Advertisment

‘ಮೋದಿ ಪ್ರಧಾನಿ ಪಟ್ಟ ಉಳಿಸಿಕೊಳ್ಳಲು ಬಜೆಟ್‌ನಲ್ಲಿ ಸರ್ಕಸ್‌’- ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

author-image
admin
Updated On
ಕೇಂದ್ರದ ಬಜೆಟ್​ ಮೇಲೆ ಕರ್ನಾಟಕ ಭಾರೀ ನಿರೀಕ್ಷೆ.. ರಾಯಚೂರು, ಹಾಸನಕ್ಕೆ ಸಿಗುತ್ತಾ ಬಂಪರ್ ಕೊಡುಗೆ..!
Advertisment
  • 2024-25ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ
  • ಪ್ರಧಾನಿಯಾಗಿ ಉಳಿಯಲು ಆಂಧ್ರ, ಬಿಹಾರಕ್ಕೆ ವಿಶೇಷ ಅನುದಾನ
  • ನರೇಂದ್ರ ಮೋದಿ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಹಿಗ್ಗಾಮುಗ್ಗ ತರಾಟೆ

ಬೆಂಗಳೂರು: 2024ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಬಿಹಾರ ಹಾಗೂ ಆಂಧ್ರಪ್ರದೇಶಕ್ಕೆ ವಿಶೇಷ ಅನುದಾನ ನೀಡಲಾಗಿದೆ. ಆದರೆ ನಮ್ಮ ರಾಜ್ಯಕ್ಕೆ ಖಾಲಿ ಚೊಂಬು ಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಬಗ್ಗೆ ಮಾತನಾಡಿರುವ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

Advertisment

ಇದನ್ನೂ ಓದಿ: Budget2024: ಬಿಹಾರ, ಆಂಧ್ರಕ್ಕೆ ಬಂಪರ್ ಗಿಫ್ಟ್‌; ಮೋದಿ ಬಜೆಟ್‌ನಲ್ಲಿ ಎರಡು ರಾಜ್ಯಗಳಿಗೆ ಸಿಕ್ಕಿದ್ದೆಷ್ಟು?

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ನೇ ಸಾಲಿನಲ್ಲಿ 48 ಲಕ್ಷ 21 ಸಾವಿರ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. ಇದರಲ್ಲಿ ಕರ್ನಾಟಕ ರಾಜ್ಯಕ್ಕೆ ಏನೂ ಸಿಕ್ಕಿಲ್ಲ. ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಉಳಿಯಲು ಆಂಧ್ರಪ್ರದೇಶ ಹಾಗೂ ಬಿಹಾರಕ್ಕೆ ವಿಶೇಷ ಅನುದಾನ ನೀಡಿದ್ದಾರೆ ಎಂದು ಗುಡುಗಿದ್ದಾರೆ.

publive-image

ನನ್ನ ಪರವಾಗಿ ಬಜೆಟ್‌ ಪೂರ್ವಭಾವಿ ಸಭೆಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡರನ್ನು ಕಳಿಸಲಾಗಿತ್ತು. ರಾಜ್ಯಕ್ಕೆ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯದಿಂದ ಆಯ್ಕೆಯಾದವರು. ರಾಜ್ಯದ ಹಿತ ಕಾಪಾಡ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ರಾಜ್ಯದ ಜನತೆಗೆ ಅವರು ಅನ್ಯಾಯ ಮಾಡಿದ್ದಾರೆ.

Advertisment

ಇದನ್ನೂ ಓದಿ: BREAKING: ಮಹಿಳೆಯರಿಗೆ ಗುಡ್‌ನ್ಯೂಸ್‌.. ಬಜೆಟ್ ಬಳಿಕ 10 ಗ್ರಾಂ ಚಿನ್ನದ ಬೆಲೆ ಬರೋಬ್ಬರಿ ₹4,000 ಇಳಿಕೆ! 

ಪೆರಿಪರಲ್ ರೋಡ್, ಅಪ್ಪರ್ ಭದ್ರಾಗೆ 5 ಸಾವಿರ ಕೋಟಿ, ವಸತಿ ಯೋಜನೆಗೆ 5 ಲಕ್ಷ ಕೋಟಿ ಬಿಡುಗಡೆ ಮಾಡಬೇಕು ಎಂದು ಕೇಳಿದ್ದೆವು. ಕಲ್ಯಾಣ ಕರ್ನಾಟಕಕ್ಕೆ ಮ್ಯಾಚಿಂಗ್ ಏರಿಯಾ ಗ್ರಾಂಟ್ ಕೊಡಬೇಕೆಂದು ಮನವಿ ಮಾಡಿದ್ದೆವು. ಆದರೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಚೊಂಬು ಕೊಟ್ಟಿದ್ದಾರೆ. ಬಡವರು, ಮಧ್ಯಮ ವರ್ಗದ ಜನರು, ರೈತರಿಗೆ ದೊಡ್ಡ ಅನ್ಯಾಯ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment