ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾ
ನಾಳೆ 82ನೇ CCH ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಸಿದ್ದು ಭವಿಷ್ಯ!
ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಸಿದ್ದರಾಮಯ್ಯ ಮಾಹಿತಿ
ಬೆಂಗಳೂರು: ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಹೈಕೋರ್ಟ್ ಮಹತ್ವದ ತೀರ್ಪು ನೀಡಿದ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಇಂದೇ ಹೈಕೋರ್ಟ್ ಬಿಗ್ ಶಾಕ್ ನೀಡಿದ್ರೆ ನಾಳೆಯೂ ಸಿಎಂ ಸಿದ್ದರಾಮಯ್ಯಗೆ ಮಹತ್ವದ ದಿನವಾಗಿದೆ.
ಹೈಕೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅರ್ಜಿ ವಜಾಗೊಳ್ಳುತ್ತಿದ್ದಂತೆ ಅಧೀನ ನ್ಯಾಯಾಲಯಕ್ಕಿದ್ದ ತಡೆಯಾಜ್ಞೆ ಕೂಡ ತೆರವಾಗಿದೆ. ನಾಳೆ 82ನೇ CCH ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಸಿದ್ದರಾಮಯ್ಯ ಅವರ ಅರ್ಜಿ ವಿಚಾರಣೆ ನಿಗದಿಯಾಗಿದೆ.
ಇದನ್ನೂ ಓದಿ: ಮುಡಾ ಕೇಸ್ ಸಂಕಷ್ಟ.. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾ? ಬಿ.ವೈ ವಿಜಯೇಂದ್ರ ಹೇಳಿದ್ದೇನು?
ನಾಳೆ ಬೆಳಗ್ಗೆ 10:30ಕ್ಕೆ ಮುಡಾ ಕೇಸ್‌ನ ಪ್ರಾಸಿಕ್ಯೂಷನ್‌ಗೆ ಸಂಬಂಧ ಪಟ್ಟ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ. ನಾಳೆ ಕೋರ್ಟ್ ಕಲಾಪದ ಆರಂಭದಲ್ಲೇ ಆದೇಶ ನೀಡಲು ಅರ್ಜಿದಾರರು ಮನವಿ ಮಾಡಿದ್ದಾರೆ. ನಾಳೆ ಬೆಳಗ್ಗೆ 82ನೇ CCH ಜನಪ್ರತಿನಿಧಿಗಳ ಕೋರ್ಟ್ ತನಿಖೆಗೆ ಆದೇಶ ನೀಡಿದರೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ FIR ಹಾಕಬಹುದಾಗಿದೆ.
ಸಿದ್ದುಗೆ ಹೈಕಮಾಂಡ್ ಬೆಂಬಲ!
ಸಿಎಂ ವಿರುದ್ಧ ಪ್ರಾಸಿಕ್ಯೂಸನ್‌ಗೆ ಕೋರ್ಟ್ ಅನುಮತಿ ನೀಡುತ್ತಿದ್ದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಿದ್ದರಾಮಯ್ಯಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೀವಾಲಾ ಸಿದ್ದರಾಮಯ್ಯಗೆ ಕರೆ ಮಾಡಿದ್ದರು. ಹೈಕೋರ್ಟ್ ತೀರ್ಪಿನ ಬಗ್ಗೆ ಹೈಕಮಾಂಡ್ ನಾಯಕರಿಗೆ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ನಾಳೆ ದಿಢೀರ್ ಶಾಸಕಾಂಗ ಪಕ್ಷದ ಸಭೆ
ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ದಿಢೀರ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ನಾಳೆಯೇ ಶಾಸಕಾಂಗ ಪಕ್ಷದ ಸಭೆ ಕರೆದು ಮುಡಾ ಹಗರಣದ ಕುರಿತು ಸಮಾಲೋಚನೆ ನಡೆಸಲು ಮುಂದಾಗಿದ್ದಾರೆ.
ಇದನ್ನೂ ಓದಿ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದೊಡ್ಡ ಹಿನ್ನಡೆ.. ಏನಿದು ಮುಡಾ ಹಗರಣ..?
ಮುಂದೆ ಯಾವ ರೀತಿಯ ಹೋರಾಟ ನಡೆಸಬೇಕೆಂಬ ಬಗ್ಗೆ ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಲು ಮುಂದಾಗಿದ್ದಾರೆ. ಕಾನೂನು ಸಂಕಷ್ಟದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಶಾಸಕರ ಬೆಂಬಲ ಗಟ್ಟಿಗೊಳಿಸಿಕೊಳ್ಳಲು ಮುಂದಾಗಿದ್ದಾರೆ. ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೆ ಶಾಸಕರ ಅಭಿಪ್ರಾಯ ಆಲಿಸುವುದು. ಜೊತೆಗೆ ತಮ್ಮ ಬೆನ್ನಿಗೆ ನಿಲ್ಲುವಂತೆ ಮನವಿ ಮಾಡುವ ಸಾಧ್ಯತೆ ಇದೆ. ಪ್ರತಿಪಕ್ಷ ಬಿಜೆಪಿ, ಜೆಡಿಎಸ್ ವಿರುದ್ಧ ಹೋರಾಟದ ಬಗ್ಗೆ ಚರ್ಚೆ ನಡೆಸಲು ಸಿಎಂ ಮುಂದಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ