ನಾವು ಕರ್ನಾಟಕದಲ್ಲಿ ಮೋದಿಯನ್ನು ಸಮರ್ಥವಾಗಿ ಎದುರಿಸಿದ್ದೇವೆ
ಪ್ರಧಾನಿ ಮೋದಿ ಪ್ರಚಾರಕ್ಕೆ ಹೋದ ಕಡೆಯಲ್ಲಾ ನಾವೇ ಗೆದ್ದಿದ್ದೇವೆ
ಬಿಜೆಪಿ ಅವನತಿ ಕರ್ನಾಟಕದಿಂದಲೇ ಆರಂಭವಾಗುತ್ತದೆ ಎಂದ ಸಿಎಂ
ಬೆಂಗಳೂರು: ವಿರೋಧ ಪಕ್ಷಗಳ ಒಕ್ಕೂಟ ಸಭೆಯ ಹಿನ್ನೆಲೆ ದೇಶದ ಘಟಾನುಘಟಿ ನಾಯಕರ ದಂಡೇ ರಾಜ್ಯಕ್ಕೆ ಹರಿದು ಬಂದಿದೆ. ಕಾಂಗ್ರೆಸ್ ನೇತೃತ್ವದಲ್ಲಿ ಇಂದು ಮತ್ತು ನಾಳೆ ಬೆಂಗಳೂರಲ್ಲಿ ಪ್ರತಿಪಕ್ಷ ನಾಯಕರು ಸಮಾಲೋಚನೆ ನಡೆಸಲಿದ್ದಾರೆ. ಬಿಜೆಪಿ ವಿರುದ್ಧ ವಿರೋಧ ಪಕ್ಷಗಳ ಈ ಒಗ್ಗಟ್ಟಿನ ಮಧ್ಯೆ ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಿದ್ದರಾಮಯ್ಯ, ವಿಪಕ್ಷಗಳ ಒಕ್ಕೂಟದ ಸಭೆಯಲ್ಲಿ ಸುಮಾರು 24 ಪಕ್ಷಗಳ ನಾಯಕರು ಭಾಗಿಯಾಗ್ತಿದ್ದಾರೆ. ಈ ಮೀಟಿಂಗ್‌ನಲ್ಲಿ 2024ರ ಲೋಕಸಭಾ ಚುನಾವಣೆ ಹೇಗೆ ನಡೆಸಬೇಕು ಎಂಬ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದರು.
ಪ್ರಧಾನಿ ನರೇಂದ್ರ ಮೋದಿಯನ್ನ ನಾವು ಕರ್ನಾಟಕದಲ್ಲಿ ಸಮರ್ಥವಾಗಿ ಎದುರಿಸಿಲ್ವಾ? ರಾಜ್ಯದಲ್ಲಿ ಮೋದಿ ಪ್ರಚಾರಕ್ಕೆ ಹೋದ ಕಡೆಯಲ್ಲಾ ನಾವೇ ಗೆದ್ದಿದ್ದೇವೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಲಿದೆ. ಬಿಜೆಪಿಯವರ ಅವನತಿ ಕರ್ನಾಟಕದಿಂದಲೇ ಆರಂಭವಾಗುತ್ತದೆ. ಈ ಬಾರಿ ಸಂಪೂರ್ಣ ಬಹುಮತ ಬಿಜೆಪಿಗೆ ಸಿಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ಇನ್ನು, ಮಹಾಘಟಬಂಧನ್ ಕುರಿತಂತೆ ಹೆಚ್.ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಜೆಡಿಎಸ್‌ಗೆ ಸಿದ್ಧಾಂತ ಇಲ್ಲ. ಎಲ್ಲಿದೆ ಜಾತ್ಯಾತೀತವಾದ? ಎಂದು ಪ್ರಶ್ನಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ