ಸಿಎಂ ಕಿವಿಗೆ ಬಿದ್ದ ದರ್ಶನ್ಗೆ ನೀಡೋ ರಾಜಾತಿಥ್ಯ ವಿಚಾರ
ಪ್ರಕರಣದ ಸಂಪೂರ್ಣ ವರದಿ ನೀಡುವಂತೆ ಸೂಚಿಸಿದ ಸಿಎಂ
ಏಳು ಅಧಿಕಾರಿಗಳನ್ನು ಅಮಾನತು ಮಾಡಿದ ಗೃಹ ಸಚಿವರು
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಆರೋಪಿ ದರ್ಶನ್ಗೆ ನೀಡುವ ರಾಜಾತಿಥ್ಯ ವಿಚಾರ ಸುದ್ದಿ ತಿಳಿದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದಾರೆ. ದರ್ಶನ್ ಮತ್ತು ಇತರರನ್ನ ಬೇರೆ ಜೈಲುಗಳಿಗೆ ಶಿಫ್ಟ್ ಮಾಡಿ ಎಂದು ಹೇಳಿದ್ದಾರೆ.
ಇದನ್ನೂ ಓದಿ: ದರ್ಶನ್ ಜೊತೆ ಇರೋ ಕುಳ್ಳ ಸೀನ ಸಾಮಾನ್ಯನಲ್ಲ.. ಜೈಲಲ್ಲೇ ಗನ್ ಕೇಕ್ ಕತ್ತರಿಸಿದ ಕಿರಾತಕ ಈತ
ರಾಜಾತಿಥ್ಯ ಸಿಕ್ಕಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಿಎಂ ಸಿದ್ದರಾಮಯ್ಯನವರು ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡಿ ಎಂದು DGIGP ಅಲೋಕ್ ಮೋಹನ್ಗೆ ಸೂಚನೆ ನೀಡಿದ್ದಾರೆ. ಮಾತ್ರವಲ್ಲದೆ, ಪ್ರಕರಣದ ಸಂಪೂರ್ಣ ವರದಿ ನೀಡುವಂತೆ ಸೂಚಿಸಿದ್ದಾರೆ.
ಇದನ್ನೂ ಓದಿ: ಇಂಥವರಿಗೆ ಮನುಷ್ಯತ್ವ ಇದೆಯಾ.. ದರ್ಶನ್ ಫೋಟೋ ನೋಡಿ ಬಿಕ್ಕಿಬಿಕ್ಕಿ ಕಣ್ಣೀರು ಹಾಕಿದ ರೇಣುಕಾಸ್ವಾಮಿ ತಂದೆ
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ದರ್ಶನ್ಗೆ ಜೈಲಿನಲ್ಲಿ ಆತಿಥ್ಯ ನೀಡಿದ್ದಕ್ಕೆ 7 ಅಧಿಕಾರಿಗಳನ್ನು ಅಮಾನತು ಮಾಡಲು ಸೂಚಿಸಿದ್ದಾರೆ. ಈ ಬಗ್ಗೆ ವಿಚಾರ ನಿನ್ನೆ ಗೊತ್ತಾಯಿತು. ಹಿರಿಯ ಅಧಿಕಾರಿಗಳು ಭಾಗಿಯಾಗಿದ್ರೂ ಅವರ ಮೇಲೂ ಕ್ರಮ ಕೈಗೊಳ್ಳುತ್ತೇವೆ. ಜೈಲಿನ ಸಿಬ್ಬಂದಿ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ