/newsfirstlive-kannada/media/post_attachments/wp-content/uploads/2025/04/Siddaramaiah-in-Pakistan-TV.jpg)
ಪಹಲ್ಗಾಮ್‌ನಲ್ಲಿ ಉಗ್ರರ ಭೀಕರ ದಾಳಿ ಬಳಿಕ ಪ್ರತೀಕಾರದ ಕೂಗು ಭಾರತದಲ್ಲಿ ಕೇಳಿ ಬರುತ್ತಿದೆ. ಇಂತಹ ಸಂದರ್ಭದಲ್ಲೇ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಪಾಕಿಸ್ತಾನದ ಟಿವಿಗಳಲ್ಲಿ ಪ್ರಸಾರವಾಗಿದೆ. ಪಾಕ್ ಟಿವಿಗಳಲ್ಲಿ ಸಿಎಂ ಸಿದ್ದರಾಮಯ್ಯ ಬ್ರೇಕಿಂಗ್ ನ್ಯೂಸ್ ಆಗಿರೋದು ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದೆ.
ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಯನ್ನ ಪಾಕಿಸ್ತಾನದ ಮಾಧ್ಯಮಗಳು ಪ್ರಸಾರ ಮಾಡಿವೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ಬಿಜೆಪಿ ನಾಯಕರು ಇದನ್ನೇ ಅಸ್ತ್ರವಾಗಿಸಿಕೊಂಡು ಟೀಕಿಸುತ್ತಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಶಾಸಕ ಜನಾರ್ದನ ರೆಡ್ಡಿ ಸೇರಿದಂತೆ ಬಹುತೇಕ ಬಿಜೆಪಿ ನಾಯಕರು ಪಾಕ್ ಟಿವಿ ಪ್ರಸಾರ ಮಾಡಿರುವ ಈ ವಿಡಿಯೋವನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡು ಸಿಎಂ ಸಿದ್ದರಾಮಯ್ಯ ಅವರಿಗೆ ಸಖತ್ ಟಾಂಗ್ ಕೊಟ್ಟಿದ್ದಾರೆ.
ಇಡೀ ವಿಶ್ವವೇ ಭಾರತಕ್ಕೆ ಸಾಂತ್ವನ ಹೇಳುತ್ತಿದೆ. ಭಯೋತ್ಪಾದಕರಿಗೆ ಅವರಿಗೆ ಅರ್ಥವಾಗುವ ಹಾಗೆಯೇ ಪಾಠ ಕಲಿಸಲು ಭಾರತಕ್ಕೆ ಬಹುತೇಕ ದೇಶಗಳು ಹೇಳುತ್ತಿವೆ. ಈ ಮಧ್ಯೆ ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿರುವವರನ್ನು ಶಿಕ್ಷಿಸುವುದು ಬೇಡ ನಮ್ಮ ಭದ್ರತೆಯನ್ನು ಬಲಪಡಿಸಿ ಎಂದು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಾತು ಖಂಡನೀಯ.
ಪಹಲ್ಗಾಮ್… pic.twitter.com/8MmqgrGxzx— Pralhad Joshi (@JoshiPralhad)
ಇಡೀ ವಿಶ್ವವೇ ಭಾರತಕ್ಕೆ ಸಾಂತ್ವನ ಹೇಳುತ್ತಿದೆ. ಭಯೋತ್ಪಾದಕರಿಗೆ ಅವರಿಗೆ ಅರ್ಥವಾಗುವ ಹಾಗೆಯೇ ಪಾಠ ಕಲಿಸಲು ಭಾರತಕ್ಕೆ ಬಹುತೇಕ ದೇಶಗಳು ಹೇಳುತ್ತಿವೆ. ಈ ಮಧ್ಯೆ ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿರುವವರನ್ನು ಶಿಕ್ಷಿಸುವುದು ಬೇಡ ನಮ್ಮ ಭದ್ರತೆಯನ್ನು ಬಲಪಡಿಸಿ ಎಂದು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಾತು ಖಂಡನೀಯ.
ಪಹಲ್ಗಾಮ್… pic.twitter.com/8MmqgrGxzx— Pralhad Joshi (@JoshiPralhad) April 26, 2025
">April 26, 2025
ಅಸಲಿಗೆ ಸಿದ್ದರಾಮಯ್ಯ ಹೇಳಿದ್ದೇನು?
ನಿನ್ನೆ ಮೈಸೂರಲ್ಲಿ ಪಹಲ್ಗಾಮ್ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಪಾಕಿಸ್ತಾನದ ಜೊತೆ ಯುದ್ಧ ಮಾಡುವ ಅಗತ್ಯತೆ ಇಲ್ಲ. ಆದರೆ, ಅನಿವಾರ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಪಹಲ್ಗಾಮ್ ಅದೊಂದು ಯಾತ್ರಾರ್ಥಿಗಳ ಸ್ಥಳ. ಅಲ್ಲಿ ಭದ್ರತೆಯನ್ನು ಕೈಗೊಳ್ಳಬೇಕಿತ್ತು.
ಈ ಹಿಂದೆ ಪುಲ್ವಾಮಾ ದಾಳಿಯಲ್ಲೂ ಘೋರ ದುರಂತ ಸಂಭವಿಸಿತ್ತು. ಕೇಂದ್ರ ಸರ್ಕಾರವೇ ಭದ್ರತಾ ವೈಫಲ್ಯ ಆಗಿದೆ. ಅದೊಂದು ಇಂಟಲಿಜೆನ್ಸ್ ಹಾಗೂ ಸೆಕ್ಯೂರಿಟಿ ಫೇಲ್ಯೂರ್. ಕೇಂದ್ರ ಸರ್ಕಾರಕ್ಕೆ ಭದ್ರತಾ ಕ್ರಮ ತೆಗೆದುಕೊಂಡಿಲ್ಲ. ಈಗ ಯಾವುದೇ ಕ್ರಮ ತೆಗೆದುಕೊಂಡರೂ 26 ಜನ ವಾಪಸ್ ಬರುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಇನ್ನು ಪಾಕಿಸ್ತಾನದ ಮೇಲೆ ಯುದ್ಧ ಸಾರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಯುದ್ಧದ ಅಗತ್ಯತೆ ಇಲ್ಲ. ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಅಷ್ಟೇ. ಭದ್ರತಾ ವ್ಯಸಸ್ಥೆ ಮಾಡಬೇಕು. ಯುದ್ಧದ ಪರ ನಾವು ಇಲ್ಲ. ಶಾಂತಿ ಇರಬೇಕು. ಜನರಿಗೆ ಭದ್ರತೆ ಇರಬೇಕು. ಕೇಂದ್ರ ಸರ್ಕಾರ ಭದ್ರತಾ ಕ್ರಮವನ್ನು ತೆಗೆದುಕೊಳ್ಳಬೇಕು ಎಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ