ಸಿದ್ದು ಸರ್ಕಾರದಲ್ಲಿ ಕೆ.ಎನ್.ರಾಜಣ್ಣ ಸಂಚಲನ
3 ಡಿಸಿಎಂ ಹುದ್ದೆ ಸೃಷ್ಟಿಗೆ ರಾಜಣ್ಣ ಡಿಮ್ಯಾಂಡ್
ರಾಜಣ್ಣ ಹೇಳಿಕೆ ಬೆನ್ನಲ್ಲೇ ಡಿಕೆಶಿ ಕಣ್ಣು ಕೆಂಪು
ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಮತ್ತೆ ಮೂರು ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿಯಾಗಬೇಕು ಅನ್ನೋ ಮೂಲಕ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಕೆ.ಎನ್.ರಾಜಣ್ಣರ ಹೇಳಿಕೆ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಇದೀಗ ಸಚಿವ ರಾಜಣ್ಣ ಮಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರೋಕ್ಷವಾಗಿ ಸಮ್ಮತಿ ನೀಡಿದ್ರಾ ಎಂಬ ಅನುಮಾನ ಶುರುವಾಗಿದೆ. ಮೂರು ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ರಾಜಣ್ಣ ಹೇಳಿದ್ದಾರೆ. ಆದರೆ ಅದನ್ನು ತೀರ್ಮಾನ ಮಾಡೋದು ಹೈಕಮಾಂಡ್. ಹಿಂದೆ ಒಬ್ಬರು ಡೆಪ್ಯೂಟಿ ಚೀಫ್ ಮಿನಿಸ್ಟರ್ ಸಾಕು ಎಂದು ಮಾತನಾಡಿದ್ದರು. ಈಗ ರಾಜಣ್ಣ ಹೈಕಮಾಂಡ್ ಜೊತೆ ಮಾತನಾಡುತ್ತೇನೆ ಎಂದಿದ್ದಾರೆ. ಅವರು ಮಾತನಾಡಲಿ. ಅದರಲ್ಲಿ ನನ್ನದೇನೂ ಇಲ್ಲ, ಹೈಕಮಾಂಡ್ ನಿರ್ಧಾರ ಎಂದಿದ್ದಾರೆ.
ರಾಜಣ್ಣ ಬೆನ್ನಿಗೆ ನಿಂತ್ರಾ ಸಿಎಂ?
ಲೋಕಸಭೆ ಚುನಾವಣೆ ಹಿನ್ನೆಲೆ ಡಿಸಿಎಂ ಹುದ್ದೆ ಸೃಷ್ಟಿಸಲು 3 ಡಿಸಿಎಂ ಹುದ್ದೆ ಸೃಷ್ಟಿಸಲು ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಸಚಿವ ಕೆ.ಎನ್.ರಾಜಣ್ಣ ಹೇಳಿಕೆಗೆ ನಂದು ಏನೂ ತಕರಾರು ಇಲ್ಲ ಅನ್ನೋ ಮೂಲಕ ಸಚಿವರ ಮಾತಿಗೆ ಸಿಎಂ ಪರೋಕ್ಷವಾಗಿ ಧ್ವನಿಗೂಡಿಸಿದ್ರಾ ಎಂಬ ಚರ್ಚೆ ಶುರುವಾಗಿದೆ. ಹೈಕಮಾಂಡ್ ಹೇಳಿದ್ದನ್ನು ಮಾಡುವೆ ಅನ್ನೋ ಮೂಲಕ ಸಿದ್ದರಾಮಯ್ಯ ಪರೋಕ್ಷವಾಗಿ ರಾಜಣ್ಣ ಬೆನ್ನಿಗೆ ನಿಂತರಾ ಅನ್ನೋ ಕುತೂಹಲ ಹೆಚ್ಚಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ