newsfirstkannada.com

‘ನಾನೊಬ್ಬ ಸ್ಟ್ರಾಂಗ್ ಸಿಎಂ, ನಿಮ್ಮ ಹಾಗೆ ವೀಕ್ ಪಿಎಂ ಅಲ್ಲ’ – ಮೋದಿ ವಿರುದ್ಧ ಸಿದ್ದರಾಮಯ್ಯ ಸಮರ

Share :

Published March 19, 2024 at 10:22pm

    ಬಂಡುಕೋರ ನಾಯಕ ಈಶ್ವರಪ್ಪ ವಿರುದ್ಧ ಕ್ರಮಕೈಗೊಳ್ಳದ ‘ವೀಕ್ ಪಿಎಂ’

    ಸೂಪರ್​ ಇಲ್ಲ, ಶ್ಯಾಡೋನೂ ಇಲ್ಲ, ಇರುವುದು ಒಬ್ಬರೇ ‘ಸ್ಟ್ರಾಂಗ್ ಸಿಎಂ‘

    ಯಡಿಯೂರಪ್ಪನವರ ಕಾಲಿಗೆ ಬಿದ್ದು ಮತ್ತೆ ಪಕ್ಷಕ್ಕೆ ಸೇರಿಸಿಕೊಂಡಂತವರು

ಬೆಂಗಳೂರು: ‘ಲೋಕ’ ಸಮರ ರಂಗೇರಿದ್ದು ರಾಜಕೀಯ ನಾಯಕರು ಪ್ರಬಲ ಮಾತಿನ ಆಯುಧ ಪ್ರಯೋಗಿಸುತ್ತಿದ್ದಾರೆ. ಸದ್ಯ ಸಿಎಂ ಸಿದ್ದರಾಮಯ್ಯನವರು ನಾನು ಸ್ಟ್ರಾಂಗ್ ಸಿಎಂ, ನೀವು ವೀಕ್​ ಪಿಎಂ ಎಂದು ಪ್ರಧಾನಿ ಮೋದಿಯವರ ವಿರುದ್ಧ ಕಿಡಿ ಕಾರಿದ್ದಾರೆ.

ಈ ಸಂಬಂಧ ಸರಣಿ ಟ್ವಿಟ್​ಗಳನ್ನು ಮಾಡಿರುವ ಸಿಎಂ ಸಿದ್ದರಾಮಯ್ಯನವರು, ಬಂಡುಕೋರ ನಾಯಕ ಕೆಎಸ್ ಈಶ್ವರಪ್ಪ ವಿರುದ್ಧ ಇದುವರೆಗೂ ಕ್ರಮಕೈಗೊಂಡಿಲ್ಲ. ಶಿವಮೊಗ್ಗದಲ್ಲಿ ಪಕ್ಷದ ಪ್ರಚಾರ ಸಭೆ ನಡೆಸುತ್ತಿದ್ದಾಗ ಈಶ್ವರಪ್ಪ ಕೂಗಳತೆ ದೂರದ ತಮ್ಮ ಮನೆಯಲ್ಲಿದ್ದರೂ ಕ್ಯಾರೇ ಅನ್ನದೆ ಸಭೆಗೆ ಗೈರು ಹಾಜರಾಗಿದ್ದರು. ಇಷ್ಟು ಮಾತ್ರವಲ್ಲ ನಿರಂತರವಾಗಿ ಬಿಜೆಪಿ ನಾಯಕತ್ವದ ವಿರುದ್ಧ ಕಿಡಿಕಾರುತ್ತಿದ್ದರು. ಅವರ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ವೀಕ್ ಪಿಎಂ ಅಲ್ಲದೆ ಮತ್ತೇನು ಎಂದು ಪ್ರಶ್ನೆ ಮಾಡಿದ್ದಾರೆ.

ನಿಮ್ಮ ಹಾಗೆ ನಾನು ವೀಕ್ ಪಿಎಂ ಅಲ್ಲ

ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದಲ್ಲಿ ಗೇಲಿ ಮಾಡಿದ್ದೀರಿ. ನಮ್ಮಲ್ಲಿ ಸೂಪರ್​ ಇಲ್ಲ, ಶ್ಯಾಡೋನೂ ಇಲ್ಲ, ಇರುವುದು ಒಬ್ಬರೇ ಸಿಎಂ ಅದು ‘ಸ್ಟ್ರಾಂಗ್ ಸಿಎಂ, ನಿಮ್ಮ ಹಾಗೆ ನಾನು ವೀಕ್ ಪಿಎಂ ಅಲ್ಲ ಎಂದು ಜರಿದಿದ್ದಾರೆ.

ಮೋದಿಯವರೇ ನಿಮ್ಮನ್ನು ನೀವು 56 ಇಂಚಿನ ಎದೆಯುಳ್ಳವನು ಎಂದು ಬಣ್ಣಿಸಿಕೊಳ್ಳುತ್ತೀರಿ. ನಿಮ್ಮನ್ನು ವಿಶ್ವಗುರು ಎಂದು ಕೊಂಡಾಡುತ್ತಾರೆ. ಆದರೆ ನೀವೊಬ್ಬ ವೀಕ್ ಪ್ರಧಾನಿ ಎನ್ನುವುದು ಮತ್ತೆ ಮತ್ತೆ ತೋರಿಸುತ್ತಿದ್ದೀರಿ. ಯಡಿಯೂರಪ್ಪನವರು ಒಂದು ಕಾಲದಲ್ಲಿ ನಿಮ್ಮ ನಾಯಕತ್ವದ ವಿರುದ್ಧ ಬಂಡಾಯವೆದ್ದು ನಿಮ್ಮನ್ನು ಹೀನಾಯವಾಗಿ ನಿಂದಿಸಿದವರು. ಅಂತಹವರ ಕಾಲಿಗೆ ಬಿದ್ದು ಮತ್ತೆ ಪಕ್ಷಕ್ಕೆ ತಂದು ಮೆರವಣಿಗೆ ಮಾಡುವ ಮೂಲಕ ನೀವೊಬ್ಬ ವೀಕ್ ಎಂದು ತೋರಿಸಿಕೊಟ್ಟವರು.

ನಿಮ್ಮ ನಾಯಕತ್ವದ ವಿರುದ್ಧ ಅರ್ಧ ಡಜನ್ ನಾಯಕರು ಬಂಡಾಯ

ಸದ್ಯ ಎಲೆಕ್ಷನ್​ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ನಿಮ್ಮ ನಾಯಕತ್ವದ ವಿರುದ್ಧ ಅರ್ಧ ಡಜನ್ ನಾಯಕರು ಬಂಡೆದಿದ್ದಾರೆ. ಟಿಕೆಟ್ ಪಡೆಯಲು ಅಸಮರ್ಥರಾದ ನಿಮ್ಮ ಪಕ್ಷದ ನಾಯಕರು ಹಾದಿ ಬೀದಿಲಿ ಹೊಡೆದಾಡಿಕೊಳ್ಳುತ್ತಿದ್ದಾರೆ. ಪರಸ್ಪರ ಕೆಸರೆರಚಾಟ ನಡೆಸುತ್ತಿದ್ದಾರೆ. ನಿಮ್ಮ ಯಾವ ಮನವಿಗೂ ಅವರು ಕಿವಿಕೊಟ್ಟಿಲ್ಲ. ಇವರಲ್ಲಿ ಕೆಲವರು ನಮ್ಮನ್ನೂ ಸಂಪರ್ಕಿಸುತ್ತಿದ್ದಾರೆ. ನಿಮ್ಮ ಪಕ್ಷದಲ್ಲಿ ಇದೆಂತಹ ಅಶಿಸ್ತಿನ ತಾಂಡವ. ಇದಕ್ಕೆಲ್ಲ ಕಾರಣ ನೀವೊಬ್ಬರು ಎಂದು ಹೇಳಿದ್ದಾರೆ.

ನಮ್ಮದು ಆಂತರಿಕ ಪ್ರಜಾಪ್ರಭುತ್ವ ಇರುವ ಪಕ್ಷ, ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಾದವರು ಹಲವರಿದ್ದಾರೆ. ನಿಮ್ಮ ಪಕ್ಷದ ಕತೆ ಏನು?. ವಿಶ್ವದಲ್ಲಿ ಅತ್ಯಂತ ಹೆಚ್ಚು ಸದಸ್ಯರನ್ನು ಹೊಂದಿದ್ದೇವೆ ಎಂದು ಕೊಚ್ಚಿಕೊಳ್ಳುವ ನಿಮ್ಮ ಪಕ್ಷದಲ್ಲಿ ಪಿಎಂ ಆಗುವ ಅರ್ಹತೆ ಇರುವ ಒಬ್ಬ ನಾಯಕನೂ ಇಲ್ಲವಲ್ಲಾ? ಅಂತಹ ನಾಯಕರೇ ಇಲ್ವಾ? ಕುರ್ಚಿ ಕಳೆದುಕೊಳ್ಳುವ ಭಯದಿಂದ ಅಂತಹ ನಾಯಕರನ್ನು ಬೆಳೆಯಲು ನೀವೇ ಬಿಡುತ್ತಿಲ್ವಾ ಎಂದು ಪ್ರಶ್ನೆ ಮಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ನಾನೊಬ್ಬ ಸ್ಟ್ರಾಂಗ್ ಸಿಎಂ, ನಿಮ್ಮ ಹಾಗೆ ವೀಕ್ ಪಿಎಂ ಅಲ್ಲ’ – ಮೋದಿ ವಿರುದ್ಧ ಸಿದ್ದರಾಮಯ್ಯ ಸಮರ

https://newsfirstlive.com/wp-content/uploads/2023/11/MODI_SIDDU.jpg

Load More