ ಕೇಂದ್ರದ ಪುರಸ್ಕೃತ ಯೋಜನೆಗಳಿಗೆ ಸಹಾಯಧನ ಕಡಿಮೆ ಆಗಿದ್ದು, ರಾಜ್ಯದ ಯೋಜನೆಗಳಿಗೆ ಅನುದಾನದ ಕೊರತೆ ಎದುರಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಪ್ರಮುಖವಾಗಿ ಬಸವರಾಜ ಬೊಮ್ಮಾಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP) ರದ್ದುಗೊಳಿಸುವ ನಿರ್ಧಾರ ಕೈಗೊಂಡಿದೆ. ಹೊಸ ಶಿಕ್ಷಣ ನೀತಿ ರೂಪಿಸಲಾಗುವುದು ಎಂದಿರುವ ರಾಜ್ಯ ಸರ್ಕಾರ, ನಕಲಿ ಅಂಕಪಟ್ಟಿ ಹಾವಳಿ ತಪ್ಪಿಸಲು ಡಿಜಿಟಲ್ ಮೊರೆ ಹೋಗಲಾಗುವುದು ಎಂದಿದೆ. ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ APMC ಕಾಯ್ದೆಗಳನ್ನು ಕಾಂಗ್ರೆಸ್ ಸರ್ಕಾರ ರದ್ದು ಮಾಡಿದೆ. ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದಿದ್ದ ವಿದ್ಯಾಸಿರಿ, ವಿದ್ಯಾನಿಧಿ ಯೋಜನೆಗೂ ಕೊಕ್ ನೀಡಲಾಗಿದೆ.
ಬಿಜೆಪಿಯ ಯಾವೆಲ್ಲಾ ಯೋಜನೆಗಳಿಗೆ ಕೊಕ್!
ಇನ್ನು, ಮಾಜಿ ಸಿಎಂ ಯಡಿಯೂರಪ್ಪ ತಂದಿದ್ದ ಭಾಗ್ಯಲಕ್ಷ್ಮಿ ಯೋಜನೆಗೂ ಸಿದ್ದರಾಮಯ್ಯ ಸರ್ಕಾರ ಕೊಕ್ ನೀಡಿದೆ. ಈ ಯೋಜನೆಯನ್ನು ಹಿಂದಿನ ಬೊಮ್ಮಾಯಿ ಸರ್ಕಾರ ಮುಂದುವರೆಸಿತ್ತು. ಆದರೆ ಈಗ ಸಿದ್ದರಾಮಯ್ಯ ಸರ್ಕಾರದಲ್ಲಿ ಆ ಯೋಜನೆಗೆ ಕೊಕ್ ನೀಡಲಾಗಿದೆ. ಮಾಜಿ ಸಿಎಂ ಯಡಿಯೂರಪ್ಪರ ಕನಸ್ಸಿನ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಎಲ್ಲೂ ಪ್ರಸ್ತಾಪ ಮಾಡಿಲ್ಲ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ