ಸಿಎಂ ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷೆ ಅನ್ನಭಾಗ್ಯ ಯೋಜನೆ
ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ
10 ಕೆಜಿ ಅಕ್ಕಿ ಸಿಗೋದು ಯಾವಾಗ? ಎಂಬ ಅಪ್ಡೇಟ್ ಕೊಟ್ಟ ಸಿಎಂ ಸಿದ್ದು!
ಬೆಂಗಳೂರು: ನಮ್ಮ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಲು ಬಿಜೆಪಿಗೆ ಯಾವ ನೈತಿಕ ಹಕ್ಕಿದೆ? ಬಡವರು ತಿನ್ನುವ ಅನ್ನದ ವಿಷಯದಲ್ಲಿ ರಾಜಕೀಯ ಗಿಮಿಕ್ ಮಾಡಲು ಹೋಗಬಾರದು. ಬಿಜೆಪಿಯವರಿಗೆ ನಿಜವಾಗಿಯೂ ಬದ್ಧತೆಯಿದ್ದರೆ ಕೇಂದ್ರ ಸರ್ಕಾರದಿಂದ ಅಕ್ಕಿ ಕೊಡಿಸಲಿ ಎಂದು ಸಿಎಂ ಸಿದ್ದರಾಮಯ್ಯ ಕೆಂಡಕಾರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಿಜೆಪಿ ಬಡವರ ವಿರೋಧಿ ಪಕ್ಷ. ಅಕ್ಕಿ ಪಡೆಯಲು ನಮ್ಮ ಪ್ರಯತ್ನ ಜಾರಿಯಲ್ಲಿದೆ. ನ್ಯಾಫೆಡ್, ಕೇಂದ್ರೀಯ ಭಂಡಾರ, ಎನ್ಸಿಸಿಎಫ್ ಅವರೊಂದಿಗೆ ಮಾತುಕತೆ ನಡೆಯುತ್ತಿದ್ದು, ನಾಳೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡಲಾಗುತ್ತದೆ. ಎಲ್ಲಿಯೂ ಅಗತ್ಯವಿರುಷ್ಟು ಅಕ್ಕಿ ದೊರೆಯುತ್ತಿಲ್ಲ. ಅಕ್ಕಿ ದೊರೆತ ತಕ್ಷಣದಿಂದಲೇ ಅನ್ನಭಾಗ್ಯ ಜಾರಿಗೆ ತರಲಾಗುವುದು ಎಂದರು.
ನವದೆಹಲಿಗೆ ಭೇಟಿ ನೀಡಿದಾಗ ಎಫ್ಸಿಐನವರು ಅಕ್ಕಿ ನೀಡಲು ನಿರಾಕರಿಸಿರುವ ವಿಚಾರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಗಮನಕ್ಕೆ ತಂದಿದ್ದೇನೆ. ಕೇಂದ್ರದಿಂದ ಬಡವರ ಮೇಲೆ ಗದಾ ಪ್ರಹಾರ ಮಾಡಲಾಗಿದೆ. ಹಾಗಾದರೆ ಅನ್ನಭಾಗ್ಯವನ್ನು ನಾವು ಘೋಷಣೆ ಮಾಡುವ ಮುನ್ನ ಯಡಿಯೂರಪ್ಪ, ಆರ್. ಅಶೋಕ್ ಹಾಗೂ ಬಸವರಾಜ ಬೊಮ್ಮಾಯಿ ಅವರನ್ನು ಕೇಳಿ ಘೋಷಣೆ ಮಾಡಬೇಕಿತ್ತೇ? ಎಂದು ಪ್ರಶ್ನಿಸಿದ್ದಾರೆ.
ಕೇಂದ್ರ ಸರ್ಕಾರ ಷಡ್ಯಂತ್ರ
ಅನ್ನಭಾಗ್ಯ ಕಾರ್ಯಕ್ರಮಕ್ಕೆ 5 ಕೆಜಿ ಅಕ್ಕಿ ನೀಡುತ್ತಿದ್ದೇವೆ. ಒಟ್ಟು 10 ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದೆವು. 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅಗತ್ಯವಿದೆ. ಅಷ್ಟು ಅಕ್ಕಿ ನಮಗೆ ದೊರೆಯುತ್ತಿಲ್ಲ. ಕೇಂದ್ರ ಸರ್ಕಾರದ ಅಧೀನದ ಎಫ್ಸಿಐ ಮೊದಲಿಗೆ ಅಕ್ಕಿ ನೀಡುವುದಾಗಿ ಒಪ್ಪಿ ನಂತರ ಕೊಡಲಾಗುವುದಿಲ್ಲ ಎಂದು ಪತ್ರ ಬರೆದಿದ್ದಾರೆ. ಅಕ್ಕಿಯ ದಾಸ್ತಾನು ಇದ್ದರೂ ಕೊಡುತ್ತಿಲ್ಲ. ಈ ಬಗ್ಗೆ ಆಹಾರ ಇಲಾಖೆ ಮೂಲಕ ಹೇಳಿ ಬರೆಸಿದ್ದಾರೆ. ಇದು ಕೇಂದ್ರ ಸರ್ಕಾರದ ಷಡ್ಯಂತ್ರ ಎಂದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ