ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಇನ್ನೆರಡು ತಿಂಗಳು ಬಾಕಿ
ನಾದಬ್ರಹ್ಮ ಹಂಸಲೇಖರಿಂದ ಈ ಬಾರಿಯ ದಸರಾ ಉದ್ಘಾಟನೆ
ಚಾಮುಂಡಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿದ ಸಿಎಂ ಮತ್ತು ಡಿಸಿಎಂ
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಇನ್ನೆರಡು ತಿಂಗಳು ಬಾಕಿ ಇದೆ. ಹೀಗಿರುವಾಗ ಸಿಎಂ ಸಿದ್ದರಾಮಯ್ಯನವರು ದಸರಾ ಉದ್ಘಾಟಕರ ಹೆಸರು ಘೋಷಿಸಿದ್ದಾರೆ. ಸಂಗೀತ ನಿರ್ದೇಶಕ ಹಂಸಲೇಖ ಅವರಿಂದ 2023ರ ಮೈಸೂರು ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ.
ಸರ್ಕಾರ 100 ದಿನ ಪೂರೈಸಿದ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ ನೀಡಿದ್ದಾರೆ. ಒಂದೇ ಕಾರಿನಲ್ಲಿ ಇಬ್ಬರು ನಾಯಕರು ಹರಕೆ ತೀರಿಸಲು ಬಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಕಾರಿನಲ್ಲಿ ಡಿ.ಕೆ.ಶಿ ಜೊತೆಗೆ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ಚಾಮುಂಡಿ ಬೆಟ್ಟಕ್ಕೆ ಬಂದಿಳಿದಿದ್ದಾರೆ. ಶತದಿನವನ್ನು ಕಾಂಗ್ರೆಸ್ ಸರ್ಕಾರ ಪೂರೈಸಿದ ಹಿನ್ನಲೆ ಚಾಮುಂಡಿ ದೇವಿಗೆ ಪೂಜೆ ಸಲ್ಲಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ