ವಿಧಾನಸೌಧದ ಮೆಟ್ಟಿಲು ಇಳಿಯುವಾಗ ಎಡವಿದ ಸಿಎಂ ಸಿದ್ದರಾಮಯ್ಯ.. ಏನಾಯ್ತು..?

author-image
Ganesh
Updated On
ವಿಧಾನಸೌಧದ ಮೆಟ್ಟಿಲು ಇಳಿಯುವಾಗ ಎಡವಿದ ಸಿಎಂ ಸಿದ್ದರಾಮಯ್ಯ.. ಏನಾಯ್ತು..?
Advertisment
  • ಒಳ‌ಮೀಸಲಾತಿಗಾಗಿ ಮನೆಮನೆ ಗಣತಿಗೆ ನಿರ್ಧಾರ
  • ಮಹತ್ವದ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ ಸಿಎಂ
  • ಸುದ್ದಿಗೋಷ್ಟಿ ಮುಗಿಸಿ ವಾಪಸ್ ಬರುವಾಗ ಎಡವಿದ್ದಾರೆ

‘ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025’ ಕುರಿತಂತೆ ವಿಧಾನಸೌಧದ ಸಮ್ಮೇಳನದ ಕೊಠಡಿಯಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಟಿ ನಡೆಸಿ ಮಹತ್ವದ ಮಾಹಿತಿ ನೀಡಿದರು. ಇನ್ನು ಮಾಧ್ಯಮಗೋಷ್ಟಿ ಮುಗಿಸಿ ವಾಪಸ್ ಆಗುವ ವೇಳೆ ಸಿಎಂ ನಡೆಯುವಾಗ ಕೊಂಚ ಎಡವಿದರು.

ವಿಧಾನಸೌಧ ಮೆಟ್ಟಿಲುಗಳಲ್ಲಿ ಇಳಿಯುವಾಗ ಸಿದ್ದರಾಮಯ್ಯ ಎಡವಿದರು. ಮೆಟ್ಟಿಲುಗಳ ಮೇಲೆ ಬೀಳಲು ಆದ ಮುಖ್ಯಮಂತ್ರಿಗಳನ್ನು ಅಂಗರಕ್ಷಕರು ಹಿಡಿದುಕೊಂಡರು. ಇದರಿಂದ ಯಾವುದೇ ಅಪಾಯ ಆಗಿಲ್ಲ. ನಂತರ ಚೇತರಿಸಿಕೊಂಡ ಸಿದ್ದರಾಮಯ್ಯ ನಿಧಾನವಾಗಿ ಕಾರಿನತ್ತ ಧಾವಿಸಿದರು.

ಸುದ್ದಿಗೋಷ್ಟಿಯಲ್ಲಿ ಏನಂದ್ರು..?

ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳ‌ಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ ನಡೆಯಲಿದೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿದ್ದೆವು. ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕುರಿತು ಸಮಿತಿ ವರದಿ ನೀಡಿದೆ.

ಇದನ್ನೂ ಓದಿ: ಒಳಮೀಸಲಾತಿಗಾಗಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ.. ಸರ್ಕಾರ ಎಷ್ಟು ಕೋಟಿ ಖರ್ಚು ಮಾಡ್ತಿದೆ ಗೊತ್ತಾ..?

ಇವತ್ತಿನಿಂದ 17 ರವರೆಗೆ ಮನೆ ಮನೆಗೆ ಹೋಗಿ ದತ್ತಾಂಶ ಸಂಗ್ರಹಿಸುವ ಕೆಲಸ ಆಗ್ತದೆ. ಸುಮಾರು 65 ಸಾವಿರ ಶಿಕ್ಷಕರನ್ನು ಇದಕ್ಕಾಗಿ ನಿಯೋಜಿಸಲಾಗಿದೆ. 10-12 ಮಂದಿ ಶಿಕ್ಷಕರಿಗೆ ಒಬ್ಬ ಮೇಲ್ವಿಚಾರಕ ಇರ್ತಾರೆ. ಮನೆ ಮನೆ ಭೇಟಿ ಕೊಡುವ ಜೊತೆಗೆ, ಮೊದಲ ಹಂತದಲ್ಲಿ 5-5-25 ರಿಂದ 17-5-2025. 19-5-2025 ರಿಂದ 21-5-2025 ರವರೆಗೆ ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಸಮೀಕ್ಷೆ ನಡೆಯುತ್ತದೆ. ಯಾರಾದರೂ ಬಿಟ್ಟು ಹೋಗಿದ್ದರೆ ಶಿಬಿರಕ್ಕೆ ಬಂದು ಸೇರಿಸಬಹುದು.
ಮೂರನೇ ಹಂತದಲ್ಲಿ 19-5-2025 ರಿಂದ 22-5-2025 ರವರೆಗೆ ಆನ್ ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹಿಸಲಾಗುವುದು ಎಂದರು.

ಇದನ್ನೂ ಓದಿ: ಒಳ ಮೀಸಲಾತಿಗಾಗಿ ಮನೆಮನೆ ಗಣತಿ, ಒಟ್ಟು 3 ಹಂತದಲ್ಲಿ ಸರ್ವೇ! CM ಸುದ್ದಿಗೋಷ್ಟಿಯ ಹೈಲೈಟ್ಸ್..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment