ಡಿಕೆಶಿ ವಿರುದ್ಧ ಸಿಡಿದೆದ್ರಾ ಸಿಎಂ ಆಪ್ತರು..? ಬಹಿರಂಗ ಹೇಳಿಕೆಗೆ ಬ್ರೇಕ್ ಹಾಕಲು ಪ್ಲಾನ್..!

author-image
Ganesh
Updated On
ಎಲ್ಲಾ ಕ್ಷೇತ್ರಗಳಿಗೂ 2,000 ಕೋಟಿ ಆಶ್ವಾಸನೆ.. ಬೆನ್ನಲ್ಲೇ ಶಾಸಕರಿಗೆ ಟಾಸ್ಕ್​ ಕೊಟ್ಟ ಸಿದ್ದರಾಮಯ್ಯ..!
Advertisment
  • ಅಧಿಕಾರ ಹಂಚಿಕೆಯ ಬಗ್ಗೆ ಡಿಕೆಶಿ ಹೇಳಿಕೆಯಿಂದ ಅಲರ್ಟ್​
  • ಇಂದು ಅಥವಾ ನಾಳೆ ರಾಜ್ಯಕ್ಕೆ ಕೆ.ಸಿ.ವೇಣುಗೋಪಾಲ್ ಭೇಟಿ
  • ರಾಜ್ಯಕ್ಕೆ ಕೆಸಿವಿ ಭೇಟಿ ಬೆನ್ನಲ್ಲೆ ಚುರುಕಾದ ಸಿಎಂ ಆಪ್ತ ಬಳಗ

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಹೇಳಿಕೆಯಿಂದ ಕಾಂಗ್ರೆಸ್​ ಹೈಕಮಾಂಡ್ ಅಲರ್ಟ್ ಆಗಿದೆ. ಅಂತೆಯೇ ಇಂದು ಅಥವಾ ನಾಳೆ ರಾಜ್ಯಕ್ಕೆ ಕೆ.ಸಿ.ವೇಣುಗೋಪಾಲ್ ಭೇಟಿ ನೀಡಲಿದ್ದಾರೆ.

ರಾಜ್ಯಕ್ಕೆ ವೇಣುಗೋಪಾಲ್ ಭೇಟಿ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ಆಪ್ತ ಬಳಗದಲ್ಲಿ ಚಟುವಟಿಕೆಗಳು ಹೆಚ್ಚಾಗಿವೆ. ಡಿ.ಕೆ.ಶಿವಕುಮಾರ್ ಹೇಳಿಕೆ ವಿರುದ್ಧ ವೇಣುಗೋಪಾಲ್​ಗೆ ದೂರು ನೀಡುವ ಸಾಧ್ಯತೆ ಇದೆ. ಅಧಿಕಾರ ಹಂಚಿಕೆ ಹೇಳಿಕೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್​ನಲ್ಲಿ ಗದ್ದಲ ಶುರುವಾಗಿದೆ. ಅಧಿಕಾರ ಹಂಚಿಕೆ ಮಾತುಕತೆ ಆಗಿದೆ. ಕಾಲ ಬಂದಾಗ ಉತ್ತರ ನೀಡುತ್ತೇನೆ ಎಂದು ಶಿವಕುಮಾರ್ ಪದೇ ಪದೆ ಹೇಳ್ತಿದ್ದಾರೆ. ವಿಧಾನಸಭೆ ಕಲಾಪದಲ್ಲೂ ಡಿಕೆಶಿ ಈ ಬಗ್ಗೆ ಮಾತನ್ನಾಡಿದ್ದಾರೆ.

ಅಧಿಕಾರವನ್ನು ಒದ್ದು ಕಿತ್ತುಕೊಳ್ಳಬೇಕು ಎಂದು ವಿಧಾನಸೌಧದಲ್ಲಿ ಹೇಳಿದ್ದರು. ಉಪಮುಖ್ಯಮಂತ್ರಿಗಳ ಈ ಹೇಳಿಕೆಯಿಂದ ಸಿಎಂ ಸಿದ್ದರಾಮಯ್ಯಗೆ ಮುಜುಗರ ಆಗ್ತಿದೆ. ಹೀಗಾಗಿ ಸಿಎಂ ಆಪ್ತ ಬಳಗ ದೂರು ನೀಡುವ ಸಾಧ್ಯತೆ ಇದೆ. ಆ ಮೂಲಕ ಶಿವಕುಮಾರ್ ಅವರ ಬಹಿರಂಗ ಹೇಳಿಕೆಗೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಬೆಂಬಲಿಗರು ಮುಂದಾಗಿದ್ದಾರೆ ಎನ್ನಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment