ಬೆಂಗಳೂರು ಬಂದ್ ಮಾಡಿ ಆಟೋ, ಟ್ಯಾಕ್ಸಿ ಚಾಲಕರ ಆಕ್ರೋಶ
ಶಕ್ತಿ ಯೋಜನೆಯಿಂದ ನಷ್ಟ ಆಗುತ್ತಿದೆ ಎನ್ನುವ ವಾದ ಒಪ್ಪಲು ಆಗಲ್ಲ
ನಷ್ಟ ತುಂಬಿಕೊಡಿ ಅಂದ್ರೆ ಆಗುತ್ತಾ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ
ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಖಾಸಗಿ ಬಸ್, ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರು ಇವತ್ತು ಬೆಂಗಳೂರು ಬಂದ್‌ಗೆ ಕರೆ ನೀಡಿದ್ದಾರೆ. ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿರುವ ಚಾಲಕರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚಾಲಕರ ಈ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ: ಸಾರಿಗೆ ಬಂದ್ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿಗಳ ‘ಅಡ್ಡ ಪರಿಣಾಮ’; ಹೆಚ್.ಡಿ ಕುಮಾರಸ್ವಾಮಿ ಕಿಡಿ
ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಖಾಸಗಿ ವಾಹನ ಮಾಲೀಕರು, ಚಾಲಕರು ಈಡೇರಿಸುವಂತಹ ಬೇಡಿಕೆ ಕೇಳಿದ್ರೆ ಮಾಡಬಹುದು. ಈಡೇರಿಸಲಾಗದ ಬೇಡಿಕೆ ಇಟ್ಟರೆ ಹೇಗೆ ಎಂದು ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಮಹಿಳೆಯರಿಗೆ ಅನುಕೂಲ ಆಗಲಿ ಎಂದು ಶಕ್ತಿ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ಇದರಿಂದ ಖಾಸಗಿ ಬಸ್‌ಗಳಿಗೆ ಆದಾಯ ಬರುತ್ತಿಲ್ಲ. ನಷ್ಟ ಆಗುತ್ತಿದೆ ಎನ್ನುವುದು ಅವರ ವಾದ ಎಂದು ಸಿಎಂ ಹೇಳಿದರು.
ಖಾಸಗಿ ವಾಹನ ಚಾಲಕರ ಡಿಮ್ಯಾಂಡ್‌ಗಳು ಸರಿಯಿಲ್ಲ ಎಂದ ಸಿಎಂ ಸಿದ್ದರಾಮಯ್ಯ, ನಷ್ಟ ಆಗುವುದು ಬಿಡುವುದು ಬೇರೆ ವಿಚಾರ. ನಷ್ಟ ತುಂಬಿಕೊಡಿ ಅಂದ್ರೆ ಆಗುತ್ತಾ? ಅದು ಸಾಧ್ಯವಾಗದ ಮಾತು ಎಂದು ಸ್ಪಷ್ಟಪಡಿಸಿದರು. ಇನ್ನು ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡಲು ಎಲ್ಲರಿಗೂ ಅವಕಾಶ ಇದೆ. ಅದನ್ನು ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ. ಶಾಂತಿಯುತವಾಗಿ ಪ್ರತಿಭಟನೆ ಮಾಡಲಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ